
ಪದವು : ಪದವು ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಲಂಬಾಡಿಯಲ್ಲಿ ಜನನಿ ಮಿತ್ರ ಮಂಡಳಿ ವಾಂಟ್ರಾಯಿ (ರಿ.) ಪದವು ಇದರ ಆಶ್ರಯದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಪರಿಸರ ಸಂರಕ್ಷಣೆ ಮತ್ತು ಹಸಿರಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿದ್ಯಾರ್ಥಿಗಳ ಸಮ್ಮುಖದಲ್ಲಿ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಈ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಶ್ರೀ ಹುಕ್ರಪ್ಪ ಗೌಡ ಹಾಗೂ ಗಸ್ತು ಅರಣ್ಯ ಪಾಲಕರಾದ ಶ್ರೀ ಸುರೇಶ್ ಮುಖ್ಯ ಅತಿಥಿಗಳಾಗಿ ಆಗಮಿಸಿ, ವಿದ್ಯಾರ್ಥಿಗಳಿಗೆ ಗಿಡಗಳ ಮಹತ್ವ ಮತ್ತು ಪರಿಸರದ ಪ್ರಾಮುಖ್ಯತೆಯ ಕುರಿತು ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು, ಎಸ್.ಡಿ.ಎಂ.ಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಶಿಕ್ಷಕ ವೃಂದ ಉಪಸ್ಥಿತರಿದ್ದರು. ಜನನಿ ಮಿತ್ರ ಮಂಡಳಿ ಅಧ್ಯಕ್ಷರಾದ ಶ್ರೀ ದಿವಾಕರ ಎಂ. ಬಂಗೇರ ಸಭೆಯ ಎಲ್ಲರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಶ್ರೀ ಸದಾನಂದ ಯಾನೆ ಮೋಹನ್ ಕಾರ್ಯಕ್ರಮ ನಿರೂಪಣೆ ಮಾಡಿದರು ಮತ್ತು ಕಾರ್ಯದರ್ಶಿ ಶ್ರೀ ಪ್ರವೀಣ್ ಮೂಲ್ಯ ಧನ್ಯವಾದ ವ್ಯಕ್ತಪಡಿಸಿದರು.
ಈ ಕಾರ್ಯಕ್ರಮವು ಶಾಲಾ ಮಕ್ಕಳಲ್ಲಿ ಪರಿಸರ ಪ್ರೀತಿಯ ಬೀಜ ಬಿತ್ತುವಲ್ಲಿ ಪ್ರಮುಖ ಪಾತ್ರವಹಿಸಿತು.