ವೈರಲ್ ವಿಡಿಯೋ ಹಾವಳಿ: ಬಸ್ಸಿನಲ್ಲಿ ದೌರ್ಜನ್ಯದ ಆರೋಪ ಹೊತ್ತಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು!

Date:

spot_img

ಸಾಮಾಜಿಕ ಜಾಲತಾಣದ “ರೀಲ್ಸ್” ಹುಚ್ಚು ಮತ್ತು ಆತುರದ ನಿರ್ಧಾರಗಳು ಇಂದು ಒಬ್ಬ ಅಮಾಯಕನ ಪ್ರಾಣವನ್ನೇ ಬಲಿಪಡೆದಿವೆ. ಜನದಟ್ಟಣೆಯ ಬಸ್ಸಿನಲ್ಲಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಯುವತಿಯೊಬ್ಬಳು ಹರಿಬಿಟ್ಟ ವಿಡಿಯೋದಿಂದ ಮನನೊಂದ ವ್ಯಕ್ತಿಯೊಬ್ಬರು ನೇಣಿಗೆ ಶರಣಾಗಿದ್ದಾರೆ.

ಕೋಝಿಕ್ಕೋಡ್‌ನ ಗೋವಿಂದಪುರಂ ನಿವಾಸಿ ದೀಪಕ್ (40) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ದೀಪಕ್, ಕಳೆದ ಶುಕ್ರವಾರ ಪಯ್ಯನ್ನೂರು ಕಡೆಯಿಂದ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್ಸಿನಲ್ಲಿ ಅತಿಯಾದ ಜನದಟ್ಟಣೆ ಇತ್ತು. ಅದೇ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಯುವತಿಯೊಬ್ಬಳು, ದೀಪಕ್ ಉದ್ದೇಶಪೂರ್ವಕವಾಗಿ ತನ್ನನ್ನು ಕೆಟ್ಟದಾಗಿ ಸ್ಪರ್ಶಿಸುತ್ತಿದ್ದಾನೆ ಎಂದು ಆರೋಪಿಸಿ ರಹಸ್ಯವಾಗಿ ವಿಡಿಯೋ ಮಾಡಿದ್ದಾಳೆ.

ಅಷ್ಟಕ್ಕೇ ನಿಲ್ಲದ ಆಕೆ, ಆ 18 ಸೆಕೆಂಡುಗಳ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾಳೆ. ಕೇವಲ 1 ದಿನದಲ್ಲಿ ಈ ವಿಡಿಯೋ 20 ಲಕ್ಷಕ್ಕೂ ಹೆಚ್ಚು ಬಾರಿ ವೀಕ್ಷಣೆಯಾಗಿದ್ದು, ನೆಟ್ಟಿಗರು ದೀಪಕ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದರು. ಸಾರ್ವಜನಿಕವಾಗಿ ಎದುರಾದ ಈ ಅವಮಾನ ಮತ್ತು ಸಾಮಾಜಿಕ ಮಾಧ್ಯಮಗಳ “ವಿಚಾರಣೆ”ಯಿಂದ ದೀಪಕ್ ತೀವ್ರ ಮಾನಸಿಕ ಹಿಂಸೆ ಅನುಭವಿಸಿದ್ದರು. ತಾವು ಯಾವುದೇ ತಪ್ಪು ಮಾಡಿಲ್ಲ ಎಂದು ಆಪ್ತರ ಬಳಿ ಹೇಳಿಕೊಂಡಿದ್ದ ದೀಪಕ್, ರವಿವಾರ ಮುಂಜಾನೆ ತಮ್ಮ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಈಗ ಈ ವಿಷಯವು ಕೇರಳದಾದ್ಯಂತ ಭಾರಿ ಚರ್ಚೆಗೆ ನಾಂದಿ ಹಾಡಿದೆ. “ಪಬ್ಲಿಸಿಟಿಗಾಗಿ ಯುವತಿ ಮಾಡಿದ ವಿಡಿಯೋ ಒಬ್ಬನ ಜೀವ ತೆಗೆದಿದೆ” ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಕೋಝಿಕ್ಕೋಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

share this
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img
spot_img

Popular

More like this
Related

ಡಾ. ಶಿವಪ್ರಸಾದ್ ಶೆಟ್ಟಿಗೆ ಎನ್‌ಸಿಸಿ ತರಬೇತಿಯಲ್ಲಿ ಪ್ರಥಮ ಸ್ಥಾನ

ನಿಟ್ಟೆ ಸಂಸ್ಥೆಯ ಎನ್‌ಸಿಸಿ ಅಧಿಕಾರಿ ಡಾ. ಶಿವಪ್ರಸಾದ್ ಶೆಟ್ಟಿ ಮಹಾರಾಷ್ಟ್ರದ ಕಾಮ್ಟೀ ತರಬೇತಿಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ಉಡುಪಿ ಪ್ರವಾಸೋದ್ಯಮ ಮ್ಯಾಸ್ಕಾಟ್ ಸ್ಪರ್ಧೆ: ನಿಟ್ಟೆಯಲ್ಲಿ ಜುಲೈ 25ಕ್ಕೆ ಆಯೋಜನೆ

ಉಡುಪಿ ಪ್ರವಾಸೋದ್ಯಮದ ಅಧಿಕೃತ ಮ್ಯಾಸ್ಕಾಟ್ ವಿನ್ಯಾಸ ಸ್ಪರ್ಧೆ ಜುಲೈ 25ರಂದು ನಿಟ್ಟೆಯಲ್ಲಿ ನಡೆಯಲಿದೆ. ಭಾಗವಹಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ.

ಮಳೆಗಾಲದ ಜ್ವರ, ಸಾಂಕ್ರಾಮಿಕ ರೋಗ ತಡೆಗೆ ರಾಜ್ಯ ಸರ್ಕಾರ ಸನ್ನದ್ಧ

ಮಳೆಗಾಲದಲ್ಲಿ ವೈರಲ್ ಜ್ವರ ಮತ್ತು ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಭಾರಿ ಸಿದ್ಧತೆ ನಡೆಸಿದೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ

ನೀಟ್ ಅಕ್ರಮ: ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ನೀಟ್‌ ಪರೀಕ್ಷೆ ಅಕ್ರಮ ಖಂಡಿಸಿ ದೇಶಾದ್ಯಂತ ಪ್ರತಿಭಟನೆ. ಕೇಂದ್ರ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಪೂರ್ಣ ಮಾಹಿತಿ ಇಲ್ಲಿದೆ ಓದಿ.