ಮಾನ್ಯ ಮುಖ್ಯಮಂತ್ರಿಗಳಿಂದ ಲೋಕಾರ್ಪಣೆಗೆ ಸಿದ್ದಗೊಂಡಿದೆ ಕಾರ್ಕಳದ ಡಾ.ಬಿ ಆರ್‌ ಅಂಬೇಡ್ಕರ್‌ ಭವನ

Date:

spot_img

ಯೋಜನೆ ನೀಡಿದ ಮಾನ್ಯ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಹಾಗೂ ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರಿಗೆ ಧನ್ಯವಾದಗಳು.

ಕಾರ್ಕಳ : ಹಿಂದುಳಿದ ವರ್ಗಗಳ ಅನುಕೂಲಕ್ಕಾಗಿ ಕಾರ್ಕಳ ಶಾಸಕರು ಮಾಜಿ ಸಚಿವರಾದ ಮಾನ್ಯ ಶ್ರೀ ವಿ ಸುನಿಲ್‌ ಕುಮಾರ್‌ ರವರ ಮಹತ್ವಕಾಂಕ್ಷೆಯ ಯೋಜನೆಯಾದ ಡಾ. ಬಿ ಆರ್‌ ಅಂಬೇಡ್ಕರ್‌ ಭವನ ಲೋಕಾರ್ಪಣೆಗೆ ಸಿದ್ದವಾಗಿದೆ. 25 ಫೆಬ್ರವರಿ ಬುಧವಾರದಂದು ಕರ್ನಾಟಕ ಸರ್ಕಾರದ ಮಾನ್ಯ ಮುಖ್ಯಮಂತ್ರಿಗಳಾದ ಸನ್ಮಾನ್ಯ ಸಿದ್ದರಾಮಯ್ಯರವರಿಂದ ಲೋಕಾರ್ಪಣೆಗೊಳ್ಳಲಿದೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ ಅಂದಿನ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟ ಶ್ರೀನಿವಾಸ ಪೂಜಾರಿಯವರ ವಿಶೇಷ ಸಹಕಾರದಿಂದ ಮಾನ್ಯ ಸುನಿಲ್‌ ಕುಮಾರ್‌ ರವರ ಸ್ವರ್ಣ ಕಾರ್ಕಳದ ಕನಸಿನ ಭಾಗವಾಗಿ, ದೂರದೃಷ್ಠಿತ್ವ ಹಾಗೂ ವಿಶೇಷ ಪ್ರಯತ್ನದ ಫಲವಾಗಿ ಸುಮಾರು 6.00 ಕೋಟಿ ರೂಪಾಯಿ ವೆಚ್ಚದಲ್ಲಿ ಭವ್ಯವಾದ ಸುಸ್ಸಜ್ಜಿತ ಭವನಕ್ಕೆ ಅಂದು ಪಕ್ಷ ಭೇಧ ಮರೆತು ಸಮುದಾಯದ ಸುಮಾರು 3000 ಕ್ಕೂ ಅಧಿಕ ಜನರ ಉಪಸ್ಥಿತಿಯಲ್ಲಿ ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿ ಆರಂಭಿಸಿದ್ದರು. ಇದರ ಫಲವಾಗಿ ಜನತೆಯ ಉಪಯೋಗಕ್ಕೆ ಸುಂದರವಾದ ಸಭಾ ಭವನ ನಿರ್ಮಾಣಗೊಂಡಿದೆ..

ತಾಲೂಕು ಕೇಂದ್ರಗಳಲ್ಲಿ ಇಷ್ಟು ದೊಡ್ಡ ಮೊತ್ತದ ಹಾಗೂ ಭವ್ಯವಾದ ಅಂಬೇಡ್ಕರ್‌ ಭವನ ನಿರ್ಮಾಣ ಆಗಿರುವುದು ಕಾರ್ಕಳದಲ್ಲಿ ಮಾತ್ರ ಎಂಬುವುದು ಅತ್ಯಂತ ಹೆಮ್ಮೆಯ ವಿಚಾರ. ಈ ಭವನದಲ್ಲಿ ವಿಶಾಲವಾದ ಸಭಾ ಭವನ, ಊಟದ ಹಾಲ್‌, 10 ವಿಶ್ರಾಂತಿ ಕೊಠಡಿಗಳನ್ನು ಒಳಗೊಂಡಿದೆ ಇಂತಹ ಯೋಜನೆಯನ್ನು ಜನತೆಗೆ ಒದಗಿಸಿದ ಮಾನ್ಯ ಕಾರ್ಕಳ ಶಾಸಕರಾದ ಶ್ರೀ ವಿ ಸುನಿಲ್‌ ಕುಮಾರ್‌ ರವರಿಗೆ ಹಾಗೂ ಅಂದಿನ ಸಮಾಜ ಕಲ್ಯಾಣ ಸಚಿವರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿಯವರಿಗೆ ಕಾರ್ಕಳ ವಿಧಾನಸಭಾ ಕ್ಷೇತ್ರದ ಎಸ್.ಸಿ ಮೋರ್ಚಾ ವತಿಯಿಂದ ಈ ಸಂಧರ್ಭದಲ್ಲಿ ಧನ್ಯವಾದಗಳನ್ನು ಸಲ್ಲಿಸುತ್ತೇವೆ.

ಸಮಾಜದ ಬಂಧುಗಳು ನಾಳೆ ನಡೆಯಲಿರು ಡಾ. ಬಿ ಆರ್‌ ಅಂಬೇಡ್ಕರ್‌ ಭವನ ಲೋಕಾರ್ಪಣೆ ಸಮಾರಂಭಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಯಶಸ್ವಿಗೆ ಸಾಕ್ಷಿಯಾಗೋಣ. ಎಂದು ಪ್ರಕಟಣೆಯಲ್ಲಿ ಉಡುಪಿ ಜಿಲ್ಲಾ ಎಸ್‌ ಸಿ ಮೋರ್ಚಾ ಉಪಾಧ್ಯಕ್ಷರಾದ ಶ್ರೀನಿವಾಸ ಕಾರ್ಲ ತಿಳಿಸಿರುತ್ತಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಹ್ಯಾಕಾಶದಲ್ಲಿ ವಿಸ್ಮಯ: ಸೌರಮಂಡಲದ ಆಚೆ ಪತ್ತೆಯಾಯ್ತು ‘ಪಿಂಕ್ ಪ್ಲಾನೆಟ್’.. ಉಪ್ಪಿನ ಮೋಡಗಳ ಕಂಡು ವಿಜ್ಞಾನಿಗಳೇ ಶಾಕ್!

ಜೇಮ್ಸ್ ವೆಬ್ ಟೆಲಿಸ್ಕೋಪ್ ಮಹತ್ವದ ಸಾಧನೆ! 57 ಜ್ಯೋತಿರ್ವರ್ಷ ದೂರದ 'ಗುಲಾಬಿ ಗ್ರಹ' GJ 504b ವಾತಾವರಣದಲ್ಲಿ ಉಪ್ಪಿನ ಮೋಡಗಳು ಪತ್ತೆ.

ಉಡುಪಿ: ಸೈಬರ್ ವಂಚನೆಗೆ ಹಿರಿಯ ಮಹಿಳೆ ಬಲಿ, 65 ಲಕ್ಷ ರೂ. ಲೂಟಿ!

ಉಡುಪಿಯಲ್ಲಿ ಮುಂಬೈ ಪೊಲೀಸ್ ಸೋಗಿನಲ್ಲಿ ವಾಟ್ಸಪ್ ಕರೆ ಮಾಡಿ ಹಿರಿಯ ಮಹಿಳೆಗೆ 65 ಲಕ್ಷ ರೂ. ವಂಚಿಸಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ: ಬ್ರಹ್ಮಾಂಡ ಗುರೂಜಿ ಹೇಳಿದ್ದೇನು?

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಸೋಮವಾರ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಉಪವಾಸದ ಬೆಸ್ಟ್ ಫುಡ್ ‘ರಾಜಗೀರಾ’: ತೂಕ ಇಳಿಸೋಕೆ ಇಷ್ಟೊಂದು ಹೆಲ್ಪ್ ಮಾಡುತ್ತಾ ಈ ದೇವಬೀಜ

ಉಪವಾಸಕ್ಕೆ ಬಳಸುವ ರಾಜಗೀರಾ ಬೀಜಗಳ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ತೂಕ ಇಳಿಸಲು ಮತ್ತು ಮೂಳೆಗಳ ಬಲಕ್ಕೆ ಈ ಗ್ಲುಟನ್ ಮುಕ್ತ ಸೂಪರ್‌ಫುಡ್ ಸೇವಿಸಿ.