ಮತಗಳ್ಳತನ ವಿರುದ್ದ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ಚಾಲನೆ, ಅತೀ ಹೆಚ್ಷು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ ಪ್ರೋತ್ಸಾಹಕ ಬಹುಮಾನ

Date:

spot_img

ಲೋಕಸಭಾ ಚುನಾವಣೆಯಲ್ಲಿ ಮತಗಳ್ಳತನ ನಡೆಸಿದ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಲೋಕಸಭಾ ವಿಪಕ್ಷ ನಾಯಕರಾದ ರಾಹುಲ್ ಗಾಂಧಿಯವರು ದೇಶವ್ಯಾಪಿ ನಡೆಸುತ್ತಿರುವ “ಸ್ಟಾಪ್ ವೋಟ್ ಚೋರಿ” ಅಭಿಯಾನಕ್ಕೆ ಬೆಂಬಲವಾಗಿ ಸಹಿ ಸಂಗ್ರಹ ಅಭಿಯಾನಕ್ಕೆ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಸಹಿ ಹಾಕುವ ಮೂಲಕ ಚಾಲನೆ ನೀಡಿದರು, ಈ ಸಂದರ್ಭದಲ್ಲಿ ಅವರು ಮಾತನಾಡಿ ಮತದಾನ ದೇಶದ ಪ್ರಜೆಗಳ ಹಕ್ಕು, ಆದರೆ ಮತಗಳ್ಳತನದ ಮೂಲಕ ಬಿಜೆಪಿ ಈ ದೇಶದ ಜನತೆಗೆ ಅತೀ ದೊಡ್ಡ ದ್ರೋಹವೆಸಗಿದೆ ಇದರ ವಿರುದ್ದ ನಾವೆಲ್ಲರೂ ಒಂದಾಗಿ ಜನರಿಗೆ ಜಾಗೃತಿ ಮೂಡಿಸುವ ಕೆಲಸ ಮಾಡಬೇಕಾಗಿದೆ ಎಂದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ ರಾವ್ ಮಾತನಾಡಿ ಬಿಜೆಪಿ ಅಧಿಕಾರಕ್ಕಾಗಿ ಜನರ ಹಕ್ಕನ್ನು ಕಸಿಯುವ ದೇಶ ದ್ರೋಹದ ಕೆಲಸ ಮಾಡಿದೆ ಇದರ ವಿರುದ್ದ ಪ್ರತಿಯೊಬ್ಬ ಪ್ರಜೆಯೂ ಧ್ವನಿ ಎತ್ತಬೇಕು ಬೂತ್ ಮಟ್ಟದಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಎಲ್ಲರೂ ಸಹಕಾರ ನೀಡಬೇಕು ಅತೀ ಹೆಚ್ಚು ಸಹಿ ಸಂಗ್ರಹ ಮಾಡಿದ ವಾಡ್೯ ಸಮಿತಿಗೆ ಪ್ರೋತ್ಸಾಹ ಬಹುಮಾನ ನೀಡಿ ಗೌರವಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ತಾಲೂಕು ಗ್ಯಾರಂಟಿ ಸಮಿತಿಯ ಅದ್ಯಕ್ಷ ಅಜಿತ್ ಹೆಗ್ಡೆ ಮಾಳ, ಕೆ.ಎಮ್.ಎಪ್ ನಿರ್ದೇಶಕ ಸುಧಾಕರ ಶೆಟ್ಟಿ ಮುಡಾರು, ಬ್ಲಾಕ್ ಕಾಂಗ್ರೆಸ್ ಉಪಾದ್ಯಕ್ಷರಾದ ಜಾರ್ಜ್ ಕ್ಯಾಸ್ಟಲಿನ್, ಕೆಡಿಪಿ ಸದಸ್ಯ ಕುಕ್ಕುಂದೂರು ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷ ರುಕ್ಮಯ್ಯ ಶೆಟ್ಟಿಗಾರ್, ಮನೋಜ್, ಚರಿತ್ರಾ ಭಂಡಾರಿ, ಪ್ರತಿಮಾ ರಾಣೆ, ಶೋಭಾ ರಾಣೆ, ರಜನಿ, ಪರಿಶಿಷ್ಟ ಘಟಕದ ಅಧ್ಯಕ್ಷ ರಾಘವ ಕುಕ್ಕುಜೆ, ರಮೇಶ್ ಕಾರ್ಕಳ ಮೊದಲಾದವರು ಉಪಸ್ಥಿತರಿದ್ದರು.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ