

ಮಂಗಳೂರು: ಗ್ರಾಮ ಸ್ವರಾಜ್ಯ ಪ್ರತಿಷ್ಠಾನ ಮಂಗಳೂರು ಆಶ್ರಯದಲ್ಲಿ ಆಯೋಜಿಸಿದ್ದ “ಹೊಂಬೆಳಕು” ಕಾರ್ಯಕ್ರಮದಲ್ಲಿ ಕಾರ್ಕಳ ಪರಸಭೆ ಸದಸ್ಯ ಶುಭದರಾವ್ ಛದ್ಮವೇಷ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಅವರ ನೇತೃತ್ವದಲ್ಲಿ ಸಹ್ಯಾದ್ರಿ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ನಾಡಪ್ರಭು ಕೆಂಪೇಗೌಡರ ವೇಷ ಧರಿಸಿ ಶುಭದರಾವ್ ಗಮನ ಸೆಳೆದರು.