ಶರಣಾಗತ ನಕ್ಸಲರಿಗೆ ಸರ್ಕಾರದ ಪ್ಯಾಕೇಜ್ : ಶಾಸಕ ಸುನೀಲ್ ಕುಮಾರ್ ಆಕ್ರೋಶ

Date:

spot_img

ಕಾರ್ಕಳ: ನಕ್ಸಲರು ಶರಣಾದ ಹಿನ್ನಲೆಯಲ್ಲಿ ರಾಜ್ಯ ಸರಕಾರ ನೀಡುತ್ತಿರುವ ಪರಿಹಾರ ಪ್ಯಾಕೇಜ್‌ಗೆ ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ.ಸುನೀಲ್ ಕುಮಾರ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತಮ್ಮ ಫೇಸ್‌ಬುಕ್ ಮತ್ತು ಎಕ್ಸ್ ಖಾತೆಗಳಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಅವರು, “ಸರ್ಕಾರವು ಯಾವ ಆಧಾರದ ಮೇಲೆ ಈ ಪ್ಯಾಕೇಜ್ ನೀಡುತ್ತಿದೆ?” ಎಂದು ಪ್ರಶ್ನಿಸಿದರು
ಸರ್ಕಾರ ಆರು ನಕ್ಸಲರಿಗೆ ನೀಡಿರುವ ಶರಣಾಗತಿ ಪ್ಯಾಕೇಜ್ ನಾಗರಿಕ ಸಮಾಜವನ್ನು ಬೆಚ್ಚಿ ಬೀಳಿಸಿದೆ.ಈ ನಡೆಯ ಹಿಂದಿನ ಮೂಲವನ್ನು ಸರ್ಕಾರ ಸಾರ್ವಜನಿಕರಿಗೆ ಸ್ಪಷ್ಟಪಡಿಸಬೇಕು.ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ತಕ್ಷಣ ನಕ್ಸಲರು, ಭಯೋತ್ಪಾದಕರಿಗೆ ವಿಶೇಷ ಸೌಲಭ್ಯ ಸಿಗುತ್ತಿದ್ದು ಅವರಿಗೆ ಕ್ಷಮಾದಾನ, ಪ್ರಕರಣಗಳ ರದ್ದತಿ ಮತ್ತು ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ.ಆದರೆ, ಇದು ಪೊಲೀಸರು ಮತ್ತು ಸಾರ್ವಜನಿಕರ ವಿಶ್ವಾಸವನ್ನು ಕುಗ್ಗಿಸುವುದಿಲ್ಲವೇ? ಎಂದು ಶಾಸಕ ವಿ.ಸುನೀಲ್ ಕುಮಾರ್ ಪ್ರಶ್ನಿಸಿದರು.

‘ರಾಷ್ಟ್ರಕವಿ ಕುವೆಂಪು ಅವರ ಜನ್ಮಸ್ಥಳವಾದ ತಣ್ಣನೆಯ ಮಲೆನಾಡು ಪ್ರದೇಶ ನಕ್ಸಲರ ಪ್ರಭಾವಕ್ಕೆ ಒಳಗಾಗಿರುವ ಪ್ರದೇಶವಾಗಿದ್ದು, ಶರಣಾದ ನಕ್ಸಲರಿಗೆ ಸರ್ಕಾರ ಸೌಲಭ್ಯ ಕಲ್ಪಿಸಿ, ನಗರ ನಕ್ಸಲರಾಗಲು ಪ್ರೋತ್ಸಾಹಿಸುವುದೇ’ ಎಂದು ಶಾಸಕರು ತಮ್ಮ ಹೇಳಿಕೆಯಲ್ಲಿ ಕಳವಳ ವ್ಯಕ್ತಪಡಿಸಿದರು.

ಈ ಪ್ರಕ್ರಿಯೆಯನ್ನು ‘ಶರಣಾಗತಿ ಪ್ರಹಸನ’ ಎಂದ ಅವರು, ಈ ನಡೆ ಅನುಮಾನಾಸ್ಪದವಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ವಿ.ಸುನೀಲ್ ಕುಮಾರ್ ರವರ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.