ವಿಮಾನ ದುರಂತದಲ್ಲಿ ಮೃತಪಟ್ಟ ನರ್ಸ್‌ ಮೇಲೆ ಅವಾಚ್ಯ ಪೋಸ್ಟ್ – ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಅಮಾನತು

Date:

spot_img

ಕಾಸರಗೋಡು : ಅಹ್ಮದಾಬಾದ್ ವಿಮಾನ ದುರಂತದಲ್ಲಿ ಮೃತಪಟ್ಟ ಕೇರಳದ ನರ್ಸ್‌ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ನಿಂದನೆ ಹಾಗೂ ಜಾತಿ ಆಧಾರಿತ ಟೀಕೆಗಳನ್ನು ಮಾಡಿದ್ದ ಹಿನ್ನೆಲೆಯಲ್ಲಿ ಕಾಸರಗೋಡು ಡೆಪ್ಯುಟಿ ತಹಶೀಲ್ದಾರ್ ಪವಿತ್ರನ್ ಅವರನ್ನು ಅಮಾನತು ಮಾಡಲಾಗಿದೆ.

ಮೃತ ಮಹಿಳೆ ಪತ್ತನಂತಿಟ್ಟ ಜಿಲ್ಲೆಯ ರಂಜಿತಾ ನಾಯರ್, ಲಂಡನ್‌ನ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಅಹ್ಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಬೋಯಿಂಗ್ ವಿಮಾನ ಪತನಗೊಂಡಿದ್ದು, ಈ ದುರಂತದಲ್ಲಿ ರಂಜಿತಾ ಸಾವಿಗೀಡಾಗಿದ್ದರು. ಈ ಕುರಿತು ಪವಿತ್ರನ್ ತಮ್ಮ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅಣಕಾತ್ಮಕ ಹಾಗೂ ಅವಹೇಳನಕಾರಿ ಪೋಸ್ಟ್ ಹಾಕಿ, ಮಹಿಳೆಯ ಜಾತಿಯನ್ನು ನಿಂದಿಸಿರುವುದು ಗೊತ್ತಾಗುತ್ತಿದ್ದಂತೆಯೇ, ಈ ಪೋಸ್ಟ್‌ಗಳು ವೈರಲ್ ಆಗಿ ಭಾರೀ ಆಕ್ರೋಶವನ್ನು ಹುಟ್ಟುಹಾಕಿದವು.

ಸ್ಥಳೀಯ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆಯೇ, ವೆಳ್ಳರಿಕುಂಡು ತಾಲೂಕು ಡೆಪ್ಯುಟಿ ತಹಶೀಲ್ದಾರ್ ಆಗಿದ್ದ ಪವಿತ್ರನ್ ಅವರನ್ನು ಪೊಲೀಸರು ವಶಕ್ಕೆ ಪಡೆದು, ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ. ಇದೇ ವೇಳೆ ಕಂದಾಯ ಸಚಿವ ಕೆ. ರಾಜನ್ ಅವರ ಆದೇಶದ ಮೇರೆಗೆ, ಪವಿತ್ರನ್ ಅವರನ್ನು ಅಧಿಕಾರದಿಂದ ಅಮಾನತು ಮಾಡಲಾಗಿದೆ.ಈ ಪ್ರಕರಣವು ಗಂಭೀರವಾಗಿದೆ ಎಂಬ ಕಾರಣದಿಂದ ತಕ್ಷಣದ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಲ್ಲದೇ, ಇದೇ ಪವಿತ್ರನ್ ಅವರು ಈ ಹಿಂದೆ ಶಾಸಕ ಇ. ಚಂದ್ರಶೇಖರನ್ ಅವರ ವಿರುದ್ಧವೂ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲೂ ಅಮಾನತಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಭಾರತೀಯ ಗೇಮಿಂಗ್ ಪ್ರಿಯರಿಗೆ ಶುಭಸುದ್ದಿ: ಮಾರುಕಟ್ಟೆಗೆ ಲಗ್ಗೆ ಇಟ್ಟ ಡೆಲ್‌ನ ಶಕ್ತಿಶಾಲಿ ಏಲಿಯನ್‌ವೇರ್ ಲ್ಯಾಪ್‌ಟಾಪ್‌ಗಳು

ಡೆಲ್ ಭಾರತದಲ್ಲಿ ಹೊಸ ಏಲಿಯನ್‌ವೇರ್ ಗೇಮಿಂಗ್ ಲ್ಯಾಪ್‌ಟಾಪ್‌ಗಳನ್ನು ಬಿಡುಗಡೆ ಮಾಡಿದೆ. ನೂತನ ಬೆಲೆ, ಡಿಸ್ಪ್ಲೇ ಮತ್ತು ಪ್ರೊಸೆಸರ್ ವೈಶಿಷ್ಟ್ಯಗಳ ವಿವರ ಇಲ್ಲಿದೆ.

ದಿನ ವಿಶೇಷ – ರಾಷ್ಟ್ರೀಯ ಧ್ವಜ ದತ್ತು ದಿನ

ಪ್ರತಿ ವರ್ಷ ಜುಲೈ 22 ರಂದು ಭಾರತದ ರಾಷ್ಟ್ರೀಯ ಧ್ವಜ ದತ್ತು ದಿನವನ್ನು ಆಚರಿಸಲಾಗುತ್ತದೆ. ತಿರಂಗಾ ಧ್ವಜದ ಇತಿಹಾಸ, ವಿನ್ಯಾಸ ಮತ್ತು ಮಹತ್ವದ ಸಂಪೂರ್ಣ ವಿವರ ಇಲ್ಲಿದೆ.

ಸೂಪರ್‌ಫುಡ್ ಪೀಚ್: ಪ್ರತಿದಿನ ಈ ಒಂದು ಹಣ್ಣು ತಿಂದರೆ ಹೃದಯ, ಕಣ್ಣುಗಳಿಗೆ ಎಷ್ಟು ಲಾಭ ಗೊತ್ತಾ?

ನಿತ್ಯ ಪೀಚ್ ಹಣ್ಣು ಸೇವಿಸುವುದರಿಂದ ಲಭಿಸುವ ಆರೋಗ್ಯಕಾರಿ ಲಾಭಗಳು, ರೋಗನಿರೋಧಕ ಶಕ್ತಿ, ಹೃದಯದ ಭದ್ರತೆ ಹಾಗೂ ಕಣ್ಣಿನ ದೃಷ್ಟಿ ಹೆಚ್ಚಿಸುವ ವಿವರ ಇಲ್ಲಿದೆ.

ತುಳುವ ಮಹಾಸಭೆ ಉಡುಪಿ ಅಧ್ಯಕ್ಷರಾಗಿ ಉದಯ ಕುಮಾರ್ ಹೆಗ್ಡೆ ಆಯ್ಕೆ

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಉಡುಪಿ ಜಿಲ್ಲಾ ಅಧ್ಯಕ್ಷರಾಗಿ ಯರ್ಲಪಾಡಿ ಉದಯ ಕುಮಾರ್ ಹೆಗ್ಡೆ ಆಯ್ಕೆಯಾಗಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ