ರಾಜ್ಯದ ಶಾಲೆಗಳ ಮಾನ್ಯತೆ ನವೀಕರಣ ಇನ್ಮುಂದೆ RTE ನಿಯಮದಡಿ ಮಾತ್ರ ನೀಡಲು ಶಿಕ್ಷಣ ಇಲಾಖೆಯಿಂದ ಸೂಚನೆ

Date:

spot_img
school11

ಬೆಂಗಳೂರು: ರಾಜ್ಯದ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಪ್ರಥಮ ಮಾನ್ಯತೆ ಮತ್ತು ಮಾನ್ಯತೆ ನವೀಕರಣಕ್ಕೆ ಸಂಬಂಧಿಸಿದಂತೆ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ. ಇನ್ಮುಂದೆ ಈ ಮಾನ್ಯತೆಯನ್ನು ಕರ್ನಾಟಕ ಶಿಕ್ಷಣ ಕಾಯ್ದೆ-1983 ಮತ್ತು ಆರ್‌.ಟಿ.ಇ ನಿಯಮ -2012 ರ ಅಡಿಯಲ್ಲಿ ಮಾತ್ರ ನೀಡಲಾಗುವುದು ಎಂದು ಇಲಾಖೆ ಸ್ಪಷ್ಟಪಡಿಸಿದೆ.

2025-26 ನೇ ಶೈಕ್ಷಣಿಕ ಸಾಲಿಗೆ ನೋಂದಣಿ ಪಡೆದು ಶಾಲೆಯನ್ನು ಪ್ರಾರಂಭ ಮಾಡುವ ಅಥವಾ ಮಾನ್ಯತೆ ನವೀಕರಿಸುವ ಎಲ್ಲಾ ಶಾಲೆಗಳಿಗೆ ಆನ್‌ಲೈನ್ ಅರ್ಜಿಯನ್ನು ಕಡ್ಡಾಯಗೊಳಿಸಲಾಗಿದೆ.

ನಿಯಮ ಮೀರುತ್ತಿದ್ದಲ್ಲಿ ನೋಂದಣಿ ರದ್ದು

ಯಾವುದೇ ಶಾಲೆಯು ನಿಗದಿತ ಅವಧಿಯೊಳಗೆ ತಂತ್ರಾಂಶದ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸಿ ನಿಯಮಾನುಸಾರ ಮಾನ್ಯತೆ ಪಡೆಯದಿದ್ದಲ್ಲಿ, ಶಾಲಾ ನೋಂದಣಿ ಪ್ರಮಾಣಪತ್ರದ ಷರತ್ತಿನಂತೆ ಶಾಲಾ ನೋಂದಣಿಯು ತಂತಾನೆ ರದ್ದಾಗುತ್ತದೆ ಎಂದು ಶಿಕ್ಷಣ ಇಲಾಖೆ ಎಚ್ಚರಿಕೆ ನೀಡಿದೆ.

ಶಾಲೆಯು ನೋಂದಣಿ ಮಾಡುವಾಗ ಆನ್‌ಲೈನ್‌ ಮೂಲಕ ಸಲ್ಲಿಸಿದ ದಾಖಲೆಗಳ ಮಾಹಿತಿಯು ತಂತಾನೆ ಪ್ರಥಮ ಮಾನ್ಯತೆ ಅರ್ಜಿಯಲ್ಲಿ ಸೆಳೆಯಲ್ಪಡುತ್ತದೆ. ಉಳಿದ ಮಾಹಿತಿ/ದಾಖಲೆಗಳನ್ನು ಮತ್ತು ವಾಯಿದೆ ಮುಗಿದ ಪ್ರಕರಣಗಳಲ್ಲಿ ಇತ್ತೀಚಿನ ದಿನಾಂಕಕ್ಕೆ ಚಾಲ್ತಿಯಲ್ಲಿರುವ ದಾಖಲೆಗಳನ್ನು ಅರ್ಜಿ ಸಲ್ಲಿಸುವ ವೇಳೆ ಅಪ್‌ಲೋಡ್ ಮಾಡುವಂತೆ ಇಲಾಖೆ ಸೂಚಿಸಿದೆ. ಈ ಹೊಸ ನಿಯಮಗಳು ರಾಜ್ಯದ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಯ್ದುಕೊಳ್ಳಲು ನೆರವಾಗಲಿವೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತದ ಮಾರುಕಟ್ಟೆಗೆ ಕಾಲಿಟ್ಟ ಬೋಟ್‌ನ ಹೊಸ ಪ್ರೀಮಿಯಂ ಹೆಡ್‌ಫೋನ್

ಬೋಟ್ ಕಂಪನಿಯು 80 ಗಂಟೆಗಳ ಬ್ಯಾಟರಿ ಹಾಗೂ 45dB ಹೈಬ್ರಿಡ್ ANC ಬೆಂಬಲಿಸುವ ಪ್ರೀಮಿಯಂ ನಿರ್ವಾಣ ಯುಟೋಪಿಯಾ 2 ಹೆಡ್‌ಫೋನ್ ಭಾರತದಲ್ಲಿ ಬಿಡುಗಡೆ ಮಾಡಿದೆ.

ದಿನ ವಿಶೇಷ – ಆದಾಯ ತೆರಿಗೆ ದಿನ

ಭಾರತದಲ್ಲಿ ಪ್ರತಿ ವರ್ಷ ಜುಲೈ 24 ರಂದು ಆದಾಯ ತೆರಿಗೆ ದಿನವನ್ನು ಆಚರಿಸಲಾಗುತ್ತದೆ. ಇದರ ಇತಿಹಾಸ, ಪ್ರಾಮುಖ್ಯತೆ ಮತ್ತು ITR ಸಲ್ಲಿಕೆಯ ಕುರಿತು ವಿವರ ಇಲ್ಲಿದೆ.

ನಿಮ್ಮ ಅಡುಗೆಮನೆಯಲ್ಲಿರುವ ಈ ಒಂದು ಎಣ್ಣೆ ನೂರಾರು ಕಾಯಿಲೆಗಳಿಗೆ ಮನೆಮದ್ದು: ಕ್ಯಾಸ್ಟರ್ ಆಯಿಲ್ ಬಳಸುವ ಸರಿಯಾದ ವಿಧಾನ ಇಲ್ಲಿದೆ.

ಹರಳೆಣ್ಣೆಯ ಆರೋಗ್ಯಕರ ಪ್ರಯೋಜನಗಳು, ಕೂದಲ ರಕ್ಷಣೆ ಮತ್ತು ಮಲಬದ್ಧತೆಗೆ ಇದನ್ನು ಬಳಸುವ ಸರಿಯಾದ ವಿಧಾನಗಳ ಕುರಿತು ಇಲ್ಲಿದೆ ಪೂರ್ಣ ಮಾಹಿತಿ.

ಉದ್ಯಮಿ ಸಂಪತ್‌ ಶೆಟ್ಟಿಗೆ ಪ್ರತಿಷ್ಠಿತ ಧರ್ಮಯೋಗಿ ಪುರಸ್ಕಾರ

ಗ್ರಾಮೀಣ ಉದ್ಯಮಿ ಮಂದಾರ್ತಿ ಸಂಪತ್ ಶೆಟ್ಟಿ ಅವರಿಗೆ ಮುದ್ರಾಡಿಯಲ್ಲಿ ಧರ್ಮಯೋಗಿ ಸನ್ಮಾನ ಪ್ರಶಸ್ತಿ ಘೋಷಣೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ