
ಉಡುಪಿ: ಕಾರ್ಕಳ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ದಿ. ಗೋಪಾಲ ಭಂಡಾರಿ ಅವರ ಪುತ್ರ ಸುದೀಪ್ ಭಂಡಾರಿ (48) ಅವರ ಆತ್ಮಹತ್ಯೆಯ ದುರಂತ ಸಾವಿನ ವಿಷಯ ತಿಳಿದು ಉಡುಪಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷರಾದ ದಿನಕರ ಶೆಟ್ಟಿ, ಪಳ್ಳಿ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಹೇಳಿಕೆ ನೀಡಿರುವ ದಿನಕರ ಶೆಟ್ಟಿ ಅವರು, ಈ ದುಃಖದ ಸಮಯದಲ್ಲಿ ಗೋಪಾಲ ಭಂಡಾರಿ ಅವರ ಕುಟುಂಬದೊಂದಿಗೆ ನಾವೆಲ್ಲ ಇದ್ದೇವೆ. ಅಕಾಲಿಕವಾಗಿ ನಮ್ಮನ್ನಗಲಿದ ಸುದೀಪ್ ಭಂಡಾರಿ ಅವರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.
ಅಲ್ಲದೇ, ಈ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ಅವರ ತಾಯಿ, ಪತ್ನಿ, ಮಕ್ಕಳು, ತಂಗಿ, ತಮ್ಮ, ಭಾವ ಮತ್ತು ಕುಟುಂಬದ ವರ್ಗದವರೆಲ್ಲರಿಗೂ ಹಾಗೂ ಅವರ ಆತ್ಮೀಯ ಅಭಿಮಾನಿಗಳಿಗೆ ಕರುಣಿಸಲಿ ಎಂದು ಅವರು ಸಂತಾಪ ಸೂಚಿಸಿದ್ದಾರೆ.