ಜೇಸಿಐ ಕಾರ್ಕಳ- ಪದಗ್ರಹಣ ಸಮಾರಂಭ

Date:

spot_img

ಕಾರ್ಕಳ : ಜೇಸಿಐ ಕಾರ್ಕಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಜೇಸಿ ಇಂಟರ್ನ್ಯಾಷನಲ್ ಇಂಗ್ಲಿಷ್ ಮೀಡಿಯಂ ಸ್ಕೂಲ್ ಕಾರ್ಕಳ ಇಲ್ಲಿ ನಡೆಯಿತು.

ಅಧ್ಯಕ್ಷತೆಯನ್ನು ವಹಿಸಿದ್ದ ಘಟಕದ 2025ನೇ ಸಾಲಿನ ಅಧ್ಯಕ್ಷೆಯಾದ ಶ್ವೇತಾ ಎಸ್ ಜೈನ್ ತನ್ನ ಒಂದು ವರ್ಷದ ಸಾಧನೆ ಮತ್ತು ಕಾರ್ಯಕ್ರಮಗಳ ಸಂಕ್ಷಿಪ್ತ ವರದಿಯನ್ನು ಮಂಡಿಸಿ ಸಹಕರಿಸಿದ ಎಲ್ಲರಿಗೂ ಅಭಿನಂದನೆಗಳನ್ನು ಸಲ್ಲಿಸಿದರು.

2026ನೇ ಸಾಲಿನ ನೂತನ ಅಧ್ಯಕ್ಷರಾದ ಅವಿನಾಶ್ ಶೆಟ್ಟಿಯವರಿಗೆ ನಿಕಟ ಪೂರ್ವಾಧ್ಯಕ್ಷೆಯಾದ ಶ್ವೇತಾ ಎಸ್ ಜೈನ್ ಹಾಗೂ ನೂತನ ಸದಸ್ಯರಿಗೆ ಜೇಸಿ ವಲಯ 15ರ ವಲಯ ಅಧ್ಯಕ್ಷರಾದ ಸಂತೋಷ್ ಶೆಟ್ಟಿ ಪ್ರತಿಜ್ಞಾ ವಿಧಿ ಬೋಧಿಸಿ ಶುಭ ಹಾರೈಸಿದರು.

ಜೇಸಿ ಆಂಗ್ಲ ಮಾಧ್ಯಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಚಿತ್ತರಂಜನ್ ಶೆಟ್ಟಿ ಮಾತನಾಡಿ ನಿಕಟ ಪೂರ್ವ ಅಧ್ಯಕ್ಷರ ಕಾರ್ಯಕ್ರಮಗಳನ್ನು ಶ್ಲಾಘಿಸಿ ನೂತನ ಅಧ್ಯಕ್ಷರು ಇನ್ನೂ ಉತ್ತಮ ಕೆಲಸ ಕಾರ್ಯಗಳನ್ನು ಮಾಡುವಂತಾಗಲಿ ಎಂದು ಶುಭ ಹಾರೈಸಿದರು. ವಲಯ ಉಪಾಧ್ಯಕ್ಷರಾದ ಜಿತೇಶ್ ಪಿರೇರಾ, 2025ರ ಕಾರ್ಯದರ್ಶಿಯಾದ ಸುಶ್ಮಿತಾ ರಾವ್, ಲೇಡಿ ಜೇಸಿ ಸಂಯೋಜಕಿಯಾದ ಶಹಿನ್ ರಿಜ್ವಾನ್ ಖಾನ್, ಜೂನಿಯರ್ ಜೇಸಿ ಅಧ್ಯಕ್ಷೆಯಾದ ಅಭಿಜ್ಞಾ ಆರ್ ವರ್ಮ, ಪೂರ್ವ ಅಧ್ಯಕ್ಷರಾದ ಪ್ರಚಿತ್ ಕುಮಾರ್, 2026ನೇ ಸಾಲಿನ ಲೇಡಿ ಜೇಸಿ ಸಂಯೋಜಕಿಯಾದ ಪವಿತ್ರಾ ಶೆಟ್ಟಿ, ಜೂನಿಯರ್ ಜೇಸಿ ಅಧ್ಯಕ್ಷರಾದ ಆಸ್ತಿಕ್ ಕುಲಾಲ್ , ಕಾರ್ಯಕ್ರಮ ಸಂಯೋಜಕರಾದ ನಿತಿನ್ ಹೆಗ್ಡೆ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಪಿಯುಸಿಯಲ್ಲಿ ಉತ್ತಮ ಅಂಕ ಗಳಿಸಿದ ಇಬ್ಬರು ವಿದ್ಯಾರ್ಥಿಗಳನ್ನು ತಲಾ ರೂ.10,000/-ನಗದು ಪುರಸ್ಕಾರ ನೀಡಿ ಗೌರವಿಸಲಾಯಿತು.

ಶಿಕ್ಷಕರಾದ ಹರಿಶ್ಚಂದ್ರ ಆಚಾರ್ ಸ್ವಾಗತಿಸಿದರು. ಜೇಸಿ ವಾಣಿ ರೇವತಿ ಶೆಟ್ಟಿ ವಾಚಿಸಿದರು ಹಾಗೂ ಕಾರ್ಯದರ್ಶಿಯಾದ ಸುಶಾಂತ್ ಶೆಟ್ಟಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.