spot_img

ಕರಾವಳಿಯಲ್ಲಿ ಜೂನ್ 26ರವರೆಗೆ ಭಾರೀ ಮಳೆ ನಿರೀಕ್ಷೆ: ದ.ಕ., ಉಡುಪಿ, ಉ.ಕ. ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Date:

spot_img

ಬೆಂಗಳೂರು : ರಾಜ್ಯದ ಕರಾವಳಿ ಭಾಗಗಳಲ್ಲಿ ಮುಂಗಾರು ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜೂನ್ 26ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ ಭಾಗದಲ್ಲಿ ಭಾರೀ ಮಳೆ – ಯೆಲ್ಲೋ ಎಲರ್ಟ್

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಜೂನ್ 26ರ ವರೆಗೆ ಭಾರೀ ಮಳೆ ನಿರೀಕ್ಷಿಸಲಾಗಿದೆ.

ಈ ಜಿಲ್ಲೆಗಳ ಹಲವೆಡೆ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಲು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಉಳಿದ ಜಿಲ್ಲೆಗಳಲ್ಲಿ ಸ್ಥಿತಿ ಹೀಗೆ:

ಸಾಧಾರಣ ಮಳೆ ನಿರೀಕ್ಷೆ: ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ನಗರ/ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ.

ಒಣಹವೆಯ ಶಂಕೆ : ವಿಜಯನಗರ, ತುಮಕೂರು, ರಾಮನಗರ, ಮಂಡ್ಯ, ಕೋಲಾರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬಳ್ಳಾರಿ.

ಮಳೆಯಾಗುವ ಸ್ಥಳೀಯ ಪ್ರದೇಶಗಳು:
ಉಪ್ಪಿನಂಗಡಿ, ಗೇರುಸೊಪ್ಪ, ಮಂಕಿ, ಯಲ್ಲಾಪುರ, ಆಗುಂಬೆ, ಕೊಟ್ಟಿಗೆಹಾರ, ಕಮ್ಮರಡಿ, ಭಾಗಮಂಡಲ, ಹುಂಚದಕಟ್ಟೆ, ಶಿರಾಲಿ, ಕದ್ರಾ, ಸುಳ್ಯ, ಕುಮಟಾ, ಧರ್ಮಸ್ಥಳ, ಬನವಾಸಿ, ಜೋಯ್ಡಾ, ಬೆಳ್ತಂಗಡಿ, ಹೊನ್ನಾವರ, ತ್ಯಾಗರ್ತಿ, ಖಾನಾಪುರ್, ಗುತ್ತಲ್, ಆನವಟ್ಟಿ, ಕಳಸ, ವಿರಾಜಪೇಟೆ, ಹೊಸಕೋಟೆ, ಅಂಕೋಲಾ, ಪುತ್ತೂರು, ಮೂಡುಬಿದಿರೆ, ಬಂಟವಾಳ, ಸಿದ್ದಾಪುರ, ಮಾಣಿ, ಕಾರವಾರ, ಮುಂಡಗೋಡ.

ಹವಾಮಾನ ಇಲಾಖೆ ಎಲ್ಲರಿಗೂ ಮುನ್ನೆಚ್ಚರಿಕೆಯ ಸೂಚನೆ ನೀಡಿದ್ದು, ಪ್ರವಾಸಿಗರು ಹಾಗೂ ಕರಾವಳಿಯ ಜನತೆ ಮಳೆಯ ಹಿನ್ನೆಲೆ ತಮ್ಮ ಪ್ರಯಾಣ ಯೋಜನೆಗಳನ್ನು ಪರಿಶೀಲಿಸಿಕೊಳ್ಳುವಂತೆ ಸೂಚಿಸಲಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಯಲ್ಲಾಪುರ ಸಮೀಪ ಭೀಕರ ರಸ್ತೆ ಅಪಘಾತ- ಕೆಎಸ್ಆರ್‌ಟಿಸಿ ಬಸ್-ಲಾರಿ ಡಿಕ್ಕಿ, ಮೂವರು ಬಲಿ

ಕೇರಳ ಮೂಲದ ಲಾರಿ, ಬಾಗಲಕೋಟೆ ಬಸ್ - ಯಲ್ಲಾಪುರ ಘಟ್ಟದಲ್ಲಿ ಸಂಭವಿಸಿದ ಭೀಕರ ಅಪಘಾತ

ಮನುಷ್ಯರಂತೆ ಯೋಚಿಸುವ ಏಜೆಂಟಿಕ್ Ai ನಿರ್ಮಿಸುತ್ತಿದೆ ಮೈಕ್ರೋಸಾಫ್ಟ್

ಕೀಬೋರ್ಡ್, ಮೌಸ್‌ಗಳಿಲ್ಲದ ಭವಿಷ್ಯದ ವಿಂಡೋಸ್ 2030

ಕೋಸು ತರಕಾರಿಯಲ್ಲ, ಅದೊಂದು ಸೂಪರ್ ಫುಡ್! ದೇಹದ ರಕ್ಷಣೆಗೆ ಇದರ ಪಾತ್ರ ಅತ್ಯಗತ್ಯ ಏಕೆ?

ಸಾಮಾನ್ಯವಾಗಿ ಆಹಾರದಲ್ಲಿ ಹಿಂದುಳಿದಿರುವ ಕೋಸು, ವಾಸ್ತವವಾಗಿ ಆರೋಗ್ಯದ ಭಂಡಾರವೇ ಸರಿ

ಪರ್ಕಳ: ಅಗ್ರಹಾರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಳೆಯಿಂದ ಸಿಂಹಮಾಸದ ವಿಶೇಷ ಪೂಜೆ

ಹೆರ್ಗ ಗ್ರಾಮದ ಅಗ್ರಹಾರದಲ್ಲಿರುವ ಶ್ರೀ ಮಹಾವಿಷ್ಣುಮೂರ್ತಿ ಮುಖ್ಯಪ್ರಾಣ ದೇವಸ್ಥಾನದಲ್ಲಿ ಸಿಂಹಮಾಸದ ವಿಶೇಷ ಪೂಜೆಯಾದ ಸೋಣಾರತಿಯು ನಾಳೆಯಿಂದ ಆರಂಭಗೊಳ್ಳಲಿದೆ.