ಅನ್ನಭಾಗ್ಯದಲ್ಲಿ ಅಕ್ಕಿ ಬದಲು ಇನ್ನು ‘ಇಂದಿರಾ ಆಹಾರ ಕಿಟ್’: ಬಜೆಟ್‌ನಲ್ಲಿ ಸಿದ್ದರಾಮಯ್ಯ ಘೋಷಣೆ !

Date:

spot_img

ಬೆಂಗಳೂರು: ರಾಜ್ಯ ಸರ್ಕಾರದ ಅತ್ಯಂತ ಮಹತ್ವಾಕಾಂಕ್ಷೆಯ ‘ಅನ್ನಭಾಗ್ಯ’ ಯೋಜನೆಯ ರೂಪರೇಷೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಪೂರ್ಣವಾಗಿ ಬದಲಿಸಿದ್ದಾರೆ. ಇಂದು ಮಂಡಿಸಿದ 2026-27ನೇ ಸಾಲಿನ ಆಯವ್ಯಯದಲ್ಲಿ ಬಿಪಿಎಲ್ ಕಾರ್ಡ್‌ದಾರರಿಗೆ ಸಿಹಿ ಸುದ್ದಿ ನೀಡಿರುವ ಸಿಎಂ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪೌಷ್ಟಿಕಾಂಶಯುಕ್ತ ‘ಇಂದಿರಾ ಆಹಾರ ಕಿಟ್’ ವಿತರಿಸುವ ಹೊಸ ಯೋಜನೆಯನ್ನು ಘೋಷಿಸಿದ್ದಾರೆ. ಕೇವಲ ಅಕ್ಕಿ ನೀಡುವ ಬದಲು ಸಂಪೂರ್ಣ ಪೌಷ್ಟಿಕಾಂಶದ ಕಿಟ್ ನೀಡುವ ಮೂಲಕ ಬಡವರ ಅಡುಗೆ ಮನೆಗೆ ನೆರವಾಗುವುದು ಸರ್ಕಾರದ ಉದ್ದೇಶವಾಗಿದೆ.

ಈ ನೂತನ ‘ಇಂದಿರಾ ಆಹಾರ ಕಿಟ್’ನಲ್ಲಿ ದಿನನಿತ್ಯದ ಬಳಕೆಗೆ ಅಗತ್ಯವಾದ ತೊಗರಿಬೇಳೆ, ಸಕ್ಕರೆ, ಉಪ್ಪು ಮತ್ತು ಅಡುಗೆ ಎಣ್ಣೆಯನ್ನು ಒಳಗೊಂಡಿರಲಿದೆ. ಈ ಬೃಹತ್ ಯೋಜನೆಗಾಗಿ ಸರ್ಕಾರ ಪ್ರಸಕ್ತ ಹಣಕಾಸು ವರ್ಷದಲ್ಲಿ ಒಟ್ಟು 6,200 ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಕಳೆದ 3 ವರ್ಷಗಳಲ್ಲಿ ಅನ್ನಭಾಗ್ಯ ಯೋಜನೆಗಾಗಿ ಬರೋಬ್ಬರಿ 17,167 ಕೋಟಿ ರೂ.ಗಳನ್ನು ವ್ಯಯಿಸಲಾಗಿದ್ದು, ಇದರಿಂದ ರಾಜ್ಯದ ಸುಮಾರು 4.54 ಕೋಟಿ ಜನರು ಪ್ರಯೋಜನ ಪಡೆದಿದ್ದಾರೆ ಎಂದು ಸಿಎಂ ಅಂಕಿಅಂಶಗಳ ಸಮೇತ ವಿವರಿಸಿದರು.

ಆಹಾರ ಧಾನ್ಯಗಳ ವಿತರಣಾ ವ್ಯವಸ್ಥೆಯಲ್ಲಿ ಪಾರದರ್ಶಕತೆ ತರಲು ಸಗಟು ಮತ್ತು ಚಿಲ್ಲರೆ ಲಾಭಾಂಶವನ್ನು ನೇರವಾಗಿ ಪಾವತಿಸುವ ಹೊಸ ಪದ್ಧತಿಯನ್ನು ಜಾರಿಗೆ ತರಲಾಗುತ್ತಿದೆ. ಇದರೊಂದಿಗೆ ರಾಜ್ಯದ ವಿವಿಧ 274 ಕಲ್ಯಾಣ ಸಂಸ್ಥೆಗಳ ಫಲಾನುಭವಿಗಳಿಗೆ ಈಗಾಗಲೇ ಆಹಾರ ಭದ್ರತೆ ಒದಗಿಸಲಾಗುತ್ತಿದ್ದು, ಈ ವರ್ಷ ಹೆಚ್ಚುವರಿಯಾಗಿ 34 ಹೊಸ ಸಂಸ್ಥೆಗಳ 6,701 ಸದಸ್ಯರಿಗೂ ಯೋಜನೆಯನ್ನು ವಿಸ್ತರಿಸಲು ತೀರ್ಮಾನಿಸಲಾಗಿದೆ. ಹಸಿವು ಮುಕ್ತ ಕರ್ನಾಟಕದ ಜೊತೆಗೆ ಪೌಷ್ಟಿಕಾಂಶ ಭರಿತ ರಾಜ್ಯವನ್ನಾಗಿ ಮಾಡುವುದು ಈ ಬದಲಾವಣೆಯ ಹಿಂದಿನ ಗುರಿಯಾಗಿದೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ದಿನ ವಿಶೇಷ – ರಾಷ್ಟ್ರೀಯ ಪ್ರಸಾರ ದಿನ

ಭಾರತದಲ್ಲಿ ಜುಲೈ 23 ರಂದು ರಾಷ್ಟ್ರೀಯ ಪ್ರಸಾರ ದಿನ ಆಚರಿಸಲಾಗುತ್ತದೆ. ರೇಡಿಯೋ ಪ್ರಸಾರದ ಇತಿಹಾಸ, ಆಕಾಶವಾಣಿ ಮತ್ತು ಇದರ ಮಹತ್ವದ ಕುರಿತು ಇಲ್ಲಿದೆ ಮಾಹಿತಿ.

ಆರೋಗ್ಯಕ್ಕೆ ಡ್ರೈ ಫ್ರೂಟ್ಸ್ ಸೇವನೆ: ಯಾವ ಬೀಜಗಳನ್ನು ಯಾವ ಸಮಯದಲ್ಲಿ ತಿಂದರೆ ಡಬಲ್ ಲಾಭ?

ಬಾದಾಮಿ, ವಾಲ್ನಟ್, ಗೋಡಂಬಿ ಸೇವಿಸಲು ಸರಿಯಾದ ಸಮಯ ಹಾಗೂ ಅವುಗಳ ಪೂರ್ಣ ಪೋಷಕಾಂಶ ಪಡೆಯುವ ವಿಧಾನ ಇಲ್ಲಿದೆ.

ನೀರೆ ಬೈಲೂರು ಗಣೇಶೋತ್ಸವ: ದಿಲೀಪ್ ಶೆಟ್ಟಿ ಅಧ್ಯಕ್ಷರಾಗಿ ಪುನರಾಯ್ಕೆ

ಬೈಲೂರು ಸಾರ್ವಜನಿಕ ಗಣೇಶೋತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಮುಕ್ತಾಯಗೊಂಡಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಬಿಸಿಸಿಐ ಹೊಸ ನಿಯಮ: ನೋಬಾಲ್ ಎಸೆದರೆ ಬೌಲರ್ ಪಂದ್ಯದಿಂದ ಅಮಾನತು

2026-27ರ ದೇಶಿ ಕ್ರಿಕೆಟ್ ಋತುವಿಗೆ ಬಿಸಿಸಿಐ ಹೊಸ ನಿಯಮ ತಂದಿದೆ. ನಿಯಮ ಉಲ್ಲಂಘಿಸುವ ಬೌಲರ್‌ಗಳಿಗೆ ಕಠಿಣ ಶಿಕ್ಷೆ ಖಚಿತ. ಪೂರ್ಣ ಮಾಹಿತಿ ಇಲ್ಲಿದೆ ಓದಿ.