ಮುದ್ದೇಬಿಹಾಳದಲ್ಲಿ ನ್ಯಾಯಾಧೀಶರ ಮನೆಗೆ ಕನ್ನ, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Date:

spot_img

ಮುದ್ದೇಬಿಹಾಳ : ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದಲ್ಲಿರುವ 5ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಧೀಶರ ಮನೆಗೆ ಕಳ್ಳರು ಕನ್ನ ಹಾಕಿದ್ದು, ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದನ್ನು ದೋಚಿದ ಘಟನೆ ಸೋಮವಾರ ಬೆಳಕಿಗೆ ಬಂದಿದೆ.

ನ್ಯಾಯಾಧೀಶ ಸಚಿನ್ ಕೌಶಿಕ್ ಅವರು ಶನಿವಾರ ಮತ್ತು ಭಾನುವಾರದ ರಜೆಯ ಕಾರಣ ಕುಟುಂಬ ಸಮೇತ ಊರಿಗೆ ತೆರಳಿದ್ದ ಸಂದರ್ಭದಲ್ಲಿ ಕಳ್ಳರು ಕೃತ್ಯ ಎಸಗಿದ್ದಾರೆ. ನ್ಯಾಯಾಧೀಶರ ಮನೆಗೆ ಹಾಕಿದ್ದ ಬೀಗ ಮುರಿದು ಒಳನುಗ್ಗಿದ ಕಳ್ಳರು, ಮನೆಯಲ್ಲಿದ್ದ ಟ್ರೇಜರಿ, ದೇವರ ಕೋಣೆ ಹಾಗೂ ಬಟ್ಟೆಗಳನ್ನು ಚೆಲ್ಲಾಪಿಲ್ಲಿ ಮಾಡಿ ದರೋಡೆ ನಡೆಸಿದ್ದಾರೆ.

ಮನೆಯ ಬಾಗಿಲು ತೆರೆದಿರುವುದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದಾಗ ಘಟನೆ ಬಹಿರಂಗಗೊಂಡಿದೆ. ವಿಷಯದ ಗಂಭೀರತೆ ಅರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿಎಸ್‌ಪಿ ಬಲ್ಲಪ್ಪ ನಂದಗಾಂವಿ ಸೇರಿದಂತೆ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನ್ಯಾಯಾಧೀಶರು ವಾಪಸ್ ಬಂದ ನಂತರ, ಕಳವಾಗಿರುವ ವಸ್ತುಗಳ ನಿಖರ ಮಾಹಿತಿ ಲಭ್ಯವಾದ ಬಳಿಕ ಪ್ರಕರಣ ದಾಖಲಾಗಲಿದೆ.

ಸ್ಥಳೀಯರ ಆಕ್ರೋಶ

ಈ ಬಡಾವಣೆ ಶಾಸಕರು ಮತ್ತು ಉನ್ನತ ಅಧಿಕಾರಿಗಳು ವಾಸವಾಗಿರುವ ಪ್ರದೇಶವಾಗಿದ್ದರೂ, ಇಲ್ಲಿ ಸರಿಯಾದ ಬೀದಿ ದೀಪಗಳಿಲ್ಲ. ಸಿಸಿಟಿವಿ ಕ್ಯಾಮೆರಾಗಳು ಕೂಡ ನಿಷ್ಕ್ರಿಯವಾಗಿವೆ. ಪೊಲೀಸರು ಗಸ್ತು ತಿರುಗುತ್ತಿಲ್ಲ ಎಂದು ಆರೋಪಿಸಿ ಸ್ಥಳೀಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ನಿರ್ಲಕ್ಷ್ಯವೇ ಈ ಕಳ್ಳತನಕ್ಕೆ ಕಾರಣ ಎಂದು ಅವರು ದೂರಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ