ಕ್ಯಾನ್ಸರ್ ನ ಕುರಿತು ಜಾಗೃತಿ ಮೂಡಿಸುವುದೊಂದೇ ಸದ್ಯ ಕ್ಕಿರುವ ಪರಿಹಾರ : ಬೋಳ ಪ್ರಶಾಂತ್ ಕಾಮತ್

Date:

spot_img

ಕಾರ್ಕಳ: ಕ್ಯಾನ್ಸರ್ ಕಾಯಿಲೆ ಇಡೀ ಜಗತ್ತನ್ನು ಆವರಿಸಿದ್ದು, ನಮ್ಮ ದೇಶ ಭಾರತದಲ್ಲೂ ಕೂಡ ಇದರ ಪ್ರಮಾಣ ಏರು ಗತಿಯಲ್ಲಿ ಸಾಗುತ್ತಾ ಇದೆ. ವೈದ್ಯ ವಿಜ್ಞಾನ ಕ್ಯಾನ್ಸರ್ ನಿರ್ಮೂಲನೆಗಾಗಿ ಆವಿಷ್ಕಾರಗಳನ್ನು ನಿರಂತರವಾಗಿ ನಡೆಸಿಕೊಂಡು ಬಂದಿದ್ದರೂ ಖಚಿತ ಯಶಸ್ಸು ದೊರಕಿಲ್ಲ. ಈ ಹಿನ್ನೆಲೆಯಲ್ಲಿ ಕ್ಯಾನ್ಸರ್ ನ ಕುರಿತಾದ ಜಾಗೃತಿಯನ್ನು ಮೂಡಿಸುವುದೊಂದೇ ಸದ್ಯಕ್ಕೆ ಇರುವ ಪರಿಹಾರ. ಕ್ಯಾನ್ಸರ್ ನ ವಿಧಗಳು ಮತ್ತು ಆರಂಭದ ದೆಸೆಯಲ್ಲಿ ರೋಗಿಗಳು ಅನುಸರಿಸ ಬೇಕಾದ ಎಚ್ಚರಿಕೆ ಮತ್ತು ಸುಲಭ ಪರಿಹಾರಗಳನ್ನು ಈ ಜಾಗೃತಿ ಕಾರ್ಯಕ್ರಮಗಳಲ್ಲಿ ತಿಳಿಯುವುದು ಸಾಧ್ಯ ಎಂದು ಕಾರ್ಕಳ ಟೈಗರ್ಸ್ ಸಂಸ್ಥಾಪಕ ಬೋಳ ಪ್ರಶಾಂತ್ ಕಾಮತ್ ಹೇಳಿದರು.


ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಹಾಗೂ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್, ಕ್ಯಾನ್ಸರ್ ಮಾಹಿತಿ ಕೇಂದ್ರ ಕಾರ್ಕಳ ನೇತೃತ್ವದಲ್ಲಿ , ಟೀಮ್ ಸಿಂಧೂರ್ ಕಾರ್ಕಳ, ಹೊಸ ಸಂಜೆ ಬಳಗ , ಕಾರ್ಕಳ ಟೈಗರ್ಸ್, ಸೌತ್ ಕೆನರಾ ಫೋಟೋಗ್ರಾಫರ್ಸ್
ಅಸೋಸಿಯೇಷನ್ ಕಾರ್ಕಳ ವಲಯ , ಜೆ ಸಿ ಐ ಕಾರ್ಕಳ, ಎಸ್ ವಿ ಟಿ ಮಹಿಳಾ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆಯ ಘಟಕ ಸಹಯೋಗದಲ್ಲಿ ನವೆಂಬರ್ 22, ಶನಿವಾರ ಆಯೋಜಿಸಿದ್ದ ” ಕ್ಯಾನ್ಸರ್ ಜಾಗೃತಿ ಜಾಥಾ ” ಉದ್ಘಾಟಿಸಿ ಮಾತನಾಡಿದರು.
ಪುರಸಭಾ ಸದಸ್ಯ ಲಕ್ಷ್ಮೀನಾರಾಯಣ ಮಲ್ಯ ,ಕಾರ್ಕಳ ಜೆ ಸಿ ಐ ಅಧ್ಯಕ್ಷೆ ಶ್ವೇತಾ ಎಸ್ ಜೈನ್ , ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಮುನಿಯಾಲು , ಕಾರ್ಯದರ್ಶಿ ಶೇಖರ್ , ಮನಶ್ಯಾಸ್ತ್ರಜ್ಞೆ ಜ್ಯೇಷ್ಠಲಕ್ಷ್ಮೀ ಮಂಗಳೂರು, ಹೊಸಸಂಜೆ ಬಳಗದ ಅಧ್ಯಕ್ಷ ಆರ್ ದೇವರಾಯ ಪ್ರಭು , ಲಯನ್ಸ್ ಕ್ಲಬ್ ಸೆಂಟ್ರಲ್ ಕಾರ್ಯದರ್ಶಿ ದತ್ತಾತ್ರೇಯ ಹಿರಿಯಂಗಡಿ , ಟೀಮ್ ಸಿಂಧೂರದ ಶೋಭಾ ಭಾಸ್ಕರ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದು ಶುಭ
ಹಾರೈಸಿದರು .
ನಯನಾ ಸ್ವಾಗತಿಸಿದರು. ದಿವ್ಯಶ್ರೀ ಪ್ರಾಸ್ತಾವಿಕ ಮಾತನಾಡಿದರು. ಲಾವಣ್ಯ ಕಾರ್ಯಕ್ರಮ ನಿರೂಪಿಸಿದರು. ಅಮೃತಾ ವಂದಿಸಿದರು .

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ