
ಜಮ್ಮು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪೆಹಲ್ಗಾಂವ್ ನಲ್ಲಿ 26 ಹಿಂದೂಗಳನ್ನು ಬಲಿ ಪಡೆದ ಪಾಕಿಸ್ತಾನ ಪ್ರೇರಿತ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ತಕ್ಷಣ ಭಾರತದಿಂದ ತಮ್ಮ ದೇಶಕ್ಕೆ ತೆರಳುವಂತೆ ಕೇಂದ್ರ ಸರಕಾರ ಈಗಾಗಲೇ ಸೂಚನೆಯನ್ನು ನೀಡಿ ಕಾಲಮಿತಿಯ ಗಡುವನ್ನು ವಿಧಿಸಿದೆ. ಇನ್ನೂ ಕೂಡಾ ಪಾಕಿಸ್ತಾನದ ಪ್ರಜೆಗಳು ರಾಜ್ಯದಲ್ಲಿ ಉಳಿದಿದ್ದಲ್ಲಿ ಅವರನ್ನು ಶೀಘ್ರ ಪತ್ತೆ ಹಚ್ಚಿ ತಕ್ಷಣ ದೇಶ ಬಿಟ್ಟು ಹೊರಡುವಂತೆ ಅಗತ್ಯ ಕ್ರಮಕೈಗೊಳ್ಳಲು ರಾಜ್ಯಾದ್ಯoತ ಜಿಲ್ಲಾಧಿಕಾರಿಗಳಿಗೆ ಬಿಜೆಪಿ ಮನವಿ ಸಲ್ಲಿಸಲಿದೆ.
ಈ ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ ಪಾಕಿಸ್ತಾನದ ಪ್ರಜೆಗಳು ನೆಲೆಸಿದ್ದಲ್ಲಿ ತಕ್ಷಣ ಪತ್ತೆ ಹಚ್ಚಿ ಅವರನ್ನು ಶೀಘ್ರ ಗಡಿಪಾರು ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಮೇ 6ರಂದು ಬೆಳಿಗ್ಗೆ ಗಂಟೆ 11.30ಕ್ಕೆ ಪಕ್ಷದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಸೇರಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.