
ಉಡುಪಿ: ಕಾಪು ನೂತನ ಮಾರಿಗುಡಿಯ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಹೋತ್ಸವದಲ್ಲಿ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಭಾಗವಹಿಸಿದರು. ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ನಡೆದ ಈ ವೈಭವಶಾಲಿ ಕಾರ್ಯಕ್ರಮದಲ್ಲಿ ಕಂಗನಾ ರಣಾವತ್ ದೇವರ ದರ್ಶನ ಪಡೆದು, ವಿಶೇಷ ಪೂಜೆಯಲ್ಲಿ ಭಾಗಿಯಾಗಿದರು.
ಈ ಸಂದರ್ಭದಲ್ಲಿ ಅನೇಕ ಭಕ್ತರು ಹಾಗೂ ಸ್ಥಳೀಯ ಗಣ್ಯರು ಉಪಸ್ಥಿತರಿದ್ದರು.