ಸಾಲದ ಹೊರೆಯೊಂದಿಗೆ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ರಾಜ್ಯ ಬಜೆಟ್ : ಕುತ್ಯಾರು ನವೀನ್ ಶೆಟ್ಟಿ

Date:

spot_img
Naveen

ಉಡುಪಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ರಾಜ್ಯವನ್ನು ಸಾಲದ ಶೂಲಕ್ಕೇರಿಸಿರುವ ಜೊತೆಗೆ ಈಗಾಗಲೇ ವಿಧಿಸಿರುವ ದುಬಾರಿ ತೆರಿಗೆಗಳ ಮೂಲಕ ಗಾಯದ ಮೇಲೆ ಬರೆ ಎಳೆದ ಅಭಿವೃದ್ಧಿ ಶೂನ್ಯ ಬಜೆಟ್ ಆಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ತಿಳಿಸಿದ್ದಾರೆ.

ಅಧಿಕಾರಕ್ಕಾಗಿ ಜಾರಿಗೊಳಿಸಿದ್ದ ಗ್ಯಾರಂಟಿಗಳ ನಿರ್ವಹಣೆಗೆ ಪರದಾಡುತ್ತಿರುವ ರಾಜ್ಯ ಸರಕಾರ ಯುವ ನಿಧಿ ಗ್ಯಾರಂಟಿಗೆ ಎಳ್ಳು ನೀರು ಬಿಟ್ಟಂತಾಗಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ ಯಾವುದೇ ದೃಢ ಯೋಜನೆಗಳನ್ನು ರೂಪಿಸಿಲ್ಲ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಉಚಿತ ಯೋಜನೆಗಳಲ್ಲಿ ವಿದ್ಯಾರ್ಥಿಗಳ ನಡುವೆ ತಾರತಮ್ಯ ತೋರಿದ ಜೊತೆಗೆ ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ದಿವ್ಯ ನಿರ್ಲಕ್ಷ್ಯ ಧೋರಣೆ ತಳೆದ ರಾಜಕೀಯ ಪ್ರೇರಿತ ಬಜೆಟ್ ಇದಾಗಿದೆ.

ರಸ್ತೆ ಗುಂಡಿ ಮುಚ್ಚಲೂ ಹಣವಿಲ್ಲದ ರಾಜ್ಯ ಸರಕಾರ ಪ್ರಸಕ್ತ ಸಾಲಿನಲ್ಲಿ 1.32 ಲಕ್ಷ ಕೋಟಿ ರೂಪಾಯಿ ಸಾಲ ಮಾಡುವ ಮೂಲಕ ಆರ್ಥಿಕ ಶಿಸ್ತನ್ನು ಉಲ್ಲಂಘಿಸಿದಂತಿದೆ. ರಾಜ್ಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ನಡೆಯುತ್ತಿರುವ ಪ್ರತಿಭಟನೆಗಳು ಅರಣ್ಯರೋಧನವಾಗಿದೆ. ಒಟ್ಟಾರೆಯಾಗಿ ರಾಜ್ಯದ ಹಿತವನ್ನು ಬಲಿಗೊಟ್ಟು ಯಾವುದೇ ಹೊಸತನವಿಲ್ಲದ, ಕೇವಲ ಸಾಲದ ಪ್ರಮಾಣ ಹೆಚ್ಚಿಸುವಲ್ಲಿ ದಾಖಲೆಗೈದ ನಿಷ್ಪ್ರಯೋಜಕ ಬಜೆಟ್ ಇದಾಗಿದೆ ಎಂದು ಕುತ್ಯಾರು ನವೀನ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಗ್ಯಾಜೆಟ್ ಪ್ರಿಯರಿಗೆ ಗುಡ್ ನ್ಯೂಸ್: ಭಾರತದ ಮಾರುಕಟ್ಟೆಗೆ ಲಗ್ಗೆ ಇಡಲಿದೆ ಶಿಯೋಮಿಯ ಪವರ್‌ಫುಲ್ 67W ಪವರ್ ಬ್ಯಾಂಕ್

ಶಿಯೋಮಿ ಭಾರತದಲ್ಲಿ ಹೊಸ 20000mAh ಪವರ್ ಬ್ಯಾಂಕ್ 5i ಬಿಡುಗಡೆ ಮಾಡಲಿದೆ. 67W ಫಾಸ್ಟ್ ಚಾರ್ಜಿಂಗ್ ಸಾಮರ್ಥ್ಯದ ಈ ಸಾಧನದ ಸಂಪೂರ್ಣ ಮಾಹಿತಿ ಇಲ್ಲಿದೆ.

ನಟಿ ಐಶ್ವರ್ಯ ಸಿಂಧೋಗಿಗೆ ಸೈಬರ್ ಕಿರುಕುಳ: ಪೊಲೀಸ್ ದೂರು

ನಟಿ ಐಶ್ವರ್ಯ ಸಿಂಧೋಗಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅಶ್ಲೀಲ ಕಮೆಂಟ್ ಮೂಲಕ ಕಿರುಕುಳ ನೀಡಿದ ಕಿಡಿಗೇಡಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.

ದಿನ ವಿಶೇಷ – ರಾಷ್ಟ್ರೀಯ ಬಿ ಸಮ್‌ಒನ್ ದಿನ

ಜುಲೈ 21 ರ ರಾಷ್ಟ್ರೀಯ ಬಿ ಸಮ್‌ಒನ್ ದಿನವು ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟಲು ಮತ್ತು ಅವರ ರಕ್ಷಣೆಗೆ ವಿಶ್ವಾಸಾರ್ಹ ವ್ಯಕ್ತಿಯಾಗಲು ವಯಸ್ಕರಿಗೆ ಕರೆ ನೀಡುತ್ತದೆ.

ಅಡುಗೆಮನೆಯಲ್ಲೇ ಇದೆ ಮ್ಯಾಜಿಕ್ ಲಿಕ್ವಿಡ್: ಅಕ್ಕಿ ತೊಳೆದ ನೀರನ್ನು ಅಪ್ಪಿತಪ್ಪಿಯೂ ಚೆಲ್ಲಬೇಡಿ

ಅಕ್ಕಿ ತೊಳೆದ ನೀರು ಮತ್ತು ಗಂಜಿ ನೀರಿನಿಂದ ಪಡೆಯಬಹುದಾದ ಅದ್ಭುತ ಆರೋಗ್ಯ ಹಾಗೂ ಸೌಂದರ್ಯ ಪ್ರಯೋಜನಗಳ ಸಂಪೂರ್ಣ ಮಾಹಿತಿ ಇಲ್ಲಿದೆ.