
ಗಣಿತನಗರ : ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶ್ರೀ ಮಹಾಗಣಪತಿ ದೇವಸ್ಥಾನ ಹಾಗೂ ಅಜೆಕಾರ್ ಪದಗೋಪಾಲ್ ಎಜ್ಯುಕೇಶನ್ ಟ್ರಸ್ಟ್‌ನ ಸಹಯೋಗದಲ್ಲಿ ತಿಂಗಳ ಸರಣಿಯ ಮೌಲಿಕ ಕಾರ್ಯಕ್ರಮ ಮೌಲ್ಯಸುಧಾ ಮಾಲಿಕೆ-40, ಸಪ್ಟೆಂಬರ್ 14ರ ರವಿವಾರದಂದು ಸಂಜೆ 06.15ಕ್ಕೆ ನಡೆಯಲಿದೆ. ಸಂಪನ್ಮೂಲ ವ್ಯಕ್ತಿಯಾಗಿ ಸರಕಾರಿ ಪದವಿ ಪೂರ್ವ ಕಾಲೇಜು, ಸದಲಗ, ಚಿಕ್ಕೋಡಿಯ ಉಪನ್ಯಾಸಕ ಹಾಗೂ ಖ್ಯಾತವಾಗ್ಮಿ ಶ್ರೀ ವೀರೇಶ್ ಗದ್ದಿಗೆಪ್ಪಗೌಡ ಪಾಟೀಲ್ “ಸಕಾರಾತ್ಮಕ ಆಲೋಚನೆ ಸಾಧನೆಗೆ ಪ್ರೇರಣೆ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ. ಆಸಕ್ತರು ಭಾಗವಹಿಸಬಹುದೆಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ.