
ಕಾರ್ಕಳದ ಬಂಗ್ಲೆಗುಡ್ಡೆಯ ಬಳಿ ಜಾರ್ಕಳ ಸಮೀಪ ಶಾಲಾ ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು, ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿನಿಯರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ.
ತೊಯಿಬಾ ಗಾರ್ಡನ್ ಆಂಗ್ಲ ಮಾಧ್ಯಮ ಮಹಿಳಾ ಕಾಲೇಜಿನ ಶಾಲಾ ಬಸ್ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಸಮಯದಲ್ಲಿ, ಕಾರು ಅತೀವೇಗವಾಗಿ ಬಂದು ಬಸ್‌ಗೆ ಡಿಕ್ಕಿಯಾಗಿದೆ. ಅಪಘಾತದಿಂದ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್‌ಗೂ ಹಾನಿಯಾಗಿದೆ.
ಕಾರು ಚಾಲಕನ ವೇಗದ ಚಾಲನೆ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಆದರೂ, ಚಾಲಕನಿಗೆ ಯಾವುದೇ ಗಾಯಗಳಾಗಿಲ್ಲ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.