ಕಾರ್ಕಳ ಜ್ಞಾನಸುಧಾ : ವಾಣಿಜ್ಯ ವಿಭಾಗಕ್ಕೆ ಉಚಿತ ಶಿಕ್ಷಣಕ್ಕೆ ಅರ್ಜಿ ಆಹ್ವಾನ

Date:

spot_img

ಗಣಿತನಗರ : ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್(ರಿ.) ಇದರ ಆಡಳಿತಕ್ಕೆ ಒಳಪಟ್ಟ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ ಸಮಾಜಮುಖಿ ಕಾರ್ಯಕ್ರಮದ ಒಂದು ಭಾಗವಾಗಿ ಕಳೆದ ವರ್ಷದಿಂದ ವಾಣಿಜ್ಯ ವಿಭಾಗದಲ್ಲಿ ಅರ್ಹ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. 2025-26ನೇ ಶೈಕ್ಷಣಿಕ ಸಾಲಿನ ವಾಣಿಜ್ಯ ವಿಭಾಗಕ್ಕೆ ದಾಖಲಾತಿ ಬಯಸುವ, ಹತ್ತನೇ ತರಗತಿಯಲ್ಲಿ ಶೇ 95ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳ ಸಂಪೂರ್ಣ ಉಚಿತ ಶಿಕ್ಷಣ, ಶೇ90ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಕಾಲೇಜು ಶುಲ್ಕದಲ್ಲಿ ಸಂಪೂರ್ಣ ವಿನಾಯಿತಿ, ಶೇ 85ಕ್ಕಿಂತ ಅಧಿಕ ಅಂಕ ಗಳಿಸುವ ವಿದ್ಯಾರ್ಥಿಗಳಿಗೆ ಶೇ.25ರಷ್ಟು ಕಾಲೇಜು ಶುಲ್ಕದಲ್ಲಿ ವಿನಾಯಿತಿ ನೀಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಆಸಕ್ತ ವಿದ್ಯಾರ್ಥಿಗಳು ಮತ್ತು ಪೋಷಕರು ಸಂಸ್ಥೆಯ ಕಛೇರಿಯನ್ನು ಸಂಪರ್ಕಿಸಿ ಮಾಹಿತಿ ಪಡೆದು ಕೊಳ್ಳಬಹುದು ಎಂದು ಸಂಸ್ಥೆಯು ಪ್ರಕಟಣೆಯಲ್ಲಿ ತಿಳಿಸಿದೆ. ಮಾಹಿತಿಗಾಗಿ : 8147454906

2024-25ರ ಫಲಿತಾಂಶದಲ್ಲಿ ರಕ್ಷಾ ರಾಮ್‌ಚಂದ್ರ ನಾಯಕ್ 597 ಅಂಕಗಳೊಂದಿಗೆ ರಾಜ್ಯಕ್ಕೆ 3ನೇ ಸ್ಥಾನಿಯಾಗಿ ಹಾಗೂ ಉಡುಪಿ ಜಿಲ್ಲೆಗೆ ದ್ವಿತೀಯ ಸ್ಥಾನಿಯಾಗಿ ಸಹನಾ ನಾಯಕ್‌ ಹಾಗೂ ತನ್ವಿ ರಾವ್‌ 594 ಅಂಕ ಗಳಿಸಿ ರಾಜ್ಯಕ್ಕೆ 6ನೇ ಬ್ಯಾಂಕ್ ಹಾಗೂ ಜಿಲ್ಲೆಗೆ 3ನೇ ಸ್ಥಾನಿಯಾಗಿ ಹೊರಹೊಮ್ಮಿದ್ದು, ವಿದ್ಯಾರ್ಥಿಗಳಾದ ವಿ. ಯಶಸ್ವಿ ನಾಯ್ಕ (591 ಅಂಕ) ಹಾಗೂ ಪ್ರಜ್ಞಾ ಹೆಗ್ಡೆ (591)ಗಳಿಸಿದ್ದಾರೆ. ಈ ಬಾರಿ 2025ರ ಜನವರಿಯಲ್ಲಿ ನಡೆದ ಸಿ.ಎಸ್‌.ಇ.ಇ.ಟಿ ಪರೀಕ್ಷೆ ಬರೆದ 32 ವಿದ್ಯಾರ್ಥಿಗಳಲ್ಲಿ 28 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಅತ್ಯುತ್ತಮ ಫಲಿತಾಂಶ ದಾಖಲಿಸಿರುತ್ತಾರೆ.

ಪಠ್ಯೇತರ ಚಟುವಟಿಕೆಯಲ್ಲಿ ಎನ್.ಸಿ.ಸಿ ಮತ್ತು ಎನ್.ಎಸ್.ಎಸ್ ಕಾರ್ಯಚರಿಸುತ್ತಿದ್ದು, ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣವನ್ನು ಬೆಳೆಸಿ ಈಗಾಗಲೇ ರಿತಿಕಾ ಕಾಮತ್‌, ವೃದ್ಧಿ ಶೆಟ್ಟಿ ಮತ್ತು ಸಮಿಯಾ ಹೆಗ್ಡೆ ರಾಜ್ಯಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿದ ಹಿರಿಮೆಗೆ ಪಾತ್ರರಾಗಿದ್ದಾರೆ. ಕ್ರೀಡೆಯಲ್ಲಿ ವಿದ್ಯಾರ್ಥಿಗಳು ಬಾಸ್ಕೆಟ್ ಬಾಲ್, ತ್ರೋಬಾಲ್, ವಾಲಿಬಾಲ್, ಶಟಲ್ ಬ್ಯಾಡ್ಮಿಂಟನ್, ಫೂಟ್ಬಾಲ್ ಮತ್ತು ಅಥ್ಲೆಟಿಕ್ಸ್‌ ತರಬೇತಿ ಪಡೆದು ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಭಾಗವಹಿಸಿರುತ್ತಾರೆ. ಮಕ್ಕಳಲ್ಲಿ ವ್ಯವಹಾರ ಜ್ಞಾನವನ್ನು ಹೆಚ್ಚಿಸಲು ವ್ಯಾಪಾರ ಮೇಳಗಳನ್ನು ಹಾಗೂ ಕೈಗಾರಿಕಾ ಭೇಟಿಯನ್ನು ಆಯೋಜಿಸಲಾಗುತ್ತಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ