spot_img

ಕಾರ್ಕಳ ಜ್ಞಾನಸುಧಾ :76ನೇ ಗಣರಾಜ್ಯೋತ್ಸವ ಸಂಭ್ರಮ

Date:

ಭವ್ಯ ಭಾರತವನ್ನು ಕಟ್ಟಿ ಧನ್ಯತೆಯನ್ನು ಪಡೆಯಬೇಕು – ಪದ್ಮಪ್ರಸಾದ್ ಜೈನ್ ನೆಲ್ಲಿಕಾರು
ಕಾರ್ಕಳ : ಧರ್ಮವನ್ನು ಮೀರಿದ ರಾಷ್ಟ್ರೀಯ ಹಬ್ಬಗಳಲ್ಲಿ ಗಣರಾಜ್ಯೋತ್ಸವವು ಒಂದು. ನಮ್ಮ ಜವಾಬ್ದಾರಿಯನ್ನು ನೆನಪಿಕೊಂಡು ಪ್ರಜಾಪ್ರಭುತ್ವದ ಘನತೆ-ಗೌರವವನ್ನು ಎತ್ತಿಹಿಡಿಯುವತ್ತ ವಿದ್ಯಾರ್ಥಿಗಳು ಚಿತ್ತಹರಿಸಬೇಕು. ಭವ್ಯ ಭಾರತವನ್ನು ಕಟ್ಟುವಲ್ಲಿ ಪ್ರಾಮಾಣಿಕವಾಗಿ ದುಡಿದು ದೇಶ ಸೇವೆಯ ಧನ್ಯತೆಯನ್ನು ಪಡೆಯಬೇಕು ಎಂದು ಸೌತ್‌ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಶನ್‌ನ ಅಧ್ಯಕ್ಷರಾದ ಶ್ರೀ ಪದ್ಮಪ್ರಸಾದ್ ಜೈನ್ ನೆಲ್ಲಿಕಾರು ಹೇಳಿದರು.
ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆದ 76ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದರು. ಇದೇ ಸಂದರ್ಭ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ಶ್ರೀ ದಿನೇಶ್ ಎಂ ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲೆ ಶ್ರೀಮತಿ
ವಾಣಿ.ಕೆ., ಪಿ.ಆರ್.ಒ ಶ್ರೀಮತಿ ಜ್ಯೋತಿ ಪದ್ಮನಾಭ್ ಭಂಡಿ, ಪತ್ರಕರ್ತ ಶ್ರೀ ರಾಮಚಂದ್ರ ಬರೆಪ್ಪಾಡಿ, ಓಸಿಯನಿಕ್ ಇನ್ಫ್ರಾದ ಮಾಲಿಕ ಶ್ರೀ ಸಂತೋಷ್ ಉಪಸ್ಥಿತರಿದ್ದರು. ಕನ್ನಡ
ಉಪನ್ಯಾಸ ಶ್ರೀ ಸಂತೋಷ್ ನೆಲ್ಲಿಕಾರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಿಯಲ್‌ಮಿ ನಿಯೋ 7 ಟರ್ಬೋ AI ಬಿಡುಗಡೆ: ಗೇಮರ್‌ಗಳಿಗಾಗಿ ಮೀಡಿಯಾಟೆಕ್ ಡೈಮನ್ಸಿಟಿ 9400e ಪ್ರೊಸೆಸರ್‌ನ ಫೋನ್

ಸ್ಮಾರ್ಟ್‌ಫೋನ್ ಮಾರುಕಟ್ಟೆಯಲ್ಲಿ ತನ್ನ ಗೇಮಿಂಗ್ ಮತ್ತು ಬ್ಯಾಟರಿ-ಕೇಂದ್ರಿತ ಫೋನ್‌ಗಳಿಂದ ಹೆಸರುವಾಸಿಯಾಗಿರುವ ರಿಯಲ್ಮಿ, ಈಗ ತನ್ನ ನಿಯೋ ಸರಣಿಗೆ ಹೊಸ ಸೇರ್ಪಡೆಯನ್ನು ಮಾಡಿದೆ.

ಪೆರ್ಡೂರು: ಶಾಲಾ ಬಸ್ ಡಿಕ್ಕಿ, ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ – ಮತ್ತೊಬ್ಬನಿಗೆ ಗಂಭೀರ ಗಾಯ

ಪೆರ್ಡೂರು ಗ್ರಾಮದ ಕೊಳಂಬೆ ಕ್ರಾಸ್ ಬಳಿ ಶಾಲಾ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದು, ಸಹಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

ಉಡುಪಿ ರಸ್ತೆ ಅಪಘಾತ: ಬೈಕ್ ಸ್ಕಿಡ್ ಆಗಿ ಯುವಕನ ದುರ್ಮರಣ, ಸಹಸವಾರ ಗಂಭೀರ

ಬೈಕ್ ಸ್ಕಿಡ್ ಆಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸಹಸವಾರ ಸಾವನ್ನಪ್ಪಿದ್ದು, ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ಮಧುಮೇಹ ಮತ್ತು ಬೊಜ್ಜು ನಿಯಂತ್ರಣಕ್ಕೆ ದಾಸವಾಳ: ಪ್ರಕೃತಿಯ ವರದಾನ

ದಾಸವಾಳದ ಎಲೆಗಳು, ಹೂವುಗಳು ಮತ್ತು ಬೇರುಗಳು ವೈವಿಧ್ಯಮಯ ಪೋಷಕಾಂಶಗಳು ಮತ್ತು ಜೈವಿಕ ಸಕ್ರಿಯ ಸಂಯುಕ್ತಗಳಿಂದ ಸಮೃದ್ಧವಾಗಿವೆ.