ಬ್ಲಾಕ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ ಹಾಗೂ ರಕ್ತದಾನ ಶಿಬಿರ

Date:

spot_img

ಕಾರ್ಕಳ : ಕಾರ್ಕಳ ಬ್ಲಾಕ್ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾರ್ಕಳದ ಬಿಲ್ಲವ ಸಂಘದ ನಾರಾಯಣಗುರು ಸಭಾಭವನದಲ್ಲಿ ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆ, ಪ್ರಸಾದ್ ನೇತ್ರಾಲಯ ಮೂಡುಬಿದಿರೆ ಉಡುಪಿ, ನೋವಾ ಐವಿಎಎಫ್ ಫರ್ಟಿಲಿಟಿ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಆಳ್ವಾಸ್ ಸಂಸ್ಥೆಯ ತಜ್ಞ ವೈದ್ಯರಾದ ಡಾ. ಹನಾ ಶೆಟ್ಟಿಯವರು ಉದ್ಘಾಟಿಸಿ ಸಂವಾದ ಕಾರ್ಯಕ್ರಮವನ್ನು ನಡೆಸಿ ಸಭಿಕರ ಪ್ರಶ್ನೋತ್ತರಗಳಿಗೆ ಉತ್ತರಿಸಿದರು.

ಅಧ್ಯಕ್ಷತೆಯನ್ನು ವಹಿಸಿದ್ದ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರು ಮಾತನಾಡಿ ಒತ್ತಡಗಳ ಜೀವನ ಶೈಲಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹು ಮುಖ್ಯ , ಇಂತಹ ಆರೋಗ್ಯ ಶಿಬಿರಗಳು ಈ‌ ನಿಟ್ಟಿನಲ್ಲಿ ಸಹಕಾರಿಯಾಗಿದೆ ಎಂದರು.

ರಾಜ್ಯ ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಮುದ್ರಾಡಿ ಮಂಜುನಾಥ ಪೂಜಾರಿಯವರು ಮಾತನಾಡಿ ಶ್ರೀಮತಿ ಇಂದಿರಾ ಗಾಂಧಿಯವರು ದೇಶಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು ಬಡ ಜನತೆ, ಮಹಿಳೆಯರ ಪರವಾದ ಅವರ ಕಾಳಜಿಯನ್ನು ಯಾವತ್ತೂ ಮರೆಯಲು ಸಾಧ್ಯವಿಲ್ಲ, ಅವರ ಹೆಸರಿನಲ್ಲಿ ನಡೆಯುತ್ತಿರುವ ಇಂದಿನ ಆರೋಗ್ಯ ಶಿಬಿರವು ಅತ್ಯಂತ ಅರ್ಥಪೂರ್ಣವಾಗಿದೆ ಎಂದರು.

ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಶ್ರೀಮತಿ ಜ್ಯೋತಿ ಹೆಬ್ಬಾರ್, ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಶ್ರೀಮತಿ ಭಾನು ಭಾಸ್ಕರ ಪೂಜಾರಿ ಸಂದರ್ಭೋಚಿತವಾಗಿ ಮಾತನಾಡಿದರು.

ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಅವರು ಪ್ರಾಸ್ತಾವಿಕ ಮಾತುಗಳೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.

ಶಿಬಿರದಲ್ಲಿ 200ಕ್ಕೂ ಹೆಚ್ಚು ಸಾರ್ವಜನಿಕರು ವಿವಿಧ ಆರೋಗ್ಯ ತಪಾಸಣೆಗಳನ್ನು ನಡೆಸಿ ಶಿಬಿರದ ಸದುಪಯೋಗವನ್ನು ಪಡೆದುಕೊಂಡರು. ನಿಟ್ಟೆ ಗ್ರಾಮದ ಸವಿತಾ ಅವರಿಗೆ ಆರೋಗ್ಯ ಸಂಬಂಧಿ ಸಹಾಯ ಧನವನ್ನು ಉದಯ ಶೆಟ್ಟಿ ಮುನಿಯಾಲು ಅವರು ವಿತರಿಸಿದರು. ಗ್ರಾಮೀಣ ಸಮಿತಿಯ ಮಹಿಳಾ ಅಧ್ಯಕ್ಷರುಗಳನ್ನು ವೇದಿಕೆಗೆ ಆಹ್ವಾನಿಸಿ ಹೂವನ್ನಿತ್ತು ಅಭಿನಂದಿಸಲಾಯಿತು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರಾದ ಅಜಿತ್ ಹೆಗ್ಡೆ ಮಾಳ, ನಗರ ಕಾಂಗ್ರೆಸ್ ಅಧ್ಯಕ್ಷರಾದ ರಾಜೇಂದ್ರ ದೇವಾಡಿಗ, ಆಳ್ವಾಸ್ ಸಂಸ್ಥೆಯ ಭಾಸ್ಕರ್ ಪೂಜಾರಿ, ಡಾ. ಶವೀಝ್ ಪೈಜಿ, ಪ್ರಸಾದ್ ನೇತ್ರಾಲಯದ ಡಾ. ಕ್ರೀನಾ, ಶ್ರೀಮತಿ ಮಾಲಿನಿ ರೈ, ಎಸ್.ಸಿ ಘಟಕದ ದೇವದಾಸ್, ರಾಜ್ಯ ಮಹಿಳಾ ಕಾರ್ಯದರ್ಶಿ ಶ್ರೀಮತಿ ಅನಿತಾ ಡಿಸೋಜ ಅವರುಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಪುರಸಭಾ ಸದಸ್ಯೆ ಶ್ರೀಮತಿ ನಳಿನಿ ಆಚಾರ್ಯ ಕಾರ್ಯಕ್ರಮ ನಿರೂಪಿಸಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾದ ಶ್ರೀಮತಿ ರೀನಾ ಡಿಸೋಜ ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ