ಕೆ.ಎಂ.ಇ.ಎಸ್‌ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ ಅಧಿಕಾರ ಸ್ವೀಕಾರ

Date:

spot_img

ಕಾರ್ಕಳದ ಪ್ರತಿಷ್ಠಿತ ವಿದ್ಯಾಸಂಸ್ಥೆಯಾದ ಕೆ.ಎಂ.ಇ.ಎಸ್ ನ ಪ್ರಾಂಶುಪಾಲರಾಗಿ ಕೆ.ಬಾಲಕೃಷ್ಣರಾವ್‌ರವರು ದಿನಾಂಕ:27/05/2025ರಂದು ಅಧಿಕಾರ ಸ್ವೀಕರಿಸಿರುತ್ತಾರೆ. ಶ್ರೀಯುತರು ಆಂಗ್ಲಭಾಷೆ ಹಾಗೂ ಗಣಿತ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಪಡೆದಿದ್ದು, ನಲವತ್ತು ವರ್ಷಗಳ ದೀರ್ಘಕಾಲ ವಿಜ್ಞಾನ ಶಿಕ್ಷಕರಾಗಿ, ಆಂಗ್ಲಭಾಷಾ ಮತ್ತು ಗಣಿತ ಉಪನ್ಯಾಸಕರಾಗಿ ಶೈಕ್ಷಣಿಕ ವಿಭಾಗದಲ್ಲಿ ಸೇವೆ ಸಲ್ಲಿಸಿದ್ದು, ಬೇರೆ ಬೇರೆ ಕಾಲೇಜುಗಳಲ್ಲಿ ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿರುತ್ತಾರೆ. ಎನ್.ಸಿ.ಸಿ ನೇವಲ್‌ ವಿಂಗ್ ಕಮಿಶನ್ಸ್ ಆಫೀಸರಾಗಿ ಹದಿನೈದು ವರ್ಷಗಳ ಸೇವೆ ಸಲ್ಲಿಸಿದ ಇವರು ಕೊಚ್ಚಿನ್ ನೇವಲ್‌ಸ್, ವಿಶಾಖಪಟ್ಟಣ ನೇವಲ್ ಬೇಸ್‌ಗಳಲ್ಲಿ ಎನ್.ಸಿ.ಸಿ ತರಬೇತಿಗಳನ್ನು ಪಡೆದಿರುತ್ತಾರೆ. ಉತ್ತರ ಭಾರತದ ಮಸ್ಸೂರಿ, ಗೋವಾ ಇತ್ಯಾದಿ ಸ್ಥಳಗಳಲ್ಲಿ ರಾಷ್ಟ್ರೀಯ ಟ್ರಕ್ಕಿಂಗ್ ಎಕ್ಸ್‌ಪೆಡಿಶನ್‌ನಲ್ಲಿ ಭಾಗವಹಿಸಿದ್ದು, ಬೆಂಗಳೂರಿನ ಸೋಮನ ಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ಭಾವೈಕ್ಯತಾ ಶಿಬಿರದಲ್ಲಿ ಭಾಗವಹಿಸಿರುತ್ತಾರೆ. ಶ್ರೀಯುತರು ಕನ್ನಡ, ಇಂಗ್ಲೀಷ್ ಭಾಷೆಗಳಲ್ಲಿ ಲೇಖನಗಳನ್ನು ಬರೆದಿರುತ್ತಾರೆ. ಆಕಾಶವಾಣಿ ಮಂಗಳೂರಿನಲ್ಲಿ ಕಥೆ, ಚಿಂತನ, ಪ್ರಬಂಧಗಳನ್ನು ಮಂಡಿಸಿ, ಸಾಹಿತ್ಯದಲ್ಲಿಯೂ ಅಭಿರುಚಿಯನ್ನು ಹೊಂದಿರುತ್ತಾರೆ. ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಿರುತ್ತಾರೆ. ಇವರು ಕಾರ್ಕಳ ಸಾಹಿತ್ಯ ಸಂಘ ಮತ್ತು ಅಖಿಲ ಭಾರತ ಸಾಹಿತ್ಯ ಪರಿಷದ್ ಕಾರ್ಕಳ ಇವುಗಳ ಸಕ್ರೀಯ ಸದಸ್ಯರಾಗಿರುತ್ತಾರೆ. ನಾಟಕ, ಯಕ್ಷಗಾನಗಳಲ್ಲಿ ಪಾತ್ರ ನಿರ್ವಹಿಸಿರುತ್ತಾರೆ. ಹಲವಾರು ಕನ್ನಡ ಸಾಹಿತ್ಯ ಕವಿಗೋಷ್ಠಿಗಳಲ್ಲಿ ಭಾಗವಹಿಸಿದ್ದು, ಕವನವಾಚನ ಮಾಡಿರುತ್ತಾರೆ. ಕಾರ್ಕಳ ಇಂಟರಾಕ್ಟ್ ಕ್ಲಬ್ ನ ಸಂಯೋಜಕರಾಗಿಯೂ, ಕಾರ್ಕಳ ಜೇಸೀಸ್ ಸಂಸ್ಥೆಯ ಸಕ್ರಿಯ ಸದಸ್ಯರಾಗಿಯೂ ಸೇವೆ ಸಲ್ಲಿಸಿರುತ್ತಾರೆ. ಶ್ರೀಯುತರು ಹಲವಾರು ಸಂಘ ಸಂಸ್ಥೆಗಳಿಂದ ಗೌರವ ಪುರಸ್ಕಾರಗಳನ್ನು ಪಡೆದಿರುತ್ತಾರೆ. ಇತ್ತೀಚಿಗೆ ಶ್ರೀಯುತರು ಬರೆದಿರುವ ಕನ್ನಡ ಕಾದಂಬರಿ ‘ಪಥ’ ಬಿಡುಗಡೆಯಾಗಿದೆ.

ಇವರು ಈ ವಿದ್ಯಾಸಂಸ್ಥೆಗೆ ಪ್ರಾಂಶುಪಾಲರಾಗಿ ನೇಮಕಗೊಂಡಿರುವುದಕ್ಕೆ ಸಂಸ್ಥೆಯ ಅಧ್ಯಕ್ಷರಾದ ಶ್ರೀ ಕೆ.ಎಸ್ ಇಮ್ಮಿಯಾಜ್ ಅಹಮ್ಮದ್‌ರವರು ಶ್ರೀಯುತರಿಗೆ ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಶಿಡ್ಲಘಟ್ಟ: ಖಾಸಗಿ ವಿಡಿಯೋ ಬೆದರಿಕೆ, ವಿವಾಹಿತೆ ಮೇಲೆ ದೌರ್ಜನ್ಯ ಆರೋಪ

ಶಿಡ್ಲಘಟ್ಟದಲ್ಲಿ ವಿವಾಹಿತೆಯ ಮೇಲೆ ಲೈಂಗಿಕ ದೌರ್ಜನ್ಯ, ಖಾಸಗಿ ವಿಡಿಯೋ ಮೂಲಕ ಬೆದರಿಕೆ ಹಾಗೂ ಹಣ-ಚಿನ್ನ ವಂಚನೆ ಆರೋಪ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ರಂಗಾಯಣ ರಘು 400ನೇ ಸಿನಿಮಾ ಹೊಸ ಜೀವನ ಟೈಟಲ್ ಬಿಡುಗಡೆ

ನಟ ರಂಗಾಯಣ ರಘು ಅವರ 400ನೇ ಸಿನಿಮಾ ‘ಹೊಸ ಜೀವನ’ ಚಿತ್ರದ ಟೈಟಲ್ ಅನ್ನು ಡಾಲಿ ಧನಂಜಯ್ ಲಾಂಚ್ ಮಾಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು ಬೆಳ್ಳಂದೂರಿನಲ್ಲಿ ಪ್ರೇಯಸಿ ಹತ್ಯೆ; ಪ್ರಿಯಕರ ಬಂಧನ

ಬೆಂಗಳೂರು ಬೆಳ್ಳಂದೂರಿನಲ್ಲಿ ಯುವತಿಯನ್ನು ಪ್ರಿಯಕರ ಚಾಕುವಿನಿಂದ ಹತ್ಯೆ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನಿವೇದಿತಾ ಗೌಡ ವಿಚ್ಛೇದನ ಸ್ಪಷ್ಟನೆ: ಚಂದನ್ ಶೆಟ್ಟಿ ಡಿವೋರ್ಸ್ ಟ್ರೋಲ್

ಚಂದನ್ ಶೆಟ್ಟಿ ಜೊತೆಗಿನ ವಿಚ್ಛೇದನ ಹಾಗೂ ಸೋಷಿಯಲ್ ಮೀಡಿಯಾ ಟ್ರೋಲ್‌ಗಳ ಕುರಿತು ನಿವೇದಿತಾ ಗೌಡ ಬಿಚ್ಚಿಟ್ಟ ಸತ್ಯ ಇಲ್ಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ