ಪ್ರಿಯತಮೆಯೊಂದಿಗೆ ಸೇರಿ ಆಕೆಯ ಪತಿಯನ್ನೇ ಕೊಂದ ಪ್ರಕರಣ! ಆರೋಪಿಯಿಂದ ಜಾಮೀನು ಕೋರಿ ಅರ್ಜಿ

Date:

spot_img

ಕಾರ್ಕಳ:ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪತ್ನಿ ತನ್ನ ಪ್ರಿಯಕರನೊಂದಿಗೆ ಸೇರಿ ಪತಿಯನ್ನೇ ಕೊಲೆಗೈದ ಪ್ರಕರಣದ ಆರೋಪಿ ದಿಲೀಪ್ ಹೆಗ್ಡೆ (28) ಜಾಮೀನು ಕೋರಿ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಉಡುಪಿ ಸಂಚಾರಿ ಪೀಠ ಕಾರ್ಕಳದಲ್ಲಿ ಅರ್ಜಿ ಸಲ್ಲಿಸಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.

2024ರ ಅಕ್ಟೋಬರ್ 20ರಂದು ಮರ್ಣೆ ಗ್ರಾಮದ ಅಜೆಕಾರಿನ ದೆಪ್ಪುತ್ತೆ ಎಂಬಲ್ಲಿ ಬಾಲಕೃಷ್ಣ ಪೂಜಾರಿ (44) ಎಂಬವರನ್ನು ಅವರ ಪತ್ನಿ ಪ್ರತಿಮಾ (36) ಮತ್ತು ಆಕೆಯ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿ ಹತ್ಯೆ ಮಾಡಿದ್ದರು. ಈ ಪ್ರಕರಣದಲ್ಲಿ ಪೊಲೀಸರು ಅಕ್ಟೋಬರ್.25ರಂದು ಪ್ರತಿಮಾ ಮತ್ತು ದಿಲೀಪ್ ಹೆಗ್ಡೆ ಅವರನ್ನು ಬಂಧಿಸಿದ್ದರು
ಈ ಸಂಬಂಧ ದಿಲೀಪ್ ಹೆಗ್ಡೆ, ನ್ಯಾಯಾಂಗ ಬಂಧನದಲ್ಲಿದ್ದು, ಎರಡು ದಿನಗಳ ಹಿಂದೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಈ ಅರ್ಜಿಗೆ ಸರಕಾರಿ ಅಭಿಯೋಜಕರು ಆಕ್ಷೇಪಣೆ ಸಲ್ಲಿಸಲು ದಿನಾಂಕ ಫೆಬ್ರವರಿ 4ಕ್ಕೆ ನಿಗದಿಪಡಿಸಿದ್ದು, ಈ ದಿನ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಲಿದೆ. ಸರಕಾರಿ ಅಭಿಯೋಜಕ ಪ್ರಕಾಶ್‌ ಚಂದ್ರ ಶೆಟ್ಟಿ ಆಕ್ಷೇಪಣೆ ಸಲ್ಲಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ