ನ. 20 ರಂದು ಕೆ.ಪಿ.ಎಸ್ ಹಿರಿಯಡಕದಲ್ಲಿ ವಾರ್ಷಿಕ ಕ್ರೀಡಾಕೂಟ 2025

Date:

spot_img

ಉಡುಪಿ: ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆ.ಪಿ.ಎಸ್.), ಹಿರಿಯಡಕದ ಪದವಿಪೂರ್ವ ಹಾಗೂ ಪ್ರೌಢಶಾಲಾ ವಿಭಾಗಗಳ ವಾರ್ಷಿಕ ಕ್ರೀಡಾಕೂಟ 2025 ಅನ್ನು ಗುರುವಾರ, ನವೆಂಬರ್ 20, 2025 ರಂದು ಆಯೋಜಿಸಲಾಗಿದೆ.

ಉದ್ಘಾಟನಾ ಸಮಾರಂಭ
ಪೂರ್ವಾಹ್ನ 9.30ಕ್ಕೆ ನಡೆಯಲಿರುವ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಪ್ರಾಂಶುಪಾಲರಾದ ಶ್ರೀ ಮಂಜುನಾಥ ಭಟ್ ವಹಿಸಲಿದ್ದಾರೆ. ಹಿರಿಯಡಕ ಪೋಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರಾದ ಶ್ರೀ ಪುನೀತ್‌ ಕುಮಾರ್ ರವರು ಪಥಸಂಚಲನ ಗೌರವ ರಕ್ಷೆ ಸ್ವೀಕರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಉಪಾದ್ಯಕ್ಷರಾದ ಶ್ರೀ ಬಿ. ಎಲ್. ವಿಶ್ವಾಸ್ , ಶ್ರೀ ಸುಂದರ ಕಾಂಚನ್ ಉದ್ಯಮಿಗಳು – ಓಂತಿಬೆಟ್ಟು , ಹಳೆ ವಿದ್ಯಾರ್ಥಿ ಸಂಘ (ರಿ) ಕೆ.ಪಿ.ಎಸ್ ಹಿರಿಯಡಕದ ಅಧ್ಯಕ್ಷರಾದ ಶ್ರೀ ಎಚ್. ಶ್ರೀನಿವಾಸ ರಾವ್ ಭಾಗವಹಿಸಲಿದ್ದಾರೆ.

ಸಮಾರೋಪ ಸಮಾರಂಭ
ಅಪರಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಉಪಪ್ರಾಂಶುಪಾಲರಾದ ಶ್ರೀ ಪ್ರಕಾಶ್ ಪ್ರಭು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಅಂತಾರಾಷ್ಟ್ರೀಯ ಕ್ರೀಡಾಪಟು ಹಾಗೂ ರಾಷ್ಟ್ರೀಯ ಪುರಸ್ಕೃತರಾದ ಶ್ರೀ ಬಾಬು ಶೆಟ್ಟಿ , ಅನ್ನಪ್ರಸಾದ ಸಮಿತಿ, ಪ.ಪೂ. ವಿಭಾಗದ ಅಧ್ಯಕ್ಷರಾದ ಶ್ರೀ ಅಶೋಕ್ ಜೋಗಿ , ಹಳೆ ವಿದ್ಯಾರ್ಥಿ ಸಂಘ (ರಿ) ಕೆ.ಪಿ.ಎಸ್ ಹಿರಿಯಡಕದ ಕಾರ್ಯದರ್ಶಿಗಳಾದ ಶ್ರೀ ಶರಶ್ಚಂದ್ರ ರವರು ಭಾಗವಹಿಸಲಿದ್ದಾರೆ.

ಈ ಕ್ರೀಡಾ ಸಂಭ್ರಮಕ್ಕೆ ಉಪಾಧ್ಯಕ್ಷರು ಮತ್ತು ಸರ್ವ ಸದಸ್ಯರು ಶಾಲಾಭಿವೃದ್ಧಿ ಸಮಿತಿ ಮತ್ತು ಮೇಲುಸ್ತುವಾರಿ ಸಮಿತಿ , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಹಳೆ ವಿದ್ಯಾರ್ಥಿ ಸಂಘ (ರಿ) , ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಅಮೃತ ಮಹೋತ್ಸವ ಸಮಿತಿ , ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕರು, ದೈಹಿಕ ಶಿಕ್ಷಣ ಶಿಕ್ಷಕರು, ಅಧ್ಯಾಪಕರು , ಸಿಬ್ಬಂದಿ ವರ್ಗ, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಮತ್ತು ವಿದ್ಯಾರ್ಥಿಗಳು ಕರ್ನಾಟಕ ಪಬ್ಲಿಕ್ ಸ್ಕೂಲ್ ಹಿರಿಯಡಕ ಆದರದ ಸ್ವಾಗತವನ್ನು ಕೋರಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ