spot_img

ಕಾರ್ಕಳದಲ್ಲಿ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ರಾಹುಲ್ ಗಾಂಧಿ ಹುಟ್ಟುಹಬ್ಬದ ಅರ್ಥಪೂರ್ಣ ಆಚರಣೆ

Date:

spot_img

ಕಾರ್ಕಳ : ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ ಶ್ರೀ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.

ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ‌ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು , ಸುರಕ್ಷಾ, ಪುರಸಭಾ ಸದಸ್ಯ ಶಿವಾಜಿ ರಾವ್ ಹಾಗೂ ನಾಗೇಶ್ ಹೆಗ್ಡೆ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಮಳೆಗಾಲದಲ್ಲಿ ತಲೆಹೇನುಗಳ ಸಮಸ್ಯೆ ಹೆಚ್ಚಾಗಲು ಮಳೆಯೇ ಕಾರಣವೇ?

ಅದರಲ್ಲೂ ಮಳೆಯಲ್ಲಿ ನೆನೆಯುವುದರಿಂದ ತಲೆಯಲ್ಲಿ ಹೇನುಗಳಾಗುತ್ತವೆ ಎಂಬ ನಂಬಿಕೆ ಸಮಾಜದಲ್ಲಿ ವ್ಯಾಪಕವಾಗಿ ಹರಡಿದೆ.

ಹಾಲು ಉತ್ಪಾದನೆಯಲ್ಲಿ ಹೊಸ ಮೈಲಿಗಲ್ಲು: ಸತತ 3ನೇ ಬಾರಿ ತಾಲೂಕು ಉತ್ತಮ ಸಂಘ ಪ್ರಶಸ್ತಿ ಪಡೆದ ಗುಡ್ಡೆಯಂಗಡಿ

ದಕ್ಷಿಣ ಕನ್ನಡ ಜಿಲ್ಲೆಯ ಕುಲಶೇಖರ, ಮಂಗಳೂರು ಇದರ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತವು 2024-25ನೇ ಸಾಲಿನ ಉತ್ತಮ ಗುಣಮಟ್ಟದ ಹಾಲು ಉತ್ಪಾದಕರ ಸಂಘ ಪ್ರಶಸ್ತಿಯನ್ನು ಗುಡ್ಡೆಯಂಗಡಿ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ನೀಡಿ ಗೌರವಿಸಿದೆ

ರಜನಿಕಾಂತ್‌ರ “ಕೂಲಿ” ಚಿತ್ರದ ಟ್ರೈಲರ್ ಅಬ್ಬರ: ಕನ್ನಡಿಗ ಉಪೇಂದ್ರ ಪಾತ್ರದ ಬಗ್ಗೆ ಹೆಚ್ಚಿದ ಕುತೂಹಲ

ಸೂಪರ್‌ಸ್ಟಾರ್ ರಜನಿಕಾಂತ್ ಅವರ 171ನೇ ಸಿನಿಮಾ "ಕೂಲಿ" ಟ್ರೈಲರ್ ಬಿಡುಗಡೆಯಾಗಿ ದೇಶಾದ್ಯಂತ ದೊಡ್ಡ ಸಂಚಲನ ಮೂಡಿಸಿದೆ

ನೂತನ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ: ಕುಲ್ಗಾಮ್‌ನಲ್ಲಿ 3 ಉಗ್ರರ ಹತ್ಯೆ

ಕಣಿವೆ ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸ್ಥಾಪಿಸಲು ಭಾರತೀಯ ಸೇನೆಯು ಮತ್ತೊಂದು ಮಹತ್ವದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.