spot_img

ಜ್ಞಾನಭಾರತ್-ಬಾಲಸಂಸ್ಕಾರ ಮಕ್ಕಳಿಂದ ಹಿರಿಯಡ್ಕ ದೇಗುಲ ದರ್ಶನ

Date:

ಹಿರಿಯಡ್ಕ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ನಡೆಯುವ ಜ್ಞಾನಭಾರತ್ – ಬಾಲ ಸಂಸ್ಕಾರ ಸಾಪ್ತಾಹಿಕ ಸರಣಿಯಲ್ಲಿ ವಿಹಾರಾರ್ಥವಾಗಿ ಮಕ್ಕಳು ಹಿರಿಯಡ್ಕದ ಮಹತೋಭಾರ ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ವಿಹಾರದ ಮುಖ್ಯ ಅತಿಥಿಯಾಗಿ ಆಗಮಿಸಿದ ರಂಗಕರ್ಮಿ, ಸಾಹಿತಿ ಶ್ರೀಮತಿ ಪೂರ್ಣಿಮಾ ಸುರೇಶ್ ಸ್ಥಳ ಸಾನಿಧ್ಯದ ಪರಿಚಯ ಮಾಡಿಕೊಟ್ಟರು. ನಮ್ಮ ಊರಿನ ಕ್ಷೇತ್ರದ ಮಹಿಮೆಗಳನ್ನು, ಹಿರಿಯರು ಆಚರಿಸಿಕೊಂಡು ಬರುತ್ತಿರುವ ಧಾರ್ಮಿಕ, ದೈವಿಕ ಹಾಗೂ ಸಾಂಸ್ಕೃತಿಕ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗುವ ಜವಾಬ್ದಾರಿ ನಮ್ಮ ಮೇಲಿದೆ ಎಂದರು.
ಮಕ್ಕಳು ದೇವಸ್ಥಾನದ ಮುಂಭಾಗದಲ್ಲಿರುವ ಭೂತರಾಜ ಕಂಬ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನ, ಬ್ರಹ್ಮಲಿಂಗ ದೇವರಗುಡಿ, ಬೊಬ್ಬರ್ಯ ಕಂಬ, ಆದಿ ನಾಗಬನ, ಆದಿ ಬ್ರಹ್ಮಸ್ಥಾನ, ವ್ಯಾಘ್ರ ಚಾಮುಂಡಿ ಗುಡಿ, ಪರಿವಾರ ಗಣಶಾಲೆ (ಆಲಡೆ), ಗುರುಚಿ ಮರ, ಅಡಕತ್ತಾಯ, ಕ್ಷೇತ್ರಪಾಲ, ಪುಷ್ಕರಣಿ, ಶೂಲಪಾಣಿ ಮತ್ತು ದಂಡಪಾಣಿ ಗುಡಿ, ಮಾಲಿ-ಸುಮಾಲಿ ದ್ವಾರಪಾಲಕ ಮಂಟಪಗಳನ್ನು ದರ್ಶನ ಪಡೆಯುವುದರ ಜೊತೆಗೆ ದೇಗುಲದ ಒಳಾಂಗಣ, ಹೊರಾಂಗಣ ಮತ್ತು ಮೇಲ್ಛಾವಣಿಯ ದಾರುಶಿಲ್ಪಗಳನ್ನು ಕಂಡು ರೋಮಾಂಚನಗೊಂಡರು.

  ಈ ಸಂದರ್ಭ ವೃಂದದ ಉಪಾಧ್ಯಕ್ಷರಾದ ಡಾ.ದಯಾನಂದ ಬಾಯಾರ್, ಕಾರ್ಯದರ್ಶಿ ಶ್ರೀಮತಿ ಸಂಗೀತಾ ಕುಲಾಲ್, ಸದಸ್ಯರಾದ ಶ್ರೀಮತಿ ಜ್ಯೋತಿ ಪದ್ಮನಾಭ ಭಂಡಿ, ಶ್ರೀಮತಿ ಗಾಯತ್ರಿ ನಾಗೇಶ್, ಶ್ರೀಮತಿ ಚೇತನಾ ಸಂದೀಪ್, ಶ್ರೀ ಸಂತೋಷ್, ಶ್ರೀ ಸಂತೋಷ್ ನೆಲ್ಲಿಕಾರು, ಶ್ರೀಮತಿ ಶೋಭಾ, ಶ್ರೀಮತಿ ಪ್ರಸಾದಿನಿ ಹಾಗೂ ಶ್ರೀ ಚಂದ್ರಶೇಖರ್ ಪೂಜಾರಿ ಉಪಸ್ಥಿತರಿದ್ದರು.   
share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.