ಕಾರ್ಕಳದಲ್ಲಿ ಪ.ಜಾ.- ಪ.ಪಂ. ಕುಂದುಕೊರತೆ ಸಭೆಯಲ್ಲಿ ಅಧಿಕಾರಿಗಳ ಅಸಡ್ಡೆಗೆ ಸಾರ್ವಜನಿಕರ ಆಕ್ರೋಶ !

Date:

spot_img

ಕಾರ್ಕಳ : ಕಾರ್ಕಳ ತಾ. ಪಂ. ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಸಭೆಗೆ ಪುರಸಭೆಯ ಮುಖ್ಯಾಧಿಕಾರಿ ಸೇರಿದಂತೆ ವಿವಿಧ ಇಲಾಖಾ ಸಭೆಗೆ ಗೈರಾಗಿದ್ದ ಹಿನ್ನೆಲೆ ಸಭೆ ತೊರೆದು ಜನತೆ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.

ತಹಶೀಲ್ದಾರ್‌ ಪ್ರದೀಪ್‌ ಆರ್. ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಮೊದಲು ತಾ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಪುರಸಭೆಯ ಮುಖ್ಯಾಧಿಕಾರಿಯ ಅನುಪಸ್ಥಿತಿಯ ಬಗ್ಗೆ ಸೇರಿದ ಜನತೆ ಆಕ್ರೋಶ ವ್ಯಕ್ತಪಡಿಸಿದರು. ಪ.ಜಾ. – ಪ.ಪಂ. ಮುಖಂಡರು ಮೊದಲು ಅಧಿಕಾರಿಗಳಲ್ಲಿನ ಸಮಸ್ಯೆ ಪರಿಹರಿಸಿಕೊಳ್ಳಿ ಆಮೇಲೆ‌‌ ನಮ್ಮನ್ನು ಸಭೆಗೆ ಕರೆಸಿ ಎಂದು ತರಾಟೆಗೆತ್ತಿಕೊಂಡರು. ಅಧಿಕಾರಿಗಳಿಗೆ ನಮ್ಮ ಸಮುದಾಯದ ಬಗ್ಗೆ ಅಸಡ್ಡೆ ಏಕೆ ? ಎಂದು ಪ್ರಶ್ನಿಸಿದ ಅವರು ಹೆಚ್ಚಿನ ಅಧಿಕಾರಿಗಳು ಸಭೆಯಲ್ಲಿರದ ಕಾರಣ ಸಭೆ ತೊರೆದರು.

ಕಾರ್ಕಳ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಜ. 13 ರಂದು ನಡೆದ‌ ತಾಲೂಕು ಮಟ್ಟದ ಪ. ಜಾ. ಹಾಗೂ ಪ.ಪಂ. ಜನಾಂಗದವರ ಹಿತರಕ್ಷಣಾ ಹಾಗೂ ಕುಂದುಕೊರತೆ ಪೂರ್ವಭಾವಿ ಸಭೆಯಲ್ಲಿ ಸುಮಾರು 57 ಅಹವಾಲುಗಳು ಬಂದಿದ್ದವು. ಮತ್ತಾವು ಸೇತುವೆ, ಈದು ಗ್ರಾಮದಲ್ಲಿ ಪ.ಜಾ-ಪ.ಪಂ.ದವರ ಜಾಗದ ಸಮಸ್ಯೆ, ನೂರಾಲ್‌ಬೆಟ್ಟಿನಲ್ಲಿ ಮೂಲಸೌಕರ್ಯಗಳ ಕೊರತೆ, ಶಾಲೆಗಳಲ್ಲಿ ಅಕ್ಷರ ದಾಸೋಹ ಸಮಸ್ಯೆ, ಗಣಿ ಇಲಾಖೆ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳ ಪರಿಹಾರಕ್ಕಾಗಿ ಸಮುದಾಯದ ಜನತೆ ಸಭೆಯಲ್ಲಿ ಭಾಗಿಯಾಗಿದ್ದರು. ಆದರೆ, ಮುಖ್ಯವಾಗಿ ಬೇಕಿದ್ದ ಅಧಿಕಾರಿಗಳೇ ಸಭೆಯಲ್ಲಿ ಹಾಜರಿರದ ಕಾರಣ ಅವರು ಸಭೆಯನ್ನು ತೊರೆದರು.

ಸಭೆಗೆ ದೌಡಾಯಿಸಿದ ಅಧಿಕಾರಿಗಳು
ಆರಂಭದಲ್ಲಿ ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಸಭೆಯಲ್ಲಿರಲಿಲ್ಲ. ಆದರೆ, ಅವರು ಕೆಲ ಹೊತ್ತಿನ ಬಳಿಕ ಸಭೆಯಲ್ಲಿ ಕಾಣಿಸಿಕೊಂಡರು. ಇಲಾಖಾಧಿಕಾರಿಗಳು ಇಲ್ಲದ ಕುರಿತು ಜನತೆ ಆಕ್ರೋಶಗೊಂಡು ಸಭೆ ಬಹಿಷ್ಕರಿಸಿದ ಮಾಹಿತಿ ತಿಳಿದ ಇತರೆ ಇಲಾಖಾಧಿಕಾರಿಗಳು ಒಬ್ಬೊಬ್ಬರಾಗಿ ಸಭೆಗೆ ಆಗಮಿಸಿದರು.

ಬಳಿಕ ನಡೆದ ಅಧಿಕಾರಿಗಳ ಸಭೆಯಲ್ಲಿ ತಹಶೀಲ್ದಾರ್‌ ಮಾತನಾಡಿ, ಯಾವ ಇಲಾಖೆಯಲ್ಲಿ ಉಪಸ್ಥಿತರಿರಬೇಕಿದ್ದ ಅಧಿಕಾರಿಗಳ ಪರವಾಗಿ ಬೇರೆಯವರು ಹಾಜರಾಗಿದ್ದರೋ ಆ ಇಲಾಖೆಯನ್ನು ಗೈರು ಎಂದು ಪರಿಗಣಿಸಲಾಗುವುದು. ಮತ್ತೊಮ್ಮೆ ಎಲ್ಲಾ ಇಲಾಖೆಗಳಿಗೆ ನೋಟಿಸ್‌ ಕಳುಹಿಸಿ ಮುಂದಿನ ಸಭೆಯ ದಿನವನ್ನು ನಿಗದಿಗೊಳಿಸಲಾಗುವುದು ಎಂದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.