
ಬೆಂಗಳೂರು: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆಗಳು (Socio-Educational and Economic Surveys) ನಿಗದಿತ ಸಮಯಕ್ಕೆ ಪೂರ್ಣಗೊಳ್ಳದ ಹಿನ್ನೆಲೆಯಲ್ಲಿ, ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ ಅಕ್ಟೋಬರ್ 8 ರಿಂದ ಅಕ್ಟೋಬರ್ 18ರವರೆಗೆ ರಜೆಯನ್ನು ವಿಸ್ತರಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆದೇಶ ಹೊರಡಿಸಿದ್ದಾರೆ.
ಮಂಗಳವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಶಿಕ್ಷಣ ಸಚಿವರು ನಡೆಸಿದ ಸಭೆಯಲ್ಲಿ ಈ ಮಹತ್ವದ ನಿರ್ಧಾರಕ್ಕೆ ಬರಲಾಗಿದೆ.
ಸಭೆಯಲ್ಲಿ, ಅಕ್ಟೋಬರ್ 18ರ ಒಳಗಾಗಿ ಬಾಕಿ ಉಳಿದಿರುವ ಎಲ್ಲಾ ಸಮೀಕ್ಷಾ ಕಾರ್ಯಗಳನ್ನು ಕಡ್ಡಾಯವಾಗಿ ಪೂರ್ಣಗೊಳಿಸಲು ಸೂಕ್ತ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ಈ ಸಮೀಕ್ಷಾ ಕಾರ್ಯಗಳಿಗೆ ಶಾಲಾ ಸಿಬ್ಬಂದಿ ಮತ್ತು ಶಿಕ್ಷಕರು ಲಭ್ಯವಾಗುವಂತೆ ಮಾಡಲು ರಜೆ ವಿಸ್ತರಣೆ ನಿರ್ಧಾರ ಕೈಗೊಳ್ಳಲಾಗಿದೆ.



































