
ಕಾರ್ಕಳ: ಕಾರ್ಕಳ ತಾಲೂಕು ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಅಶೋಕ್ ಸುವರ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ಅವರು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.
ಈ ಹಿಂದೆ ಇದೇ ಹುದ್ದೆಯಲ್ಲಿದ್ದ ರಮೇಶ್ ಕುಮಾರ್ ಶಿವಪುರ ಅವರಿಗೆ ತಾಲೂಕು ಸಮಿತಿಯಲ್ಲಿ ಹೊಸ ಜವಾಬ್ದಾರಿಯನ್ನು ವಹಿಸಲಾಗಿರುವುದರಿಂದ, ಈ ಸ್ಥಾನ ತೆರವಾಗಿತ್ತು. ಪಕ್ಷದ ನಿಷ್ಠಾವಂತ ಕಾರ್ಯಕರ್ತರಾದ ಅಶೋಕ್ ಸುವರ್ಣ ಅವರ ಹಿರಿತನ ಮತ್ತು ಅನುಭವವನ್ನು ಪರಿಗಣಿಸಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೊದಲು ಅವರು ನಗರ ಬಿಜೆಪಿ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ಅವರ ಆಯ್ಕೆಯು ಹಿಂದುಳಿದ ವರ್ಗಗಳ ಮೋರ್ಚಾವನ್ನು ಇನ್ನಷ್ಟು ಬಲಪಡಿಸಲಿದೆ ಎಂದು ಪಕ್ಷದ ನಾಯಕರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.