ಕಾರ್ಕಳದಲ್ಲಿ ಮನೆಗೆ ಬೆಂಕಿ: 6 ಲಕ್ಷ ರೂ. ನಷ್ಟ

Date:

spot_img

ಕಾರ್ಕಳದ ಜೋಡುರಸ್ತೆಯಲ್ಲಿರುವ ಮನೆಯೊಂದಕ್ಕೆ ಬೆಂಕಿ ತಗುಲಿ ಸುಮಾರು ಆರು ಲಕ್ಷ ರೂ. ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಜೋಡುರಸ್ತೆಯ ಸಿದ್ಧಿವಿನಾಯಕ ಲೇಔಟ್‌ನಲ್ಲಿರುವ ಡಾ. ಚಿದಾನಂದ ಕುಲಕರ್ಣಿ ಅವರ ಮನೆಯಲ್ಲಿ ಜನವರಿ 29 ರಂದು ರಾತ್ರಿ 1.50ಕ್ಕೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಬೆಂಕಿ ಕಾಣಿಸಿಕೊಂಡಿದೆ.

ಈ ದುರ್ಘಟನೆಯಲ್ಲಿ ಟಿವಿ, ಕಿಟಕಿಗಳು, ದೀಪಗಳು, ಫ್ಯಾನ್‌ಗಳು, ಸ್ವಿಚ್‌ ಬೋರ್ಡ್‌ಗಳು, ಲ್ಯಾಪ್‌ಟಾಪ್‌, ಸೋಫಾ ಸೆಟ್, ಪೀಠೋಪಕರಣಗಳು ಸೇರಿದಂತೆ ಸುಮಾರು 6 ಲಕ್ಷ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣ ಸ್ಥಳೀಯರಾದ ಮೊಹಮ್ಮದ್ ಅಲಿ ( ಜಿಮ್ ಟ್ರೈನರ್)ಅವರು ಅಗ್ನಿ ಶಾಮಕ ದಳವನ್ನು ಸಂಪರ್ಕಿಸಿದ್ದಾರೆ.ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿಶಾಮಕ ದಳದ ಪ್ರಭಾರ ಠಾಣಾಧಿಕಾರಿ ಚಂದ್ರಶೇಖರ, ಅಚ್ಯುತ್‌ ಕರ್ಕೇರ, ಹರಿಪ್ರಸಾದ್‌, ಚಾಲಕ ಜಯಮೂಲ್ಯ ಹಾಗೂ ನಿತ್ಯಾನಂದ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.