ಜೈಪುರದಲ್ಲಿ 2,000 ಕೋಟಿ ರೂ. ಸೈಬರ್ ವಂಚನೆ: ಕಿಂಗ್ ಪಿನ್ ಬಂಧನ

Date:

spot_img

ರಾಜಸ್ಥಾನ ಪೊಲೀಸರು ಮಂಗಳವಾರ 2,000 ಕೋಟಿಗೂ ಹೆಚ್ಚು ಮೊತ್ತದ ಸೈಬರ್ ವಂಚನೆ ನಡೆಸಿದ ತಂಡದ ಕಿಂಗ್‌ಪಿನ್‌ನನ್ನು ಶ್ರೀಗಂಗಾನಗರದಲ್ಲಿ ಬಂಧಿಸಿದ್ದಾರೆ. ಬಂಧಿತ ವ್ಯಕ್ತಿ ಅಜಯ್ ಆರ್ಯ ಅವರ ವಿರುದ್ಧ ದೇಶಾದ್ಯಂತ ಹಲವಾರು ಸೈಬರ್ ವಂಚನೆಯ ದೂರುಗಳು ದಾಖಲಾಗಿವೆ, ವಿಶೇಷವಾಗಿ ಕರ್ನಾಟಕದಲ್ಲಿ ಹೆಚ್ಚು ಸಂಖ್ಯೆಯಲ್ಲಿ ದೂರು ದಾಖಲಾಗಿದೆ.

ಗಂಗಾನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಯಾದವ್ ರವರು ಮಾತನಾಡಿ ಬಂಧಿತ ಆರೋಪಿಗಳು ಸಾವಿರಾರು ಜನರಿಗೆ ಸುಮಾರು 2,000 ಕೋಟಿ ರೂಪಾಯಿಗಳ ಸೈಬರ್ ವಂಚನೆ ಮಾಡಿದ್ದಾರೆ.ಕರ್ನಾಟಕದ ನಿವಾಸಿ ಕಾಂತಪ್ಪ ಬಾಬು ಚವ್ಹಾಣ್ ಅವರು ಮಂಗಳವಾರ ಪುರಾಣಿ ಅಬಾದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದರು.

ಪೊಲೀಸರು ಆರ್ಯನ ಮನೆ ಮೇಲೆ ದಾಳಿ ನಡೆಸಿದ್ದು, ಶೋಧದ ವೇಳೆ 10 ಲಕ್ಷ ರೂ. ನಗದು, ಮೂರು ಸಿಪಿಯುಗಳು, ಆರು ಮೊಬೈಲ್ ಫೋನ್‌ಗಳು, ಎಂಟು ಎಟಿಎಂ ಕಾರ್ಡ್‌ಗಳು ಮತ್ತು ಐಷಾರಾಮಿ ಕಾರು ಸೇರಿದಂತೆ ಹಲವಾರು ದಾಖಲೆಗಳನ್ನು ಪತ್ತೆ ಮಾಡಿದರು. ಈ ಪ್ರಕರಣದಲ್ಲಿ ಅಜಯ್ ಆರ್ಯ, ದೀಪಕ್ ಆರ್ಯ, ಲಜಪತ್ ಆರ್ಯ, ಸೌರಭ್ ಚಾವ್ಹಾ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಆರೋಪಿಗಳು 2022 ರಲ್ಲಿ ಕರ್ನಾಟಕದ ವಿಜಯಪುರ ಜಿಲ್ಲೆಯಲ್ಲಿ ಟೆಕ್ಟಲ್ ಟೆಕ್ ಎಂಬ ಕಂಪನಿಯನ್ನು ತೆರೆಯುವ ಮೂಲಕ ಜನರಿಗೆ ಸೈಬರ್ ತರಬೇತಿ ನೀಡಲು ಪ್ರಾರಂಭಿಸಿದ್ದರು ಎಂದು ತಿಳಿದು ಬಂದಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.