
ಕಾರ್ಕಳ : ಉಡುಪಿ ಜಿಲ್ಲೆಯ ಕಾರ್ಕಳದಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಆನೆಕೆರೆ ಮತ್ತು ರಾಮಸಮುದ್ರ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳದ ಸ್ವಾಭಾವಿಕ ಸೌಂದರ್ಯ ಹಾಗೂ ಪೌರಾಣಿಕ ಮಹತ್ವವನ್ನು ಮೆಚ್ಚಿದ ಅವರು, ಈ ಪ್ರದೇಶಗಳನ್ನು ಸ್ವದೇಶ್ ದರ್ಶನ್ ಯೋಜನೆಯಡಿ ಎರಡು ಹಂತಗಳಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ತಿಳಿಸಿದರು.
ಕಾರ್ಕಳದ ಪ್ರವಾಸೋದ್ಯಮ ಹೂಡಿಕೆಗೆ ಸಂಬಂಧಿಸಿದ ಪ್ರಸ್ತಾವನೆ ಹಾಗೂ ಯೋಜನಾ ರೂಪುರೇಷೆಗಳ ಬಗ್ಗೆ ಶಾಸಕ ವಿ. ಸುನಿಲ್ ಕುಮಾರ್ ಅವರಿಂದ ಮಾಹಿತಿ ಪಡೆದ ಸಚಿವರು, ಆನೆಕೆರೆ ಬಸದಿ ಮತ್ತು ರಾಮಸಮುದ್ರ ಕೆರೆಗಳಿಗೆ ಪ್ರವಾಸಿಗರನ್ನು ಆಕರ್ಷಿಸುವ ತಾಣಗಳಾಗಿ ರೂಪಿಸಲು ಕೇಂದ್ರ ಸರ್ಕಾರದಿಂದ ನೆರವು ನೀಡುವುದಾಗಿ ಭರವಸೆ ನೀಡಿದರು.

ಈ ಭೇಟಿಯ ಸಂದರ್ಭದಲ್ಲಿ ಶಾಸಕ ಸುನಿಲ್ ಕುಮಾರ್, ಪುರಸಭೆ ಅಧ್ಯಕ್ಷ ಯೋಗೀಶ್ ದೇವಾಡಿಗ, ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ, ಎಸಿ ರಶ್ಮಿ ಮತ್ತು ತಹಶೀಲ್ದಾರ್ ಪ್ರದೀಪ್ ಕುಮಾರ್ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.