spot_img

ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ, ಪದವಿ ಹೊಂದದ ಉಪನ್ಯಾಸಕರಿಗೆ ವೇತನ ಸಹಿತ ಬಿ.ಇಡಿ ವ್ಯಾಸಂಗ ಮಾಡಲು ಸರ್ಕಾರ ಅನುಮತಿ

Date:

ಕಲಬುರ್ಗಿ: ರಾಜ್ಯದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 04-02-2008ರ ನಂತರ ನೇಮಕಗೊಂಡು ಅನುದಾನಕ್ಕೆ ಒಳಪಟ್ಟ 364 ಬಿ.ಇಡಿ ಪದವಿ ಹೊಂದದ್ದ ಉಪನ್ಯಾಸಕರು ವೇತನ ಸಹಿತ ವ್ಯಾಸಂಗ ಕೈಗೊಳ್ಳಲು ಶಾಲಾ ಶಿಕ್ಷಣ ಇಲಾಖೆ ತನುಮತಿ ನೀಡಿ ಆದೇಶ ಹೊರಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಶಶೀಲ್ ಜಿ ನಮೋಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ ಹಾಗೂ ಹರ್ಷ ವ್ಯಕ್ತಪಡಿಸಿದ್ದಾರೆ.


ಈ ಒಂದು ಆದೇಶದಿಂದ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ ರಹಿತವಾಗಿ ಕಾರ್ಯನಿರ್ವಹಿಸುತ್ತಿರುವ 364 ಉಪನ್ಯಾಸಕರು ನಿಟ್ಟುಸಿರು ಬಿಡುವಂತಾಗಿದೆ ಎಂದು ಅಭಿಪ್ರಾಯಪಟ್ಟರು ಉಪನ್ಯಾಸಕರಾಗಿ ಸುಮಾರು 15 ವರ್ಷ ಸೇವೆ ಸಲ್ಲಿಸಿ ತದನಂತರ ವೇತನ ರಹಿತವಾಗಿ 2 ವರ್ಷ ಬಿ.ಇಡಿ ಪದವಿ ವ್ಯಾಸಂಗಕ್ಕೆ ಹೋಗುವುದೆಂದರೆ ಅವರ ಇಡೀ ಕುಟುಂಬವನ್ನು ಅರ್ಥಿಕ ದುಸ್ಥಿತಿಗೆ ತಳ್ಳಿದಂತಾಗುತ್ತಿತ್ತು ಮತ್ತು ಇದು ಅಸಾಧ್ಯವಾದ ಮಾತಾಗಿತ್ತು. ಈ ಎಲ್ಲ ಸಮಸ್ಯೆಗಳನ್ನು ಪದವೀಧರ ಮತಕ್ಷೇತ್ರ ಮತ್ತು ಶಿಕ್ಷಕರ ಮತಕ್ಷೇತ್ರಗಳಿಂದ ಆಯ್ಕೆಯಾದ ಎಲ್ಲಾ ವಿಧಾನ ಪರಿಷತ್ ಸದಸ್ಯರು ಹಾಗೂ ಉಪನ್ಯಾಸಕರ ಸಂಘಟನೆಯವರು ಮುಖ್ಯಮಂತ್ರಿಗಳ ಹಾಗೂ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಣ ಇಲಾಖೆ ಸಚಿವರ ಗಮನಕ್ಕೆ ತಂದು ಒತ್ತಡ ಹೇರಿದ ಪರಿಣಾಮವಾಗಿ ಸರ್ಕಾರ ಈ ಒಳ್ಳೆಯ ನಿರ್ಣಯ ಕೈಗೊಂಡಿದೆ ಎಂದು ಹರ್ಷ ವ್ಯಕ್ತಪಡಿಸಿದರು
ಈ ಹಿಂದೆ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಬಿ.ಇಡಿ. ಪದವಿ ಹೊಂದದೆ ನೇಮಕಗೊಂಡ ಉಪನ್ಯಾಸಕರಿಗೆ 2 ಬ್ಯಾಚುಗಳಲ್ಲಿ ವೇತನ ಸಹಿತ ಬಿ. ಇಡಿ. ವ್ಯಾಸಂಗ ಕೈಗೊಳ್ಳಲು ಅನುಮತಿ ನೀಡಿತ್ತು. ಆದಾದ ನಂತರ ಜೆ.ಓ.ಸಿ. ಕೋರ್ಸ್‌ಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಬಿ.ಇಡಿ ರಹಿತ ಉಪನ್ಯಾಸಕರಿಗೂ ಕೂಡ ವೇತನ ಸಹಿತ ವ್ಯಾಸಂಗ ಮಾಡಿಕೊಂಡು ಬರಲು ಅನುಮತಿ ನೀಡಿದ ಮಾದರಿಯಲ್ಲಿಯೇ ಸರ್ಕಾರ ಈಗ ಅದೇ ಮಾದರಿಯಲ್ಲಿ ಆದೇಶ ಹೊರಡಿಸಿರುವುದು ಉಪನ್ಯಾಸಕರಿಗೆ ಸಂತಸ ತಂದಿದೆ ಎಂದಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ರಾಣಿಯರಾದ ಅಬ್ಬಕ್ಕ, ಕಿತ್ತೂರು ಚೆನ್ನಮ್ಮ, ಅಹಲ್ಯೆ ಬಾಯಿಯರ ಸಾಹಸ ಮಹಿಳೆಯರಿಗೆ ಸ್ಪೂರ್ತಿ : ಡಾ ಮೇಘಾ ಖಂಡೇಲವಾಲ

ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ ಎಸ್ ಇರಾಣಿ ಪದವಿ ಮಹಾವಿದ್ಯಾಲಯದಲ್ಲಿ ನಡೆದ ಮಹಾವಿದ್ಯಾಲಯದ ಮಹಿಳಾ ಕೋಶ, ಕೇಂದ್ರೀಯ ವಿಶ್ವವಿದ್ಯಾಲಯ ಕರ್ನಾಟಕ ಹಾಗೂ ಅಖಿಲ ಭಾರತೀಯ ರಾಷ್ಟ್ರೀಯ ಶೈಕ್ಷಿಕ್ ಮಹಾ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಜರುಗಿತು.

ದಾವಣಗೆರೆಯಲ್ಲಿ ರಾಜ್ಯಮಟ್ಟದ “ಕುಪ್ಮಾ” ಸಮಾವೇಶ

ಕುಪ್ಮಾದ ರಾಜ್ಯಮಟ್ಟದ ದ್ವಿತೀಯ ಸಮಾವೇಶವು 2025ರ ಸೆಪ್ಟೆಂಬರ್ ತಿಂಗಳಲ್ಲಿ ದಿನಾಂಕ 12 ಮತ್ತು 13ರಂದು 'ಎಸ್. ಎಸ್. ಮಲ್ಲಿಕಾರ್ಜುನ ಕಲ್ಚರಲ್ ಸೆಂಟರ್, ಬಿಐಇಟಿ, ದಾವಣಗೆರೆ, ಇಲ್ಲಿ ನಡೆಯಲಿದೆ.

ನೇಪಾಳದಲ್ಲಿ ಭುಗಿಲೆದ್ದ ಪ್ರತಿಭಟನೆ: ಪ್ರಧಾನಿ ಕೆ.ಪಿ. ಶರ್ಮಾ ಓಲಿ ರಾಜೀನಾಮೆ

ನೇಪಾಳದಲ್ಲಿ ಭುಗಿಲೆದ್ದ ಭ್ರಷ್ಟಾಚಾರ ವಿರೋಧಿ ಮತ್ತು ಸರ್ಕಾರದ ವಿರುದ್ಧದ ಪ್ರತಿಭಟನೆಗಳು ಹಿಂಸಾತ್ಮಕ ರೂಪ ಪಡೆದ ಹಿನ್ನೆಲೆಯಲ್ಲಿ ಪ್ರಧಾನಿ ಕೆ.ಪಿ.ಶರ್ಮಾ ಓಲಿ ರಾಜೀನಾಮೆ ನೀಡಿದ್ದಾರೆ.

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ಮಿಂಚಿದ ನಚಿಕೇತ ವಿದ್ಯಾಲಯ : ಒಟ್ಟು 6 ಪದಕಗಳ ಸಾಧನೆ

ಆಲ್ ಇಂಡಿಯಾ ಕರಾಟೆ ಸ್ಪರ್ಧಾಕೂಟದಲ್ಲಿ ನಚಿಕೇತ ವಿದ್ಯಾಲಯದ ವಿದ್ಯಾರ್ಥಿಗಳು ಒಟ್ಟು 6 ಪದಕಗಳನ್ನು ಪಡೆದಿರುತ್ತಾರೆ.