ಕಾರ್ಕಳ: ಇಲ್ಲಿನ ಬೈಪಾಸ್ ವೃತ್ತದ ಬಳಿ ಆಟೋರಿಕ್ಷಾ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡ ಆಟೋರಿಕ್ಷಾ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರ್ಕಳದಿಂದ ಸಾಣೂರು ಕಡೆಗೆ ಹೋಗುತ್ತಿದ್ದ ಆಟೋರಿಕ್ಷಾ ಮತ್ತು ಬಜಗೋಳಿಯಿಂದ ನಿಟ್ಟೆ ಕಡೆಗೆ ಹೋಗುತ್ತಿದ್ದ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ ಎಂದು ತಿಳಿದುಬಂದಿದೆ.