ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸರ್ವಜ್ಞ ಜಯಂತಿ

Date:

spot_img

ಕಾರ್ಕಳ : ಆಶು ಕವಿ ಸರ್ವಜ್ಞ ತನ್ನ ತ್ರಿಪದಿ ಕವನಗಳ ಮೂಲಕ ಸಮಾಜದ ಅಂಕುಡೊಂಕುಗಳನ್ನು ಎತ್ತಿ ಹಿಡಿದು ತಿದ್ದಿ ತೀಡಿದ ಒಬ್ಬ ಸಮಾಜ ಸುಧಾರಕ. ಹಿಂದುಳಿದ ಕುಂಬಾರ ಕುಟುಂಬದಲ್ಲಿ ಹುಟ್ಟಿದ ಈ ಕವಿಗೆ ಮೇಲ್ವರ್ಗದವರ ತುಳಿತವೇ ಒಂದು ಶಕ್ತಿಯಾಗಿ ಮುಂದೆ ಅದೇ ತ್ರಿಪದಿಯಾಗಿ ಹೊರಹೊಮ್ಮಿ ಜಾತಿ ಮತ ಧರ್ಮ ರಾಜಕೀಯದ ಸಾಮಾಜಿಕ ನ್ಯಾಯ ಪ್ರತಿಪಾದನೆಗೆ ಸ್ಪೂರ್ತಿ ನೀಡಿತು. ಇವರ ತ್ರಿಪದಿಗಳು ಪ್ರತಿಪಾದಿಸಿದ ತತ್ವ ಸಿದ್ಧಾಂತಗಳು ತ್ರಿಕಾಲಾಭಾದಿತ ಸತ್ಯದ ತಳಹದಿಯ ಮೇಲೆ ನಿಂತಿವೆ ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನಚಂದ್ರ ಪಾಲ್ ನಕ್ರೆ ಹೇಳಿದ್ದಾರೆ.

ಅವರು ಇಲ್ಲಿನ ಸರ್ವಜ್ಞ ಸರ್ಕಲ್ ಬಳಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಹಾಗೂ ಹಿಂದುಳಿದ ವರ್ಗದ ಘಟಕ ಜಂಟಿಯಾಗಿ, ಆಯೋಜಿಸಿದ್ದ ಸರ್ವಜ್ಞ ಕವಿಯ ಜನ್ಮ‌ದಿನ ಸಂಸ್ಮರಣಾ ಕಾರ್ಯಕ್ರಮದಲ್ಲಿ ಮಾತಾಡುತ್ತಿದ್ದರು.

ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ ನಕ್ರೆ, ಕುಲಾಲ ಸಮಾಜದ ಮುಖಂಡ ಕುಶ ಮೂಲ್ಯ ಸಂದರ್ಭೋಚಿತ ಮಾತುಗಳನ್ನಾಡಿದರು
ಬ್ಲಾಕ್ ಕಾಂಗ್ರೆಸ್ ಹಿಂದುಳಿದ ವರ್ಗದ ಘಟಕದ ಅಧ್ಯಕ್ಷರಾದ ಅನಿಲ್ ಪೂಜಾರಿಯವರು ಮಾಲಾರ್ಪಣೆ ಮಾಡಿದರು.

ಈ ಸಂದರ್ಬದಲ್ಲಿ ಪ್ರಭಾಕರ ಬಂಗೇರ, ಜಗನ್ನಾಥ ಮೂಲ್ಯ, ವಿವೇಕಾನಂದ ಶೆಣೈ, ಸುನಿಲ್ ಭಂಡಾರಿ, ಶಾಕಿರ್, ಅಬ್ದುಲ್ ಸಾಣೂರು, ಶೋಭಾ, ರೀನಾ ಕ್ಯಾಥಾರಿನ್, ಗೋಪಾಲಕೃಷ್ಣ, ಕೃಷ್ಣ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದು, ವಿಶ್ವನಾಥ ಭಂಡಾರಿ ಧನ್ಯವಾದ ಸಮಾರ್ಪಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.