ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯ ಜೀವ ಉಳಿಸಿದ ಸೇನಾ ವೈದ್ಯ!

Date:

spot_img

ಲಕ್ನೋ: ಉತ್ತರ ಪ್ರದೇಶದ ಝಾನ್ಸಿ ರೈಲ್ವೆ ನಿಲ್ದಾಣದಲ್ಲಿ ಶನಿವಾರ ಹೆರಿಗೆ ನೋವಿನಿಂದ ಒದ್ದಾಡುತ್ತಿದ್ದ ಗರ್ಭಿಣಿಯೊಬ್ಬರಿಗೆ ಸೇನಾಪಡೆಯ ವೈದ್ಯರೊಬ್ಬರು ಹೈದರಾಬಾದ್ ರೈಲಿಗಾಗಿ ಕಾಯುತ್ತಿದ್ದಾಗ, ಸಮಯಕ್ಕೆ ಸರಿಯಾಗಿ ನೆರವಿಗೆ ಧಾವಿಸಿ, ಸ್ಥಳದಲ್ಲೇ ಹೆರಿಗೆ ಮಾಡಿಸಿದ ಸಿನಿಮೀಯ ಘಟನೆ ನಡೆದಿದೆ.

‘ಪನ್ವೇಲ್-ಗೋರಖ್‌ಪುರ ಎಕ್ಸ್‌ಪ್ರೆಸ್‌’ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ತೀವ್ರ ಹೆರಿಗೆ ನೋವು ಕಾಣಿಸಿಕೊಂಡಿದೆ. ನೋವು ತಾಳಲಾರದೆ ಅವರು ಝಾನ್ಸಿ ನಿಲ್ದಾಣದಲ್ಲಿ ರೈಲಿನಿಂದ ಇಳಿದಿದ್ದಾರೆ. ಅವರ ಪರಿಸ್ಥಿತಿ ಗಮನಿಸಿದ ರೈಲ್ವೆ ಮಹಿಳಾ ಸಿಬ್ಬಂದಿ ಕೂಡಲೇ ಸಹಾಯಕ್ಕೆ ಧಾವಿಸಿ, ಅವರನ್ನು ವೀಲ್‌ಚೇರ್‌ನಲ್ಲಿ ಕರೆದೊಯ್ಯುತ್ತಿದ್ದರು.

ಅದೇ ಸಮಯದಲ್ಲಿ, ಹೈದರಾಬಾದ್ ರೈಲಿಗಾಗಿ ಕಾಯುತ್ತಿದ್ದ ಸೇನಾ ವೈದ್ಯ ಮೇಜರ್ ಡಾ. ರೋಹಿತ್ ಬಚ್‌ವಾಲಾ ಅವರು ಈ ದೃಶ್ಯವನ್ನು ಗಮನಿಸಿದ್ದಾರೆ. ತುರ್ತು ಪರಿಸ್ಥಿತಿಯನ್ನು ಅರಿತ ಅವರು ತಕ್ಷಣವೇ ಗರ್ಭಿಣಿಯ ನೆರವಿಗೆ ಧಾವಿಸಿದ್ದಾರೆ. ಸ್ಥಳದಲ್ಲಿ ಲಭ್ಯವಿದ್ದ ಪುಟ್ಟ ಚಾಕು ಮತ್ತು ಹೇರ್‌ಪಿನ್‌ನಂತಹ ವಸ್ತುಗಳನ್ನು ಬಳಸಿ, ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿ ತಾಯಿ ಮತ್ತು ಮಗುವಿನ ಜೀವವನ್ನು ಉಳಿಸಿದ್ದಾರೆ. ಹೆರಿಗೆಯ ನಂತರ ತಾಯಿ ಮತ್ತು ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಖರ್ಗೆ ವಾಗ್ದಾಳಿ: ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ತೀವ್ರ ಆಕ್ರೋಶ

ನೀಟ್ ಅಕ್ರಮ ಹಾಗೂ ಮಂದಿರದ ಟ್ರಸ್ಟ್ ವಿಚಾರವಾಗಿ ಪ್ರಧಾನಿ ಮೋದಿ ವಿರುದ್ಧ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಿಎಂ ಡಿ.ಕೆ. ಶಿವಕುಮಾರ್

ವಿದ್ಯುತ್ ಯೋಜನೆಗಳ ಅನುಷ್ಠಾನಕ್ಕೆ ಸರ್ಕಾರ ಬದ್ಧವಾಗಿದೆ. ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಹಾಗೂ ಕೆಪಿಸಿಎಲ್ ಸಂಸ್ಥಾಪನಾ ದಿನದ ಪೂರ್ಣ ಮಾಹಿತಿ ಇಲ್ಲಿದೆ ಓದಿ.