ಕಾರ್ಕಳ ಕೆಲ್‌ಟೆಕ್ ಘಟಕ ಹಾಗೂ ಸ್ವರಾಜ್ ಮೈದಾನದಲ್ಲಿ ಬೆಂಕಿ ಅವಘಡ

Date:

spot_img

ಕಾರ್ಕಳ: ತಾಲೂಕಿನ ವರಂಗದಲ್ಲಿರುವ ಕೆಲ್‌ಟೆಕ್‌ ಎನರ್ಜಿ ಲಿಮಿಟೆಡ್‌ನ ಆವರಣ ಹಾಗೂ ಪಟ್ಟಣದ ಪ್ರಸಿದ್ಧ ಸ್ವರಾಜ್ ಮೈದಾನದಲ್ಲಿ ಮಂಗಳವಾರ ಪ್ರತ್ಯೇಕ ಅಗ್ನಿ ಅವಘಡಗಳು ಸಂಭವಿಸಿದ್ದು, ಸ್ಥಳೀಯರಲ್ಲಿ ಆತಂಕ ಮೂಡಿಸಿವೆ.

ವರಂಗ ಕೆಲ್‌ಟೆಕ್‌ ಕಾಡಿನಲ್ಲಿ ಬೆಂಕಿ ಅನಾಹುತ ವರಂಗದಲ್ಲಿರುವ ಕೆಲ್‌ಟೆಕ್‌ ಎನರ್ಜಿ ಸಂಸ್ಥೆಗೆ ಸೇರಿದ ಸುಮಾರು 600 ಎಕರೆ ವಿಸ್ತೀರ್ಣದ ದಟ್ಟ ಅರಣ್ಯ ಪ್ರದೇಶದಲ್ಲಿ ಮಂಗಳವಾರ ಬೆಳಿಗ್ಗೆ 6:30ರ ಸುಮಾರಿಗೆ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ. ಸ್ಫೋಟಕಗಳನ್ನು ಸಂಗ್ರಹಿಸಿಡುವ ಸುರಕ್ಷಿತ ವಲಯದ (Explosive Storage Safety) ಸಮೀಪದಲ್ಲೇ ಈ ಘಟನೆ ನಡೆದಿದ್ದು, ಬೆಂಕಿಯ ಕೆನ್ನಾಲಿಗೆಗೆ ಅರಣ್ಯದಲ್ಲಿದ್ದ ಅಪಾರ ಪ್ರಮಾಣದ ಬಿದಿರು ಮೆಳೆಗಳು ಭಸ್ಮವಾಗಿವೆ. ಸಕಾಲದಲ್ಲಿ ಅಗ್ನಿಶಾಮಕ ದಳಕ್ಕೆ ಮಾಹಿತಿ ತಲುಪಿದ ಕಾರಣ ದೊಡ್ಡ ಮಟ್ಟದ ಅಪಾಯವೊಂದು ತಪ್ಪಿದಂತಾಗಿದೆ.

ಘಟನಾ ಸ್ಥಳಕ್ಕೆ ಆಗಮಿಸಿದ ಕಾರ್ಕಳದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ಹತೋಟಿಗೆ ತರಲು ತೀವ್ರ ಹರಸಾಹಸ ಪಟ್ಟರು. ಈ ಕಾರ್ಯಾಚರಣೆಯಲ್ಲಿ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಹರಿಪ್ರಸಾದ್ ಶೆಟ್ಟಿ, ಚಾಲಕ ಲೋಕೇಶ್, ನಿತ್ಯಾನಂದ ಹಾಗೂ ಬಸವರಾಜ್ ಪಾಲ್ಗೊಂಡಿದ್ದರು.

ಸ್ವರಾಜ್ ಮೈದಾನದಲ್ಲೂ ಆಕಸ್ಮಿಕ ಬೆಂಕಿ ಇತ್ತ ಕೆಲ್‌ಟೆಕ್‌ ಕಾರ್ಯಾಚರಣೆಯ ಬೆನ್ನಲ್ಲೇ, ಮಂಗಳವಾರ ಮಧ್ಯಾಹ್ನ ಕಾರ್ಕಳದ ಸ್ವರಾಜ್ ಮೈದಾನದಲ್ಲೂ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಮೈದಾನದ ಒಣಗಿದ ಹುಲ್ಲಿಗೆ ಬೆಂಕಿ ತಗುಲಿ ಹರಡಲಾರಂಭಿಸಿತು. ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಈ ಕಾರ್ಯಾಚರಣೆಯಲ್ಲಿ ಸಹಾಯಕ ಠಾಣಾಧಿಕಾರಿ ಚಂದ್ರಶೇಖರ್ ಅವರೊಂದಿಗೆ ರೂಪೇಶ್, ಚಾಲಕ ಮುಜಾಮಿಕ್, ಗಣೇಶ್, ದಿನೇಶ್ ಮತ್ತು ಭೀಮಪ್ಪ ಶ್ರಮಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.