ಬೈಲೂರು ಪರಶುರಾಮ ಥೀಮ್ ಪಾರ್ಕ್ ವಿವಾದ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹರಡಿದ ವ್ಯಕ್ತಿ ಪತ್ತೆ

Date:

spot_img
fir11

ಕಾರ್ಕಳ: ಇತ್ತೀಚೆಗಷ್ಟೇ ವಿವಾದಿತ ಪರಶುರಾಮ ಥೀಮ್ ಪಾರ್ಕ್‌ನ ಕಟ್ಟಡದ ಮೇಲ್ಛಾವಣಿಯ ತಾಮ್ರದ ಶೀಟ್‌ಗಳು ಕಳವಾಗಿದ್ದವು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ ಕಳುವಾದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆದರೆ, ಈ ನಡುವೆ ಸಂತೋಷ್ ದೇವಾಡಿಗ ಎಂಬ ವ್ಯಕ್ತಿ ತನ್ನ ಫೇಸ್‌ಬುಕ್ ಖಾತೆಯಲ್ಲಿ ಈ ಕಳ್ಳತನದ ಹಿಂದೆ ಆರ್‌ಎಸ್‌ಎಸ್ (RSS) ಕಾರ್ಯಕರ್ತನ ಕೈವಾಡವಿದೆ ಎಂಬ ಅರ್ಥ ಬರುವಂತಹ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದನು.

“ಪರಶುರಾಮ ಥೀಮ್ ಪಾರ್ಕ್ ಕಳ್ಳತನಕ್ಕೆ ಟ್ವಿಸ್ಟ್, ಕಟ್ಟಡದೊಳಗಿನ ಎಲೆಕ್ಟ್ರಿಕಲ್ ಉಪಕರಣಗಳನ್ನು ಆರ್‌ಎಸ್‌ಎಸ್ ಕಾರ್ಯಕರ್ತನೇ ಎಗರಿಸಿದ್ದಾನೆ” ಎಂಬ ಬರಹವಿರುವ ಫೋಟೋವನ್ನು ಆತ ವೈರಲ್ ಮಾಡಿದ್ದನು. ಈ ಪೋಸ್ಟ್ ಸಮಾಜದಲ್ಲಿ ಧಾರ್ಮಿಕ ಮತ್ತು ರಾಜಕೀಯ ಸಂಘರ್ಷಕ್ಕೆ ಪ್ರಚೋದನೆ ನೀಡುವಂತಿದೆ ಹಾಗೂ ಶಾಂತಿ ಕದಡುವ ದುರುದ್ದೇಶ ಹೊಂದಿದೆ ಎಂದು ಆರೋಪಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಾಗಿದೆ. ಸಾರ್ವಜನಿಕರಲ್ಲಿ ತಪ್ಪು ಕಲ್ಪನೆ ಮೂಡಿಸಿ ರಾಜಕೀಯ ಲಾಭ ಪಡೆಯಲು ಈ ಕೃತ್ಯ ಎಸಗಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಚೆನ್ನಮ್ಮ ದೇವೇಗೌಡ ನಿಧನ: ಡಾ ಮಂಜುನಾಥ್ ಭಾವುಕ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ನಿಧನರಾಗಿದ್ದು, ಅಳಿಯ ಡಾ. ಸಿ.ಎನ್. ಮಂಜುನಾಥ್ ಭಾವುಕರಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಕ್ರಿಯೇಟಿವ್ ಪುಸ್ತಕಧಾರೆ 2026: ಕಾರ್ಕಳದಲ್ಲಿ 25 ಕೃತಿಗಳ ಬಿಡುಗಡೆ

ಕಾರ್ಕಳದ ಕ್ರಿಯೇಟಿವ್ ಕಾಲೇಜಿನಲ್ಲಿ ಪುಸ್ತಕಧಾರೆ 2026 ಕಾರ್ಯಕ್ರಮ ಸಡಗರದಿಂದ ಜರುಗಿದ್ದು, ಒಟ್ಟು 25 ಕೃತಿಗಳು ಲೋಕಾರ್ಪಣೆಗೊಂಡಿವೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ಸುರತ್ಕಲ್‌ನಲ್ಲಿ ಅಣ್ಣನಿಂದ ತಮ್ಮನ ಹತ್ಯೆ; ಕಲ್ಲು ಎತ್ತಿಹಾಕಿ ಬರ್ಬರ ಕೊಲೆ

ಸುರತ್ಕಲ್‌ನ ಚೊಕ್ಕಬೆಟ್ಟಿನಲ್ಲಿ ಸ್ವಂತ ಅಣ್ಣನಿಂದ ತಮ್ಮನ ಬರ್ಬರ ಹತ್ಯೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು ತನಿಖೆ ಮುಂದುವರಿದಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಕಾರ್ಕಳದ ಶಿವಪ್ರಸಾದ್ ರಾವ್ ಶ್ರದ್ಧಾಂಜಲಿ ಸಭೆ

ಕಾರ್ಕಳದಲ್ಲಿ ದಕ್ಷ ಕಂದಾಯ ನಿರೀಕ್ಷಕ ಶಿವಪ್ರಸಾದ್ ವಿ. ರಾವ್ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಪೂರ್ಣ ಮಾಹಿತಿ ಇಲ್ಲಿದೆ ಓದಿ.