spot_img

ನೇಣು ಬಿಗಿದ ಸ್ಥಿತಿಯಲ್ಲಿದ್ದ ಸಹೋದರಿಯನ್ನು ಆಸ್ಪತ್ರೆಗೆ ಸಾಗಿಸುವಾಗ ಅಪಘಾತ: ಎಂಬಿಬಿಎಸ್ ವಿದ್ಯಾರ್ಥಿನಿ ದುರ್ಮರಣ

Date:

spot_img
spot_img

ಕಾಸರಗೋಡು: ಬೇತೂರುಪಾರ ಸಮೀಪ ಬುಧವಾರ ಬೆಳಿಗ್ಗೆ ನಡೆದ ಆಘಾತಕಾರಿ ಅಪಘಾತದಲ್ಲಿ, ಖಾಸಗಿ ಆಸ್ಪತ್ರೆಯ ಅಂತಿಮ ವರ್ಷದ ಎಂ.ಬಿ.ಬಿ.ಎಸ್ ವಿದ್ಯಾರ್ಥಿನಿ, ಬೇಡಡ್ಕ ಬೇತೂರುಪಾರ ತಚ್ಚಾರ್ ಕುಂಡುವಿನ ಮಹಿಮಾ (19) ಮೃತಪಟ್ಟಿದ್ದಾರೆ.

ಮಹಿಮಾ ಅವರು ಬೆಳಿಗ್ಗೆ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಅವರ ಸಹೋದರ ಮಹೇಶ್ ಕಾರಿನಲ್ಲಿ ಕಾಸರಗೋಡಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಮನೆಯಿಂದ ಕೇವಲ ಒಂದು ಕಿಲೋಮೀಟರ್ ಅಂತರದಲ್ಲಿ ಕಾರು ಅಪಘಾತಕ್ಕೀಡಾಗಿದೆ.

ಸ್ಥಳೀಯರು ಕೂಡಲೇ ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಮಹಿಮಾ ಆಗಲೇ ಮೃತಪಟ್ಟಿರುವುದನ್ನು ವೈದ್ಯರು ದೃಢಪಡಿಸಿದ್ದಾರೆ. ಸಹೋದರ ಮಹೇಶ್ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

ಮೃತದೇಹವನ್ನು ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರದಲ್ಲಿರಿಸಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಸಂಬಂಧಿಕರಿಗೆ ಹಸ್ತಾಂತರಿಸಲಾಗುವುದು.

ವಿದ್ಯಾರ್ಥಿನಿ ನೇಣು ಬಿಗಿದ ಘಟನೆ ಮತ್ತು ನಂತರ ನಡೆದ ಅಪಘಾತದ ಬಗ್ಗೆ ಬೇಡಡ್ಕ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ. ಮಹಿಮಾ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಕಾರಣದಿಂದ ಮೃತಪಟ್ಟರೇ ಅಥವಾ ಅಪಘಾತದಿಂದ ಸಾವನ್ನಪ್ಪಿರುವ ಸಾಧ್ಯತೆ ಇದೆಯೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷಾ ವರದಿ ಲಭಿಸಿದ ಬಳಿಕ ಸ್ಪಷ್ಟಗೊಳ್ಳಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ನಿಟ್ಟೆಯಲ್ಲಿ ನಡೆದ ಕೇಶದಾನ

ಕ್ಯಾನ್ಸರ್ ರೋಗಿಗಳಿಗೆ ನೆರವಾಗಲು ನಿಟ್ಟೆ ಕಾಲೇಜಿನಿಂದ 'ಕೇಶ ದಾನ' ಅಭಿಯಾನ ನಡೆಯಿತು.

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , ‘ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು’ ಎಂದು ಸ್ಪಷ್ಟನೆ ನೀಡಿದ ಸಚಿವ ಪ್ರಿಯಾಂಕ್‌ ಖರ್ಗೆ

ಆರ್‌ಎಸ್‌ಎಸ್‌ ಪ್ರಶ್ನಿಸಿದ್ದಕ್ಕೆ ನಿಂದನಾ ಕರೆಗಳ ಹಿನ್ನಲೆ , 'ಬೆದರಿಕೆಗಳಿಂದ ನನ್ನ ಬಾಯಿ ಮುಚ್ಚಿಸಲಾಗದು' ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಸ್ಪಷ್ಟನೆ ನೀಡಿದ್ದಾರೆ.

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್: 2025-26 ರ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ

ಕಾರ್ಕಳ ಕ್ರಿಕೆಟ್ ಅಸೋಸಿಯೇಷನ್ 2025-26 ರ ಸಾಲಿನ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದೆ .

ವೈದ್ಯೆ ಪತ್ನಿಗೆ ಇಂಜೆಕ್ಷನ್ ನೀಡಿ ಕೊಲೆ: 6 ತಿಂಗಳ ನಂತರ ವೈದ್ಯ ಪತಿ ಡಾ. ಮಹೇಂದ್ರರೆಡ್ಡಿ ಬಂಧನ

ವೈದ್ಯೆಯಾಗಿದ್ದ ಪತ್ನಿಗೆ ಇಂಜೆಕ್ಷನ್ ನೀಡಿ ಹತ್ಯೆಗೈದಿದ್ದ ಆರೋಪಿ ಡಾಕ್ಟರ್‌ ಈಗ ಪೊಲೀಸರ ಅತಿಥಿಯಾಗಿದ್ದಾರೆ.