
ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಹನೀಯರಾದ ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಮತ್ತು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಪುಷ್ಪಾರ್ಚನೆಗೈದು ಗೌರವ ಸಲ್ಲಿಸುವ ಮೂಲಕ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು.
ಸಭೆಯಲ್ಲಿ ಕಾರ್ಕಳ ಕಾಂಗ್ರೆಸ್ ಮುಖಂಡರಾದ ಉದಯ ಶೆಟ್ಟಿ ಮುನಿಯಾಲು ಅವರು ಭಾಗವಹಿಸಿ ಮಾತನಾಡುತ್ತಾ ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವನ್ನು ಭಾರತ ಮಾತ್ರವಲ್ಲದೆ ಅಂತರಾಷ್ಟ್ರೀಯ ಮಟ್ಟದಲ್ಲಿ ಅನುಸರಿಸಲಾಗುತ್ತಿರುವುದು ಗುರುಗಳ ಸಂದೇಶಕ್ಕಿರುವ ಶಕ್ತಿಯನ್ನು ಸೂಚಿಸುತ್ತದೆ ಎಂದರು.

ಕಾಂಗ್ರೆಸ್ ಉಡುಪಿ ಜಿಲ್ಲಾ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳು ಜಾತಿ ತಾರತಮ್ಯದ ವ್ಯವಸ್ಥೆಯನ್ನು ಕ್ರಾಂತಿಕಾರಿ ನಿಲುವುಗಳ ಮೂಲಕ ಎದುರಿಸಿ ಸ್ವಾಭಿಮಾನಿ ಸಮಾಹವನ್ನು ಕಟ್ಟುವಲ್ಲಿ ಶ್ರಮಿಸಿದರು. ಸಮಾನತಯೆ ಹರಿಕಾರನಾಗಿ ನಾರಾಯಣ ಗುರುಗಳ ಸಂದೇಶ ಇಂದಿಗೂ ಅನುಕರಣೀಯ ಎಂದರು. ಮಾಜಿ ಪ್ರಧಾನಿ ದಿ. ರಾಜೀವ್ ಗಾಂಧಿ ಅವರು ಪಂಚಾಯತ್ ರಾಜ್ ವ್ಯವಸ್ಥೆಯನ್ನು ಸಮರ್ಪಕವಾಗಿ ಅನುಷ್ಠಾನಿಸಿದ ಪರಿಣಾಮ ಇಂದು ಜನ ಸಾಮಾನ್ಯನಿಗೂ ಸ್ಥಳೀಯಾಡಳಿತ ಸಂಸ್ಥೆಯಲ್ಲಿನ ಅಧಿಕಾರ ದೊರಕುವಂತಾಯಿತು ಎಂದರು.
ಮಾಜಿ ತಾಲೂಕು ಪಂಚಾಯತ್ ಸದಸ್ಯರಾದ ದಯಾನಂದ ಬಂಗೇರ ಅವರು ಮಾತನಾಡಿ ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರು ಭೂಸುಧಾರಣಾ ಕಾಯ್ದೆಯನ್ನು ಕರ್ನಾಟಕ ರಾಜ್ಯದಲ್ಲಿ ಸಮರ್ಪಕವಾಗಿ ಅನುಷ್ಠಾನಗೊಳಿಸಿ ಬಡವರಿಗೆ, ಭೂರಹಿತ ಕೃಷಿ ಕಾರ್ಮಿಕರಿಗೆ ಸ್ವಾಭಿಮಾನದ ಬದುಕನ್ನು ಕಟ್ಟಿ ಕೊಟ್ಟರು. ಆದರೆ ಇಂದು ದೇವರಾಜ ಅರಸು ಅವರು ಅನುಷ್ಠಾನಗೊಳಿಸಿದ ಭೂಸುಧಾರಣಾ ಕಾಯ್ದೆಯ ಮೂಲಕ ಭೂಮಿ ಪಡೆದವರು ಕಾಂಗ್ರೆಸ್ ಪಕ್ಷವನ್ನು ಪ್ರಶ್ನಿಸುತ್ತಿರುವುದು ವಿಪರ್ಯಾಸ ಎಂದರು.
ಬ್ಲಾಕ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶನವನ್ನು ಜೀವನದಲ್ಲಿ ಅಳವಡಿಸುವುದೇ ಗುರುಗಳಿಗೆ ಸಲ್ಲಿಸುವ ಗೌರವ ಎಂದರು. ಹಾಗೂ ಕಾಂಗ್ರೆಸ್ ಸಮಿತಿಯ ಜಿಲ್ಲಾ ಉಪಾದ್ಯಕ್ಷರಾದ ಸುಧಾಕರ ಕೋಟ್ಯಾನ್ ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಕಳ ಬ್ಲಾಕ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಅನಿಲ್ ಪೂಜಾರಿ ನೆಲ್ಲಿಗುಡ್ಡೆಯವರು ಬ್ರಹ್ಮಶ್ರೀ ನಾರಾಯಣ ಗುರುಗಳ ಸಂದೇಶವನ್ನು ವಾಚಿಸಿದರು. ತಾಲೂಕು ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗರವರು ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಸಾಧನೆಗಳನ್ನು ವಾಚಿಸಿದರು ಮತ್ತು ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷ ಮಲಿಕ್ ಅತ್ತೂರು ಅವರು ಮಾಜಿ ಮುಖ್ಯಮಂತ್ರಿ ದಿ. ದೇವರಾಜ ಅರಸು ಅವರ ಕ್ರಾಂತಿಕಾರಿ ಯೋಜನೆಗಳ ಮಾಹಿತಿಯನ್ನು ವಾಚಿಸಿದರು.
ಈ ಸಂದರ್ಭದಲ್ಲಿ ಹೆಬ್ರಿ ಬ್ಲಾಕ್ ಅಧ್ಯಕ್ಷ ಗೋಪಿನಾಥ ಭಟ್, ಕೆಡಿಪಿ ಸದಸ್ಯರಾದ ಮೊಯಿದಿನಬ್ಬ ಇನ್ನಾ , ರುಕ್ಮಯ ಶೆಟ್ಟಿಗಾರ್, ಅಮಿತಾ ಶೆಟ್ಟಿ, ಕೆಪಿಸಿಸಿ ಕೃಷಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಉದಯ ಶೆಟ್ಟಿ ಕುಕ್ಕುಂದೂರು, ಕುಕ್ಕುಂದೂರು ಗ್ರಾಮ ಪಂಚಾಯತಿ ಅದ್ಯಕ್ಷ – ಉಪಾದ್ಯಕ್ಷರಾದ ಶ್ರೀಮತಿ ಉಷಾ.ಕೆ, ಶ್ರೀಮತಿ ಶಿಶಿಕಲಾ, ಮಹಿಳಾ ಕಾಂಗ್ರೆಸಿನ ಮಾಲಿನಿ ರೈ ಸಾಣೂರು, ಮುಸ್ಲಿಂ ಜಮಾತ್ ಅಧ್ಯಕ್ಷ ಪುರಸಭಾ ಸದಸ್ಯ ಅಷ್ಪಕ್ ಅಹಮ್ಮದ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಶ್ರೀಮತಿ ಭಾನು ಬಾಸ್ಕರ್ ಪೂಜಾರಿ, ನಗರ ಕಾಂಗ್ರೆಸಿನ ಅದ್ಯಕ್ಷರಾದ ರಾಜೇಂದ್ರ ದೇವಾಡಿಗ, ಶ್ರೀಮತಿ ರೀನಾ ಡಿಸೋಜ, ಬ್ಲಾಕ್ ಉಪಾದ್ಯಕ್ಷ ಜಾರ್ಜ್ ಕ್ಯಾಸ್ಟಲಿನೋ, ಬಿಎಲ್ಎ2 ವಿಶ್ವನಾಥ್ ಭಂಡಾರಿ, ಕಾಂತಿ ಶೆಟ್ಟಿ ,ಶೊಭಾ ಪ್ರಸಾದ್, ವಿವಿಧ ಘಟಕದ ಅದ್ಯಕ್ಷರುಗಳು, ಗ್ರಾಮೀಣ ಸಮಿತಿ ಅಧ್ಯಕ್ಷರು, ಗ್ಯಾರಂಟಿ ಸಮಿತಿ ಸದಸ್ಯರು, ಚುನಾಯಿತ ಪ್ರತಿನಿಧಿಗಳು, ಉಪಸ್ಥಿತರಿದ್ದರು. ಬ್ಲಾಕ್ ವಕ್ತಾರ ಪ್ರದೀಪ್ ಬೇಲಾಡಿ ಕಾರ್ಯಕ್ರಮ ನಿರ್ವಹಿಸಿ ಬ್ಲಾಕ್ ಪ್ರಧಾನ ಕಾರ್ಯದರ್ಶಿ ಅನಿಲ್ ಪೂಜಾರಿ ಮಾಳ ಧನ್ಯವಾದವಿತ್ತರು