spot_img

ಕಮಲ್ ಹಾಸನ್ ಚಿತ್ರ ವಿವಾದ: ಕೋರ್ಟ್ ಆದೇಶಕ್ಕೆ ಎಲ್ಲರೂ ಬಾಧ್ಯರು – ಡಿಸಿಎಂ ಡಿ.ಕೆ.ಶಿವಕುಮಾರ್ ಸ್ಪಷ್ಟನೆ

Date:

spot_img

ಬೆಂಗಳೂರು : ನಟ ಕಮಲ್ ಹಾಸನ್ ಅಭಿನಯದ ಚಿತ್ರ ಬಿಡುಗಡೆ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ಪ್ರತಿಯೊಬ್ಬರೂ ಗೌರವಿಸಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, “ಕಮಲ್ ಹಾಸನ್ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಅದರಲ್ಲಿ ತಪ್ಪಿಲ್ಲ. ನಾವು ಪ್ರತಿಯೊಬ್ಬರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯ ನೀಡಿದ್ದೇವೆ. ಬೆಂಗಳೂರು ಜಾತಿ, ಧರ್ಮ, ಸಂಸ್ಕೃತಿಗೆ ಮಿತಿ ಇಲ್ಲದೆ ಎಲ್ಲರನ್ನೂ ಸ್ವೀಕರಿಸುವ ಅಂತರರಾಷ್ಟ್ರೀಯ ನಗರವಾಗಿದೆ. ಕನ್ನಡಿಗರು ಹೃದಯ ಶ್ರೀಮಂತರು. ನಮ್ಮ ಭಾಷೆ, ಸಂಸ್ಕೃತಿಗೆ ಮೀರಿ ಯಾರನ್ನೂ ಕಾನೂನು ಕೈಗೆತ್ತಿಕೊಳ್ಳಲು ಬಿಡಬಾರದು,” ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಅವರು, ನ್ಯಾಯಾಲಯದ ಆದೇಶದ ವಿರುದ್ಧ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದು ಸೂಕ್ತವಲ್ಲ ಎಂದು ಸೂಚಿಸಿದರು. ಚಿತ್ರ ಬಿಡುಗಡೆ ವಿಚಾರದಲ್ಲಿ ಶಾಂತಿಯುತವಾಗಿ ನಡೆದುಕೊಳ್ಳಬೇಕು ಎಂಬುವುದು ಅವರ ಮನವಿಯ ಸಾರಾಂಶವಾಗಿದೆ .

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್. ತಂಗಡಗಿಯವರು ಕೂಡ ಪ್ರತಿಕ್ರಿಯೆ ನೀಡಿದ್ದು, “ಸುಪ್ರೀಂ ಕೋರ್ಟ್ ಆದೇಶವನ್ನು ನಾವು ಗೌರವಿಸುತ್ತೇವೆ. ಆದರೆ ಕನ್ನಡದ ಸ್ವಾಭಿಮಾನಕ್ಕೆ ಧಕ್ಕೆಯಾಗುವಂಥ ವಿಷಯಗಳಿಗೆ ಅವಕಾಶ ಕೊಡಲಿಕ್ಕೆ ಸಾಧ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ. ಚಿತ್ರಮಂದಿರ ಮಾಲೀಕರು, ವಿತರಕರು ಹಾಗೂ ವಾಣಿಜ್ಯ ಮಂಡಳಿಯವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗುತ್ತದೆ,” ಎಂದು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

500 ರೂ. ನೋಟು ಸ್ಥಗಿತಗೊಳಿಸಲ್ಲ: ವಾಟ್ಸಾಪ್ ವದಂತಿಗಳಿಗೆ ಸರ್ಕಾರದಿಂದ ಸ್ಪಷ್ಟನೆ

ಸದ್ಯಕ್ಕೆ 500 ರೂ. ನೋಟುಗಳನ್ನು ಸ್ಥಗಿತಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ಸರ್ಕಾರ ಮಂಗಳವಾರ ತಿಳಿಸಿದೆ.

ನಕಲಿ ಸುದ್ದಿ, ವಂಚನೆಗಳ ವಿರುದ್ಧ ವಾಟ್ಸಾಪ್ ಕಠಿಣ ಕ್ರಮ: 98 ಲಕ್ಷಕ್ಕೂ ಅಧಿಕ ಭಾರತೀಯ ಖಾತೆ ಬ್ಯಾನ್!

ನಕಲಿ ಸುದ್ದಿ, ವಂಚನೆ ಮತ್ತು ದುರುಪಯೋಗದಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮೆಟಾ ಒಡೆತನದ ವಾಟ್ಸಾಪ್ ಭಾರತದಲ್ಲಿ ಕಠಿಣ ಕ್ರಮ ಕೈಗೊಂಡಿದೆ

ಅಸ್ಸಾಂನಲ್ಲಿ ನಕಲಿ ವೈದ್ಯನ ಬಂಧನ: ದಶಕಗಳಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಹೆರಿಗೆ ಮಾಡಿಸಿದ್ದ ವಂಚಕ!

ಅಸ್ಸಾಂ ರಾಜ್ಯದ ಸಿಲ್ಚಾರ್‌ನಲ್ಲಿ ನಕಲಿ ವೈದ್ಯನೊಬ್ಬನ ಬಂಧನ ಪ್ರಕರಣ ಬೆಳಕಿಗೆ ಬಂದಿದೆ. ಕಳೆದ ಒಂದು ದಶಕದಿಂದ 50ಕ್ಕೂ ಹೆಚ್ಚು ಸಿಸೇರಿಯನ್ ಶಸ್ತ್ರಚಿಕಿತ್ಸೆಗಳನ್ನು ನಡೆಸಿದ್ದ ಈ ನಕಲಿ ವೈದ್ಯನನ್ನು ಪೊಲೀಸರು ಆಪರೇಷನ್ ಥಿಯೇಟರ್‌ನಿಂದಲೇ ಬಂಧಿಸಿದ್ದಾರೆ.

ನಿಟ್ಟೂರು ಯುವಕ ಮಂಡಲದ ವಾರ್ಷಿಕ ಮಹಾಸಭೆ : ನವೀನ್ ಸನಿಲ್ ಅಧ್ಯಕ್ಷರಾಗಿ ಆಯ್ಕೆ!

ನಿಟ್ಟೂರು ಯುವಕ ಮಂಡಲ (ರಿ.) ಇದರ 2024-2025ನೇ ಸಾಲಿನ ವಾರ್ಷಿಕ ಮಹಾಸಭೆಯು ಆಗಸ್ಟ್ 3, 2025 ರಂದು ಅಧ್ಯಕ್ಷ ನವೀನ್ ಸನಿಲ್ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು.