
ಗಣಿತನಗರ : ಎನ್.ಎಸ್.ಎಸ್ ನ ಧ್ಯೇಯೋದ್ದೇಶ ವ್ಯಕ್ತಿತ್ವ ವಿಕಸನ. ಇದರ ಸ್ವಯಂ ಸೇವಕ ವಿದ್ಯಾರ್ಥಿಗಳು ಉತ್ತಮ ಕೇಳುಗರಾದರೆ ಶ್ರೇಷ್ಠ ವ್ಯಕ್ತಿಗಳಾಗಿ ಹೊರಹೊಮ್ಮಲು ಸಾಧ್ಯ ಎಂದು ನಿವೃತ್ತ ಪ್ರಾಂಶುಪಾಲರಾದ ಶ್ರೀವರ್ಮ ಅಜ್ರಿ ಎಂ ಮಾತನಾಡಿದರು.
ಅವರು ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನಲ್ಲಿ 2025-26ನೇ ಸಾಲಿನ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಚಟುವಟಿಕೆಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಮಾಜಸೇವಕ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಶ್ರೀ ಅವಿನಾಶ್ ಜಿ. ಶೆಟ್ಟಿ ನೆರವೇರಿಸಿ ಶುಭಹಾರೈಸಿದರು.

ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲರಾದ ಶ್ರೀ ದಿನೇಶ್ ಎಂ. ಕೊಡವೂರ್, ಸಹಯೋಜನಾಧಿಕಾರಿಯಾದ ಶ್ರೀ ಪ್ರಸಾದ್ ಆಚಾರ್ಯ ಎಚ್, ಘಟಕದ ವಿದ್ಯಾರ್ಥಿ ನಾಯಕರಾದ ಭವಿಷ್ ಎನ್ ಶೆಟ್ಟಿ ಹಾಗೂ ಸೃಷ್ಟಿ ಶೆಟ್ಟಿ ರೆಂಜಾಳ ಉಪಸ್ಥಿತರಿದ್ದರು.

ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾ ರಾವ್ ಯು, ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಡೀನ್ ಅಕಾಡೆಮಿಕ್ಸ್ ಡಾ.ಮಿಥುನ್ ಯು, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಸುಮಿತ್ರಾ, ಸಂಖ್ಯಾಶಾಸ್ತ್ರ ಉಪನ್ಯಾಸಕ ಶ್ರೀ ಮಂಜುನಾಥ್ ಮುದೂರು ಉಪಸ್ಥಿತರಿದ್ದರು.
ಕಾಲೇಜಿನ ಎನ್.ಎಸ್.ಎಸ್ ಯೋಜನಾಧಿಕಾರಿ ಶ್ರೀ ಶೈಲೇಶ್ ಶೆಟ್ಟಿ ಬೈಲೂರು ಸ್ವಾಗತಿಸಿ, ಆಂಗ್ಲ ಭಾಷಾ ವಿಭಾಗ ಮುಖ್ಯಸ್ಥೆ ಶ್ರೀಮತಿ ಸಂಗೀತಾ ಕುಲಾಲ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.