spot_img

ಕಾರ್ಕಳ ಜ್ಞಾನಸುಧಾ – ಶಿಕ್ಷಕರ ದಿನಾಚರಣೆಸಾವಧಾನದ ಮನಸ್ಥಿತಿ ಗೌರವದ ಉಪಸ್ಥಿತಿ : ವಸಂತ್ ಆಚಾರ್

Date:

ಗಣಿತನಗರ: ಇಂದಿನ ಬದುಕು ಒತ್ತಡದಲ್ಲಿರಲು ಕಾರಣ ಮನುಷ್ಯನಿಗೆ ತೃಪ್ತಿ ಇಲ್ಲದಿರುವುದೇ ಆಗಿದೆ. ನೆಮ್ಮದಿಯನ್ನು ಕಳಕೊಂಡ ಮನುಜ ತಾಳ್ಮೆ, ಸಹನೆಯ ಮನೋಭಾವವನ್ನು ಇಟ್ಟುಕೊಳ್ಳುವುದು ಮುಖ್ಯ. ವಿದ್ಯಾರ್ಥಿ ಜೀವನದಲ್ಲಿಯೇ ಸಾವಧಾನದ ಮನಸ್ಥಿತಿಯನ್ನು ರೂಢಿಸಿಕೊಂಡರೆ ಭವಿಷ್ಯದಲ್ಲಿ ಗೌರವದ ಉಪಸ್ಥಿತಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯ ಎಂದು ಪಳ್ಳಿ ಸ.ಪ.ಪೂ.ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶ್ರೀ ವಸಂತ ಆಚಾರ್ ನುಡಿದರು

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆದ ಶಿಕ್ಷಕರ ದಿನಾಚರಣೆಯ ಸಂದರ್ಭ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲಾ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಮಾತನಾಡಿದರು.

ಜ್ಞಾನಸುಧಾ ಒತ್ತಡರಹಿತವಾಗಿ ವಿದ್ಯಾರ್ಥಿಗಳ ಏಳಿಗೆಗೆ ತನ್ನ ಯೋಜನಾ ಬದ್ಧವಾದ ಶೈಕ್ಷಣಿಕ ಚಟುವಟಿಕೆಯನ್ನು ರೂಪಿಸಿಕೊಂಡು, ಮೌಲಿಕವಾದ ವಿಚಾರಧಾರೆಯನ್ನು ಪಸರಿಸುವ ಸಾಮಾಜಿಕ ಕಾರ್ಯಕ್ರಮಗಳ ಮುಖೇನ ಶೈಕ್ಷಣಿಕ ಕ್ಷೇತ್ರದಲ್ಲಿ ನಾಡಿನಲ್ಲಿ ಮಾದರಿಯಾಗಿ ನಿಂತಿದೆ ಎಂದರು.

ನಿವೃತ್ತರಾದ ಬೋಳಾದ ಶ್ರೀ ರಾಮಕೃಷ್ಣ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶ್ರೀ ಸತೀಶ್ ಕುಮಾರ್ ಕೆಮ್ಮಣ್ಣು, ಬೆಳ್ಳಣ್ಣುವಿನ ಸ.ಪ್ರೌ.ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಸುಶೀಲಾ ಎನ್, ಎರ್ಲಪ್ಪಾಡಿಯ ಶ್ರೀ ಅನಂತಮತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶ್ರೀ ಎನ್. ವಿಷ್ಣುಮೂರ್ತಿ ಭಟ್, ತೆಳ್ಳಾರಿನ ಸ.ಪ್ರೌ.ಶಾಲೆಯ ಶಿಕ್ಷಕಿ ಶ್ರೀಮತಿ ಅನುಪಮ ಚಿಪ್ಲೂಣಕರ್ ಹಾಗೂ ನಿಟ್ಟೆಯ ಎನ್.ಎಸ್.ಎ.ಎಂ ಆಂಗ್ಲಮಾಧ್ಯಮ ಪ್ರೌಢಶಾಲೆಯ ಶ್ರೀಮತಿ ಗ್ರೆಟ್ಟಾ ಸಲ್ಡಾನ್ಹನರವರನ್ನು ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ಹಾಗೂ ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ವತಿಯಿಂದ ಗೌರವಿಸಲಾಯಿತು.

ಗೌರವ ಸ್ವೀಕರಿಸಿದವರ ಪರವಾಗಿ ಬೋಳಾದ ಶ್ರೀ ರಾಮಕೃಷ್ಣ ಅನುದಾನಿಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಶ್ರೀ ಸತೀಶ್ ಕುಮಾರ್ ಕೆಮ್ಮಣ್ಣು ಹಾಗೂ ತೆಳ್ಳಾರಿನ ಸ.ಪ್ರೌ.ಶಾಲೆಯ ಶಿಕ್ಷಕಿ ಶ್ರೀಮತಿ ಅನುಪಮ ಚಿಪ್ಲೂಣಕರ್ ಮಾತನಾಡಿದರು.

ಇದೇ ಸಂದರ್ಭ ಕಾರ್ಯಕ್ರಮದಲ್ಲಿ ಸಂಸ್ಥೆಯ ವತಿಯಿಂದ ಮುಖ್ಯ ಅಭ್ಯಾಗತರಾದ ಶ್ರೀ ವಸಂತ್ ಆಚಾರ್‌ರವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದ ವೇದಿಕೆಯಲ್ಲಿ ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಪ್ರಾಂಶುಪಾಲ ಶ್ರೀ ದಿನೇಶ್ ಎಂ. ಕೊಡವೂರ್, ಉಪಪ್ರಾಂಶುಪಾಲರಾದ ಶ್ರೀ ಸಾಹಿತ್ಯ, ಶ್ರೀಮತಿ ಉಷಾರಾವ್ ಯು, ಸಂಸ್ಥೆಯ ಹಿತೈಶಿಯಾದ ಶ್ರೀ ದೇವೇಂದ್ರ ನಾಯಕ್ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲ ಶ್ರೀ ಸಾಹಿತ್ಯ ಸ್ವಾಗತಿಸಿ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಪ್ರಜ್ವಲ್ ಕುಲಾಲ್ ನಿರೂಪಿಸಿ ವಂದಿಸಿದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಫುಟ್‌ಬಾಲ್ : ಕಾರ್ಕಳ ಜ್ಞಾನಸುಧಾ ತಂಡ ಜಿಲ್ಲಾಮಟ್ಟಕ್ಕೆ

ಪದವಿಪೂರ್ವ ಶಾಲಾ ಶಿಕ್ಷಣ ಇಲಾಖೆಯ ವತಿಯಿಂದ ನಡೆದ ತಾಲೂಕು ಮಟ್ಟದ ಫುಟ್‌ಬಾಲ್ ಪಂದ್ಯಾಟದಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ.

‘ಸೇವಾ ಪಾಕ್ಷಿಕ ಅಭಿಯಾನ’ ಯಶಸ್ವಿಗೊಳಿಸಲು ಕುತ್ಯಾರು ನವೀನ್ ಶೆಟ್ಟಿ ಕರೆ

ಜಿಲ್ಲೆಯಾದ್ಯಂತ ನಡೆಯಲಿರುವ ಸೇವಾ ಪಾಕ್ಷಿಕ ಅಭಿಯಾನವನ್ನು ಪಕ್ಷದ ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಸಂಘಟಿತ ಪರಿಶ್ರಮದ ಮೂಲಕ ಯಶಸ್ವಿಗೊಳಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕರೆ ನೀಡಿದರು.

ಕ್ರಿಯೇಟಿವ್ ಕಾಲೇಜಿನಲ್ಲಿ ಗುರುದೇವೋಭವ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸಪ್ತಸ್ವರ ಸಭಾಂಗಣದಲ್ಲಿ, 'ಕ್ರಿಯೇಟಿವ್ ಗುರುದೇವೋಭವ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. ಜ್ಞಾನ ಜ್ಯೋತಿಯನ್ನು ಬೆಳಗಿ, ಡಾ. ರಾಧಾಕೃಷ್ಣನ್ ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆಯನ್ನು ನೀಡಲಾಯಿತು.

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮ

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ರಿ. ಇದರ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ ಕಾರ್ಯಕ್ರಮವು ಅಧ್ಯಕ್ಷರಾದ ಶ್ರೀಯುತ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ದೀಪ ಬೆಳಗಿಸುದರ ಮುಖೇನ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.