ಜೈಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ: LPG ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ, ಸರಣಿ ಸಿಲಿಂಡರ್ ಸ್ಫೋಟ

Date:

spot_img

ಜೈಪುರ (ರಾಜಸ್ಥಾನ): ಎಲ್‌ಪಿಜಿ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಸರಣಿ ಸಿಲಿಂಡರ್‌ ಸ್ಫೋಟಗೊಂಡು ಟ್ರಕ್‌ಗೆ ಬೆಂಕಿ ಹೊತ್ತಿಕೊಂಡ ಭೀಕರ ಘಟನೆ ಜೈಪುರ-ಅಜ್ಮೀರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

ಪೊಲೀಸರ ಮಾಹಿತಿ ಪ್ರಕಾರ, ಮಿತಿಮೀರಿದ ವೇಗದಲ್ಲಿ ಬಂದ ಟ್ಯಾಂಕರ್, ಎಲ್‌ಪಿಜಿ ಟ್ರಕ್‌ಗೆ ಡಿಕ್ಕಿ ಹೊಡೆದ ಬಳಿಕ ಟ್ರಕ್‌ನೊಳಗಿದ್ದ ಸಿಲಿಂಡರ್‌ಗಳು ಒಂದರ ನಂತರ ಒಂದು ಸ್ಫೋಟಗೊಂಡಿವೆ. ಸ್ಫೋಟದ ರಭಸಕ್ಕೆ ಕೆಲವು ಸಿಲಿಂಡರ್‌ಗಳು ದೂರಕ್ಕೆ ಎಸೆಯಲ್ಪಟ್ಟಿದ್ದು, ಸ್ಥಳದಲ್ಲಿ ಭಾರೀ ಪ್ರಮಾಣದಲ್ಲಿ ಬೆಂಕಿ ಮತ್ತು ಹೊಗೆ ಆವರಿಸಿತ್ತು.

ಗಾಯಾಳುಗಳ ವಿವರ ಮತ್ತು ಸರ್ಕಾರದ ಮಧ್ಯಪ್ರವೇಶ

ಘಟನೆಯಲ್ಲಿ ಟ್ಯಾಂಕರ್ ಚಾಲಕ ಸೇರಿದಂತೆ ಎರಡರಿಂದ ಮೂರು ಮಂದಿ ಗಾಯಗೊಂಡಿದ್ದಾರೆ ಎಂದು ಜೈಪುರ ಐಜಿ ರಾಹುಲ್ ಪ್ರಕಾಶ್ ತಿಳಿಸಿದ್ದಾರೆ. ಗಾಯಗೊಂಡವರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರ ಸೂಚನೆಯ ಮೇರೆಗೆ ಉಪಮುಖ್ಯಮಂತ್ರಿ ಪ್ರೇಮ್ ಚಂದ್ ಬೈರವ ಅವರು ಕೂಡಲೇ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ನಂದಿಸುವ ಕಾರ್ಯ ಭರದಿಂದ ಸಾಗಿದ್ದು, ಘಟನೆಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಉಪಮುಖ್ಯಮಂತ್ರಿಗಳು ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.