ಕಲ್ಯಾಣಪುರ ತ್ರಿಶಾ ಕಾಲೇಜಿಗೆ,ದ್ವಿತೀಯ ಪಿ.ಯು ಪರೀಕ್ಷೆಯಲ್ಲಿ 100% ಫಲಿತಾಂಶ.

Date:

spot_img

ಉಡುಪಿ ಕಲ್ಯಾಣಪುರದಲ್ಲಿ ಕ್ರಿಯೇಟಿವ್ ಶೈಕ್ಷಣಿಕ ಸಹಭಾಗಿತ್ವದಲ್ಲಿ ಕಾರ್ಯಚರಿಸುತ್ತಿರುವ ತ್ರಿಶಾ ಪ. ಪೂ. ಕಾಲೇಜ್ ದ್ವಿತೀಯ ವರ್ಷದಲ್ಲೂ ಶೇಕಡ 100 ಫಲಿತಾಂಶದ ದಾಖಲಿಸಿದೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅಮೃತ ಬಸವರಾಜ್ ಬಣಕರ್ 592 ಅಂಕಗಳೊಂದಿಗೆ ರಾಜ್ಯಕ್ಕೆ 8ನೇ ಸ್ಥಾನ ಪಡೆದು ಸಂಸ್ಥೆಗೆ ಮತ್ತು ಹೆತ್ತವರಿಗೆ ಕೀರ್ತಿ ತಂದಿದ್ದಾರೆ. ಶ್ರೀರಕ್ಷಾ 589 ಅಂಕ, ಸುಶ್ಮಿತಾ 588 ಅಂಕ, ಆಕಾಶ್ ಶೇಥಿಯಾ 586 ಅಂಕ, ಶಶಾಂಕ್ ಎಸ್ ಭಟ್ 585 ಅಂಕಗಳನ್ನು ಗಳಿಸಿ ಅತ್ಯುನ್ನತ ದರ್ಜೆಯಲ್ಲಿ ತೇರ್ಗಡೆ ಹೊಂದಿದ್ದಾರೆ.

ಪರೀಕ್ಷೆಗೆ ಹಾಜರಾದ 162 ವಿದ್ಯಾರ್ಥಿಗಳಲ್ಲಿ 108 ಅತ್ಯುನ್ನತ ದರ್ಜೆ ಹಾಗೂ 54 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಪಡೆದಿದ್ದಾರೆ.

ತ್ರಿಷಾ ವಿದ್ಯಾ ಸಂಸ್ಥೆಯು ತನ್ನ ಪ್ರಾರಂಭದ ವರ್ಷದಿಂದಲೂ ಶೇ 100ರ ಫಲಿತಾಂಶದ ದಾಖಲಿಸಿದ್ದು, ಅತ್ಯುತ್ತಮ ಬೋಧಕ ಮತ್ತು ಬೋಧಕೇತರ ವೃಂದದವರೊಂದಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸಂಸ್ಥೆಯಾಗಿ ಬೆಳೆಯುತ್ತಿದೆ. ಸ್ಪರ್ಧಾತ್ಮಕ ಪರೀಕ್ಷೆಗಳಲ್ಲೂ ಉನ್ನತ ಶ್ರೇಣಿಯ ಫಲಿತಾಂಶ ದಾಖಲಿಸಿರುವ ಸಂಸ್ಥೆ ಉಡುಪಿ ಜಿಲ್ಲೆಯಲ್ಲಿ ಪ್ರಸಿದ್ಧವಾಗಿದೆ. ನೀಟ್, ಜೆ.ಇ.ಇ, ಸಿ.ಇ.ಟಿ ಯಂತಹ ಪರೀಕ್ಷೆಗಳಲ್ಲಿ ರಾಷ್ಟ್ರಮಟ್ಟದ ವಿವಿಧ ವೈದ್ಯಕೀಯ ಮತ್ತು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರವೇಶ ಪಡೆದುಕೊಂಡ ಹೆಗ್ಗಳಿಕೆ ತ್ರಿಶಾ ವಿದ್ಯಾ ಸಂಸ್ಥೆಗೆ ಇದೆ.

ವಿದ್ಯಾರ್ಥಿಗಳ ದಾಖಲೆಯ ಫಲಿತಾಂಶಕ್ಕೆ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕರು, ಉಪನ್ಯಾಸಕ ವರ್ಗದವರು, ಪಾಲಕ- ಪೋಷಕರು, ಬೋಧಕೇತರ ವೃಂದದವರು ಹರ್ಷ ವ್ಯಕ್ತಪಡಿಸಿ ಅಭಿನಂದನೆ ಸಲ್ಲಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಳ್ಳಾರಿ ಕೊಲೆ ಪ್ರಕರಣ: ಕಿರುಕುಳ ಆರೋಪಕ್ಕೆ ಯುವಕನ ಹತ್ಯೆ, 3 ಮಂದಿ ಅರೆಸ್ಟ್

ಬಳ್ಳಾರಿಯಲ್ಲಿ ಯುವಕನ ಹತ್ಯೆ ಪ್ರಕರಣದಲ್ಲಿ ಮಹಿಳೆ ಸೇರಿ 3 ಮಂದಿಯನ್ನು ಬಂಧಿಸಿದ ಪೊಲೀಸರು. ಕೊಲೆಯ ಹಿಂದಿನ ಆಘಾತಕಾರಿ ಕಾರಣ ಬಹಿರಂಗ, ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ

ಬೆಂಗಳೂರು ಯುವತಿ ಹತ್ಯೆ: ಅನುಮಾನಕ್ಕೆ ಗೆಳತಿಯನ್ನು ಕೊಂದ ಪ್ರಿಯಕರ

ಬೆಂಗಳೂರಿನ ಬೆಳ್ಳಂದೂರಿನಲ್ಲಿ ಪ್ರೇಮ ಸಂಬಂಧದ ಅನುಮಾನಕ್ಕೆ 22 ವರ್ಷದ ಯುವತಿಯನ್ನು ಪ್ರಿಯಕರ ಹತ್ಯೆಗೈದ ಘಟನೆ ಸಂಚಲನ ಮೂಡಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಡಿಕೆಶಿ ಖಡಕ್ ಸೂಚನೆ: ಲಂಚ ಮುಕ್ತ ಕರ್ನಾಟಕಕ್ಕೆ ಕಠಿಣ ಕ್ರಮ

ರಾಜ್ಯದಲ್ಲಿ ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಸಿಎಂ ಡಿಕೆ ಶಿವಕುಮಾರ್ ಕಟ್ಟುನಿಟ್ಟಿನ ಆದೇಶ ನೀಡಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಮಂಗಳೂರು ತಂಡಕ್ಕೆ ಕರುಣ್ ನಾಯರ್ ನಾಯಕ

ಮಹಾರಾಜ ಟ್ರೋಫಿ ಟಿ20 ಟೂರ್ನಿಗೆ ಮಂಗಳೂರು ತಂಡದ ಜರ್ಸಿ ಬಿಡುಗಡೆಯಾಗಿದ್ದು, ಕರುಣ್ ನಾಯರ್ ನಾಯಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ