ಕಾರ್ಕಳದ ಸಾಣೂರಿನ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ

Date:

spot_img

ಕಾರ್ಕಳ: ನಡುರಾತ್ರಿಯಲ್ಲಿ ಸಂಭವಿಸಿದ ಗ್ಯಾಸ್ ಸಿಲಿಂಡರ್ ಸ್ಫೋಟದ ತೀವ್ರತೆಗೆ ಮನೆಯ ಗೋಡೆ ಕುಸಿದುಬಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿರುವ ಭೀಕರ ಘಟನೆ ಸಾಣೂರು ಗ್ರಾಮದ ಮುದ್ದಣ್ಣ ನಗರದಲ್ಲಿ ನಡೆದಿದೆ.

ಸಾಣೂರಿನ ಮುದ್ದಣ್ಣ ನಗರದ ನಿವಾಸಿ ವಾರಿಜಾ ಎಂಬುವವರ ಮನೆಯಲ್ಲಿ ಶುಕ್ರವಾರ ತಡರಾತ್ರಿ ಸುಮಾರು 1:30 ರ ವೇಳೆಗೆ ಈ ಭೀಕರ ಅನಾಹುತ ಸಂಭವಿಸಿದೆ. ಮನೆಯ ಅಡುಗೆ ಕೋಣೆಯ ಹೊರಭಾಗದಲ್ಲಿರಿಸಿದ್ದ ಸಿಲಿಂಡರ್ ಹಠಾತ್ತಾಗಿ ಸ್ಫೋಟಗೊಂಡಿದೆ. ಸ್ಫೋಟದ ಭೀಕರತೆ ಎಷ್ಟಿತ್ತೆಂದರೆ ಮನೆಯ ಗೋಡೆಯೇ ಧರೆಗುರುಳಿದೆ. ಮನೆಯೊಳಗಿದ್ದ ವಾಷಿಂಗ್ ಮೆಷಿನ್, ಪೀಠೋಪಕರಣಗಳು, ಬೆಲೆಬಾಳುವ ವಿದ್ಯುತ್ ಉಪಕರಣಗಳು ಹಾಗೂ ಅಡುಗೆ ಪಾತ್ರೆಗಳು ಸಂಪೂರ್ಣವಾಗಿ ಜಖಂಗೊಂಡಿವೆ.

ಅದೃಷ್ಟವಶಾತ್, ಮನೆಯ ಹೊರಪಾರ್ಶ್ವದಲ್ಲಿ ಸ್ಫೋಟ ಸಂಭವಿಸಿದ ಕಾರಣ ಮನೆಯಲ್ಲಿದ್ದವರಿಗೆ ಯಾವುದೇ ಜೀವಹಾನಿ ಅಥವಾ ಗಾಯಗಳಾಗಿಲ್ಲ. ಮಲಗಿದ್ದ ಸಮಯದಲ್ಲಿ ಈ ಘಟನೆ ನಡೆದಿದ್ದು, ಭಾರೀ ಶಬ್ದಕ್ಕೆ ಇಡೀ ಪರಿಸರದ ಜನತೆ ಬೆಚ್ಚಿಬಿದ್ದಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣವೇನು ಎಂಬುದು ಇನ್ನು ತಿಳಿದುಬಂದಿಲ್ಲ. ಈ ಆಕಸ್ಮಿಕ ಅವಘಡದಿಂದಾಗಿ ಕುಟುಂಬಕ್ಕೆ ಸುಮಾರು 3 ಲಕ್ಷ ರೂಪಾಯಿಗಳಿಗೂ ಅಧಿಕ ಆರ್ಥಿಕ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಕಾರ್ಕಳ ಮಾಳ ಬಳಿ ಸರಣಿ ಅಪಘಾತ: 3 ಕಾರು ಜಖಂ

ಕಾರ್ಕಳ ಮಾಳ ಚೆಕ್ ಪೋಸ್ಟ್ ಬಳಿ ಹೆದ್ದಾರಿಯಲ್ಲಿ ಆಯಿಲ್ ಲೀಕ್ ಆಗಿ 3 ಕಾರುಗಳ ನಡುವೆ ಭೀಕರ ಸರಣಿ ಅಪಘಾತ ಸಂಭವಿಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ