ಹೃದಯಾಘಾತದಿಂದ ಯುವ ಪತ್ರಕರ್ತ ಶ್ರೇಯಸ್ ಆರ್ ನಿಧನ

Date:

spot_img

ಬೆಂಗಳೂರು: ನೆಟ್‌ವರ್ಕ್ 18 ಸಂಸ್ಥೆಯ ಕನ್ನಡ ಯೂಟ್ಯೂಬ್ ವಿಭಾಗದ ಮುಖ್ಯಸ್ಥರಾಗಿದ್ದ ಯುವ ಪತ್ರಕರ್ತ ಶ್ರೇಯಸ್ ಆರ್ (41) ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ನಿನ್ನೆ (ಸೋಮವಾರ) ರಾತ್ರಿ 10 ಗಂಟೆ ಸುಮಾರಿಗೆ ಚಿಕಿತ್ಸೆ ಫಲಿಸದೆ ಶ್ರೇಯಸ್ ಮೃತಪಟ್ಟಿದ್ದಾರೆ.

ಶ್ರೇಯಸ್ ಅವರು ಪತ್ನಿ ಹಾಗೂ 9 ವರ್ಷದ ಮಗುವನ್ನು ಅಗಲಿದ್ದಾರೆ. ಅವರ ನಿಧನಕ್ಕೆ ನೆಟ್‌ವರ್ಕ್ 18 ಹಾಗೂ ನ್ಯೂಸ್ 18 ಕನ್ನಡ ಬಳಗ ತೀವ್ರ ಕಂಬನಿ ಮಿಡಿದಿದೆ.

ತಂದೆಯ ನಿಧನದ ಬೆನ್ನಲ್ಲೇ ದುರಂತ
ಶ್ರೇಯಸ್ ಆರ್ ಅವರ ತಂದೆ ರಘುರಾಂ ಅವರು ಸಹ ಇದೇ ವರ್ಷ ಜುಲೈ 14ರಂದು ಅಪಘಾತವೊಂದರಲ್ಲಿ ತೀವ್ರವಾಗಿ ಗಾಯಗೊಂಡು ನಿಧನರಾಗಿದ್ದರು. ತಂದೆಯ ನಿಧನದ ದುಃಖದಿಂದ ಚೇತರಿಸಿಕೊಳ್ಳುವ ಮುನ್ನವೇ ಶ್ರೇಯಸ್ ಆರ್ ಅವರು ನಿಧನರಾಗಿರುವುದು ಕುಟುಂಬ ಮತ್ತು ಮಾಧ್ಯಮ ವಲಯಕ್ಕೆ ಆಘಾತ ತಂದಿದೆ.

ಇದಲ್ಲದೆ, ಶ್ರೇಯಸ್ ಆರ್ ಅವರು ಕನ್ನಡದ ದಿವಂಗತ ನಟ ನವೀನ್ ಮಯೂರ್ (‘ಸ್ಪರ್ಶ’ ಖ್ಯಾತಿ) ಅವರ ಸಹೋದರ ಆಗಿದ್ದಾರೆ. ನವೀನ್ ಮಯೂರ್ ಅವರು 2010ರಲ್ಲಿ ಜಾಂಡೀಸ್ ಕಾಯಿಲೆಯಿಂದ ಬಳಲಿ ನಿಧನರಾಗಿದ್ದರು.

ಮಾಧ್ಯಮ ಅಕಾಡೆಮಿ ಫೆಲೋಶಿಪ್‌ಗೆ ಆಯ್ಕೆ
ಶ್ರೇಯಸ್ ಆರ್ ಅವರು ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಫೆಲೋಶಿಪ್ ಯೋಜನೆಗೆ ಆಯ್ಕೆಯಾಗಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ