ರೆಂಜಾಳ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಪುನಃ ಪ್ರತಿಷ್ಠಾ ಮಹೋತ್ಸವ

Date:

spot_img

ಕಾರ್ಕಳ: ತಾಲೂಕಿನ ರೆಂಜಾಳದ ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಾ. 6ರಿಂದ 8 ರವರೆಗೆ ಧಾಮ ಸಂಪ್ರೋಕ್ಷಣಾ ಪೂರ್ವಕ ಜಿನಬಿಂಬಗಳ ಪುನಃ ಪ್ರತಿಷ್ಠಾ ಮಹೋತ್ಸವವು ಅತ್ಯಂತ ವೈಭವದಿಂದ ನೆರವೇರಲಿದೆ.

ಕಾರ್ಕಳ ಜೈನ ಮಠದ ರಾಜಗುರು ಧ್ಯಾನಯೋಗಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ನೇತೃತ್ವದಲ್ಲಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಪದ್ಮವಿಭೂಷಣ ರಾಜರ್ಷಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಈ ಸಮಸ್ತ ಕಾರ್ಯಕ್ರಮಗಳು ಜರುಗಲಿವೆ.

ದಿನಾಂಕ: ಮಾರ್ಚ್ 6 (ಶುಕ್ರವಾರ)

  • ಧಾರ್ಮಿಕ ವಿಧಿಗಳು: ಪ್ರಾತಃಕಾಲದಿಂದಲೇ ವಿವಿಧ ಧಾರ್ಮಿಕ ವಿಧಿವಿಧಾನಗಳು ಪ್ರಾರಂಭವಾಗಲಿವೆ.
  • ಧಾರ್ಮಿಕ ಸಭೆ: ಸಂಜೆ 6 ಗಂಟೆಗೆ ನಡೆಯುವ ಸಭೆಯಲ್ಲಿ ಸ್ವಸ್ತಿಶ್ರೀ ಲಲಿತಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿಯವರು ದಿವ್ಯ ಉಪಸ್ಥಿತರಿರಲಿದ್ದಾರೆ. ಮಾಜಿ ಸಚಿವ ಅಭಯಚಂದ್ರ ಜೈನ್‌ ಅವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
  • ಸಾಂಸ್ಕೃತಿಕ ಕಾರ್ಯಕ್ರಮ: ಬಳಿಕ ಯಕ್ಷಗಾನ ಶೈಲಿಯಲ್ಲಿ ‘ಜಿನಗಂಧೋದಕ ಮಹಿಮೆ’ ಎಂಬ ಕಾವ್ಯ ವಾಚನ-ಪ್ರವಚನ ವೈಭವ ನಡೆಯಲಿದೆ. ಕಾವ್ಯಶ್ರೀ ಅಜೇರು ಅವರ ಹಾಡುಗಾರಿಕೆಯಲ್ಲಿ, ಮುನಿರಾಜ ರೆಂಜಾಳ ಮತ್ತವರ ತಂಡದಿಂದ ಪ್ರವಚನ ನಡೆಯಲಿದೆ.

ದಿನಾಂಕ: ಮಾರ್ಚ್ 7 (ಶನಿವಾರ)

  • ಧಾರ್ಮಿಕ ವಿಧಿಗಳು: ಪ್ರಾತಃಕಾಲದಿಂದ ಧಾರ್ಮಿಕ ಕಾರ್ಯಕ್ರಮಗಳು ಮುಂದುವರಿಯಲಿವೆ.
  • ಪುರ ಮೆರವಣಿಗೆ: ಅಪರಾಹ್ನ 3 ಗಂಟೆಯಿಂದ ಭವ್ಯ ಪುರ ಮೆರವಣಿಗೆ ಸಾಗಲಿದೆ.
  • ಸಾಂಸ್ಕೃತಿಕ ಕಾರ್ಯಕ್ರಮ: ಸಂಜೆ ರೆಂಜಾಳದ ಜೈನ ಬಾಂಧವರಿಂದ ವಿವಿಧ ಸಾಂಸ್ಕೃತಿಕ ಪ್ರದರ್ಶನಗಳು ನಡೆಯಲಿವೆ.
  • ಧಾರ್ಮಿಕ ಸಭೆ: ಸಂಜೆ 6 ಗಂಟೆಗೆ ನಡೆಯುವ ಸಭೆಯಲ್ಲಿ ಕಾರ್ಕಳ ಶ್ರೀಗಳ ದಿವ್ಯ ಉಪಸ್ಥಿತಿ ಇರಲಿದ್ದು, ಮೂಡುಬಿದಿರೆ ಜೈನ ಮಠದ ಸ್ವಸ್ತೀ ಶ್ರೀ ಭಟ್ಟಾರಕ ಡಾ. ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ. ಪ್ರತಿಮಾಧಾರಿ ಶ್ರಾವಕಿ ಡಾ. ಜಯಮಾಲಾ ಎನ್.‌ ಉಜಿರೆ ಅಧ್ಯಕ್ಷತೆ ವಹಿಸಲಿದ್ದಾರೆ.

ದಿನಾಂಕ: ಮಾರ್ಚ್ 8 (ಭಾನುವಾರ) – ಪ್ರಮುಖ ದಿನ

  • ಮುಖ್ಯ ವಿಧಿವಿಧಾನಗಳು: ಪ್ರಾತಃಕಾಲದಿಂದ ಧಾರ್ಮಿಕ ವಿಧಿಗಳು ನಡೆಯಲಿವೆ.
    • ಬೆಳಿಗ್ಗೆ 11:20 ರಿಂದ 11:28: ವೃಷಭ ಲಗ್ನದಲ್ಲಿ ಭಗವಾನ್‌ 1008 ಶ್ರೀ ನೇಮಿನಾಥ ಸ್ವಾಮಿಗೆ 108 ಕಲಶಗಳಿಂದ ಮಹಾಭಿಷೇಕ.
    • ಮಧ್ಯಾಹ್ನ 12:00 ರಿಂದ 12:25: ವೃಷಭ ಲಗ್ನದಲ್ಲಿ ಭಗವಾನ್‌ 1008 ಶ್ರೀ ಚಂದ್ರನಾಥ ಸ್ವಾಮಿಯ ಪ್ರತಿಷ್ಠಾಪನೆ.
    • ನಂತರ: 216 ಕಲಶಗಳಿಂದ ಮಹಾಭಿಷೇಕ ಮತ್ತು ಮಹಾಮಂಗಳಾರತಿ ನೆರವೇರಲಿದೆ.
  • ಸಮರೋಪ ಸಭೆ: ಸಂಜೆ 6 ಗಂಟೆಗೆ ನಡೆಯುವ ಧಾರ್ಮಿಕ ಸಭೆಯಲ್ಲಿ ನರಸಿಂಹರಾಜಪುರ ಅತಿಶಯ ಕ್ಷೇತ್ರ ಸಿಂಹನಗದ್ದೆಯ ಸ್ವಸ್ತಿ ಶ್ರೀ ಲಕ್ಷ್ಮೀಸೇನ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮೀಜಿ ಆಶೀರ್ವಚನ ನೀಡಲಿದ್ದಾರೆ.
  • ಅಧ್ಯಕ್ಷತೆ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವಿರೇಂದ್ರ ಹೆಗ್ಗಡೆಯವರು ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.
  • ಯಕ್ಷಗಾನ: ಕಾರ್ಯಕ್ರಮದ ಕೊನೆಯಲ್ಲಿ ಕಾರ್ಕಳ ಶ್ರೀ ಲಲಿತಕೀರ್ತಿ ಯಕ್ಷಗಾನ ಕಲಾಮಂಡಳಿಯ ಸದಸ್ಯರಿಂದ ‘ಕಮಠೋಪಸರ್ಗವಿಜಯಿ’ ಯಕ್ಷಗಾನ ಪ್ರಸಂಗ ಪ್ರದರ್ಶನಗೊಳ್ಳಲಿದೆ.

ಈ ಬಗ್ಗೆ ಬಸದಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಮಹಾವೀರ ಹೆಗ್ಡೆ ರೆಂಜಾಳ ಮತ್ತು ಆಡಳಿತ ಮೊಕ್ತೇಸರ ಪಾರ್ಶ್ವನಾಥ ಹೆಗ್ಡೆ ಅವರು ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಬಾಡಿಗೆ ಸಂಗಾತಿ ಉದ್ಯಮ: ಒಂಟಿತನಕ್ಕೆ ತಾತ್ಕಾಲಿಕ ಪರಿಹಾರವೇ?

ಬೆಳೆಯುತ್ತಿರುವ ಬಾಡಿಗೆ ಸಂಗಾತಿ ಸಂಸ್ಕೃತಿಯ ಸಂಪೂರ್ಣ ವಿಶ್ಲೇಷಣೆ ಮತ್ತು ಉದ್ಯಮದ ಪ್ರಮುಖ ವಿವರಗಳು. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.