
ಕಾರ್ಕಳ : ಕಾರ್ಕಳ ತಾಲೂಕಿನ ಕಸಬಾ ಗ್ರಾಮದ ನಿವಾಸಿಯಾದ ನಜೀರ್ ಅಹಮ್ಮದ್ ಶೇಖ್ (58) ಅವರು ಶನಿವಾರ ತೋಟದಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತೀವ್ರ ಸಕ್ಕರೆ ಖಾಯಿಲೆ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಶೇಖ್, ಜೀವನದಲ್ಲಿ ಜಿಗುಪ್ಸೆಗೊಂಡು ಇಂತಹ ಆಘಾತಕಾರಿ ನಿರ್ಧಾರಕ್ಕೆ ಬಂದಿರಬಹುದೆಂದು ಶಂಕಿಸಲಾಗಿದೆ. ಈ ಸಂಬಂಧ ಶೇಖ್ ಅವರ ಸಹೋದರ ಕಾರ್ಕಳ ನಗರ ಠಾಣೆಗೆ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.